ಬೆಂಗಳೂರು, ಮೇ 29:
ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು
ಕಲುಷಿತಗೊಂಡು ಹಲವಾರು ಸಮಸ್ಯೆ ಸೃಷ್ಟಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಈ ಬಗ್ಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಈ ಕುರಿತಂತೆ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಎಲ್ಲಾ ಇಂಜಿನಿಯರ್ ಗಳಿಗೆ ಪತ್ರ ಬರೆದಿದ್ದಾರೆ.
ಕುಡಿಯುವ ನೀರು ಕಲುಷಿಗೊಳ್ಳುವ
ಪ್ರಕರಣಗಳು ಪುನಾರಾವರ್ತನೆಯಾಗುತ್ತಿದ್ದು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳದೇ ಇರುವ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಿ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಗ್ರಾಮೀಣ ಜನವಸತಿ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವುದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮತ್ತು ಆಯಾ ಗ್ರಾಮ ಪಂಚಾಯತಿ ಆದ್ಯ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ.
ಇತ್ತೀಚಿನ ದಿನಗಳಲ್ಲಿ ರಾಜ್ಯದ ಕೆಲವು ಜಿಲ್ಲೆಗಳ ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಕಲುಷಿತ ನೀರು ಸೇವನೆಯಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದಲ್ಲದೇ ಪ್ರಾಣಹಾನಿಗಳು ಕೂಡಾ ಸಂಭವಿಸಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.
ಇಂತಹ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳಿಗೆ ಇಲಾಖೆಯಿಂದ ಕಾಲಕಾಲಕ್ಕೆ ನಿರ್ದೇಶನಗಳನ್ನು ನೀಡಲಾಗಿದ್ದರೂ ಸಹಾ ಕೆಲವು ಪ್ರದೇಶಗಳಲ್ಲಿ ಕಲುಷಿತ ನೀರು ಸೇವನೆಯಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಪುನರಾವರ್ತನೆಯಾಗುತ್ತಿರುವುದು ಹೆಚ್ಚಾಗಿ ಕಂಡು ಬಂದಿದೆ ಎಂದೂ ಸಚಿವರು ಪತ್ರದಲ್ಲಿ ತಿಳಿಸಿದ್ದಾರೆ.
ಕುಡಿಯುವ ನೀರಿನ ಸರಬರಾಜಿಗಾಗಿ ಅಳವಡಿಸಿರುವ ಕೊಳವೆಗಳಲ್ಲಿ ಮಳೆ ನೀರು, ಚರಂಡಿ ನೀರು ಮತ್ತು ಇತರೆ ಕಲುಷಿತ ನೀರು ಸೇರುತ್ತಿರುವುದರಿಂದ ಮತ್ತು ನೀರಿನ ಶೇಖರಣೆ ಮಾಡುವ ಕಿರು ನೀರು ಸರಬರಾಜು ಮಾಡುವ ನೀರಿನ ತೊಟ್ಟಿಗಳು ಹಾಗೂ ಜಲಾಗಾರಗಳನ್ನು ಕಾಲಕಾಲಕ್ಕೆ ಸರಿಯಾಗಿ ಸ್ವಚ್ಚಗೊಳಿಸುವುದು, ಹಾಗೂ ಕ್ಲೋರಿನೇಷನ್ ಕೈಗೊಳ್ಳುವುದು ಮತ್ತು ನೀರಿನ ಮೂಲಗಳಾದ ಕೊಳವೆ ಬಾವಿಗಳ ಸುತ್ತಮುತ್ತಲೂ ನಿಲ್ಲುವ ಕೊಳಚೆ ನೀರನ್ನು ಸ್ವಚ್ಛಗೊಳಿಸುವುದು ಮುಂತಾದ ಮುಂಜಾಗರೂಕತಾ ಕ್ರಮಗಳ ಮೂಲಕ ನೀರಿನ ಮೂಲಗಳಿಗೆ ಕಲುಷಿತ ನೀರು ಸೇರದಂತೆ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ನೀರು ಸರಬರಾಜು ವ್ಯವಸ್ಥೆಯಡಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಕಾಲ ಕಾಲಕ್ಕೆ ಮೇಲ್ವಿಚಾರಣೆ ನಡೆಸಲು ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ಥಿ ಕಾರ್ಯಗಳನ್ನು ಕೈಗೊಳ್ಳಲು ಸೂಚಚನೆ ನೀಡಿರುವ ಅವರು ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷತನದಿಂದ ಪ್ರಕರಣಗಳು ಪುನಾರಾವರ್ತನೆ ಆದಲ್ಲಿ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
Previous Articleವಿನಾಶಕಾರಿ ಭೂಕುಸಿತದ ಹಿನ್ನೆಲೆಯಲ್ಲಿ ಭಾರತವು ಪಪುವಾ ನ್ಯೂಗಿನಿಯಾಕ್ಕೆ US $ 1 ಮಿಲಿಯನ್ ಮೌಲ್ಯದ ತಕ್ಷಣದ ಪರಿಹಾರ ಸಹಾಯವನ್ನು ಘೋಷಿಸಿದೆ
Next Article ವಿಮಾನ ನಿಲ್ದಾಣದಲ್ಲಿ ಕಿಡಿಗೇಡಿಗಳ ಕಾಟ.
1 ಟಿಪ್ಪಣಿ
[url=https://saudabdulhamidar.biz]https://www.saudabdulhamidar.biz[/url]
last news about saud abdulhamid
http://www.saudabdulhamidar.biz