ಬೆಂಗಳೂರು – ವಿಧಾನಸಭಾ ಚುನಾವಣೆ ಹೊತ್ತಲ್ಲೇ ರಾಜ್ಯದಲ್ಲಿ ಝಣ ಝಣ ಕಾಂಚಾಣಾದ ಕುಣಿತ ಜೋರಾಗಿದೆ.
ಹಲವೆಡೆ ವ್ಯಾಪಕ ಪ್ರಮಾಣದಲ್ಲಿ ಹಣ,ಒಡವೆ, ಮೊದಲಾದ ಉಡುಗೊರೆ ಗಳು ಜನರನ್ನು ತಲುಪುತ್ತಿವೆ.
ಚುನಾವಣೆ ಆಯೋಗ ಅಕ್ರಮ ತಡೆಗಟ್ಟಲು ಕಟ್ಟುನಿಟ್ಟಿನ ಸೂಚನೆ ನೀಡಿದ ಹಿನ್ನೆಲೆಯಲ್ಲಿ
ರಾಜ್ಯಾದ್ಯಂತ ಪೊಲೀಸ್ ರು ಚೆಕ್ ಪೋಸ್ಟ್ ಗಳನ್ನು ನಿರ್ಮಾಣ ಮಾಡಿದ್ದಾರೆ. ಇಲ್ಲಿ ಎಲ್ಲಾ ವಾಹನಗಳು,ಅನುಮಾನಾಸ್ಪದ ವ್ಯಕ್ತಿಗಳ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದಾರೆ.
ಈ ರೀತಿಯಲ್ಲಿ ನಿಗಾ ವಹಿಸಿದ ಹಿನ್ನೆಲೆಯಲ್ಲಿ ದಾಖಲೆಯಿಲ್ಲದ ಲಕ್ಷಾಂತರ ರೂಪಾಯಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕುಂದಾನಗರಿ ಬೆಳಗಾವಿ ಜಿಲ್ಲೆಯ ಹಲವೆಡೆ ಹಣದ ವಹಿವಾಟು ಜೋರಾಗಿ ನಡೆಯುತ್ತಿದೆ .
ಕಳೆದೆರಡು ದಿನಗಳ ಅವಧಿಯಲ್ಲಿ ದಾಖಲೆ ಇಲ್ಲದೆ ತೆಗೆದುಕೊಂಡು ಹೋಗುತ್ತಿದ್ದ 13 ಲಕ್ಷ ರೂಪಾಯಿ ಹಣವನ್ನು ಖಚಿತ ಮಾಹಿತಿ ಮೇರೆಗೆ ಬೆಳಗಾವಿ ಮಾರ್ಕೆಟ್ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಹುಕ್ಕೇರಿ ತಾಲೂಕಿನ ಬುಗಟೆ ಆಲೂರು ಚೆಕ್ ಪೋಸ್ಟ್ನಲ್ಲಿ 1.9 ಲಕ್ಷ ರೂ. ಜಪ್ತಿ ಮಾಡಿದ್ದಾರೆ. ರಾಯಬಾಗ ತಾಲೂಕಿನ ಹಾರೂಗೇರಿ ಚೆಕ್ ಪೋಸ್ಟ್ನಲ್ಲಿ 4 ಲಕ್ಷ ರೂ. ಹಾಗೂ ಅಥಣಿ ತಾಲೂಕಿನಲ್ಲಿ 3.45 ಲಕ್ಷ ರೂ. ಅನ್ನು ವಶಕ್ಕೆ ಪಡೆಯಲಾಗಿದೆ.
ಗದಗ ನಗರದ ಹೊರವಲಯದ ದಂಡಿನ್ ದುರ್ಗಮ್ಮ ದೇವಸ್ಥಾನ ಬಳಿಯ ಚೆಕ್ ಪೋಸ್ಟ್ನಲ್ಲಿ ದಾಖಲೆ ಇಲ್ಲದ 4.43 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಕಲಬುರಗಿ ಜಿಲ್ಲೆಯ ಕಿಣ್ಣಿಸಡಕ್ ಚೆಕ್ ಪೋಸ್ಟ್ ಬಳಿ 1.4 ಕೋಟಿ ರೂಪಾಯಿ ವಶಕ್ಕೆ ಪಡೆದರೆ ಜೇವರ್ಗಿ ಚೆಕ್ ಪೋಸ್ಟ್ ನಲ್ಲಿ 50 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ.
ಚಿಕ್ಕಮಗಳೂರಿನ ತರೀಕೆರೆಯ ಬಳಿ
ದಾಖಲೆ ಇಲ್ಲದೆ ಪಿಕಪ್‌ನಲ್ಲಿ ಸಾಗಿಸುತ್ತಿದ್ದ 2. 30 ಕೋಟಿ ರೂ ಮೌಲ್ಯದ 9 ಕೆ.ಜಿ. 300 ಗ್ರಾಂ ಚಿನ್ನವನ್ನು ಜಿಲ್ಲಾ ಪೊಲೀಸರು ಜಪ್ತಿ ಮಾಡಿದ್ದಾರೆ.
ಜಿಲ್ಲಾದ್ಯಂತ ಗಡಿಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ನಿರ್ಮಿಸಿ ತಪಾಸಣೆ ನಡೆಸಲಾಗುತ್ತಿದೆ. ಅದೇ ರೀತಿ ತರೀಕೆರೆ ಪಟ್ಟಣದ ಪೊಲೀಸ್ ಚೆಕ್ ಪೋಸ್ಟ್ ಬಳಿ ತಪಾಸಣೆ ನಡೆಸಿದಾಗ ಇಬ್ಬರು ವ್ಯಕ್ತಿಗಳು ಪಿಕಪ್‌ನಲ್ಲಿ ನಾಲ್ಕು ಬಾಕ್ಸ್ ಚಿನ್ನ ಅಕ್ರಮ ಸಾಗಾಟ ಮಾಡುತ್ತಿರುವುದು ಕಂಡುಬಂದಿದೆ.
ಪಿಕಪ್ ವಾಹನದಲ್ಲಿ ಚಿನ್ನದ ಸರಗಳು ಹಾಗೂ ಚಿನ್ನದ ಬಿಸ್ಕತ್‌ಗಳು ಪತ್ತೆಯಾಗಿದೆ.
ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಿ ಪಿಕಪ್ ವಾಹನ ಸವಾರ ಸೇರಿದಂತೆ ಇಬ್ಬರನ್ನು ವಶಕ್ಕೆ ಪಡೆದು ಮಾಹಿತಿ ಸಂಗ್ರಹಿಸಿದ್ದಾರೆ.
ಇದನ್ನು ಹೊರತುಪಡಿಸಿ ರಾಜಕಾರಣಿಗಳಿಗೆ ಸೇರಿದ ಸಾವಿರಾರು ಸೀರೆ,ಕುಕ್ಕರ್, ಪುಡ್ ಕಿಟ್,ಮಿಕ್ಸಿ ಮೊದಲಾದ ಗೃಹೋಪಯೋಗಿ ಉಪಕರಣಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ
ಚುನಾವಣೆ ಘೋಷಣೆ ನಂತರ ಇವುಗಳು ಮತ್ತಷ್ಟು ಹೆಚ್ಚಲಿದ್ದು,ಪೊಲೀಸ್ ನಿಗಾ ಪ್ರಮಾಣವೂ ಹೆಚ್ಚಾಗಲಿದೆ.
ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
Previous Articleಉಮೇಶ್ ಕತ್ತಿ ಸೋದರನಿಗೆ Congress ಗಾಳ
Next Article ರಾಹುಲ್ ಗಾಂಧಿ Disqualified