ಬೆಂಗಳೂರು, ಆ.2:
ಪಶ್ಚಿಮ ಘಟ್ಟ ಅರಣ್ಯ ಪ್ರದೇಶದಲ್ಲಿ ಪ್ರವಾಸೋದ್ಯಮ ಹೆಸರಲ್ಲಿ ತಲೆ ಎತ್ತಿರುವ ಅನಧಿಕೃತ ಹೋಂ ಸ್ಟೇ ಹಾಗೂ ರೆಸಾರ್ಟ್ ಗಳನ್ನು ತೆರವುಗೊಳಿಸಲು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.
ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿರುವ ಸಚಿವರು, ಪಶ್ಚಿಮ ಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ ಮತ್ತು ರೆಸಾರ್ಟ್ ಗಳ ವಿರುದ್ಧ ಕ್ರಮ ಕೈಗೊಳ್ಳಲು, ಮತ್ತು ಅರಣ್ಯ ಒತ್ತುವರಿಯನ್ನು ತಕ್ಷಣದಿಂದಲೇ ತೆರವುಗೊಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮತ್ತು 1 ತಿಂಗಳೊಳಗೆ ಕೈಗೊಂಡ ಕ್ರಮದ ವಿವರದೊಂದಿಗೆ ಕಡತದಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.
ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದಲ್ಲಿ 2015ರಿಂದೀಚೆಗೆ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ನಿರ್ದೇಶಿಸಿದ್ದಾರೆ
ರಾಜ್ಯದ ಶಿರೂರು ಬಳಿ ಸಂಭವಿಸಿದ ಗುಡ್ಡ ಕುಸಿತದಲ್ಲಿ 11 ಅಮೂಲ್ಯ ಜೀವಗಳು ಬಲಿಯಾಗಿದ್ದರೆ, ನೆರೆ ರಾಜ್ಯ ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಗುಡ್ಡ ಕುಸಿತದಲ್ಲಿ 250 ಮುಗ್ಧ ಜನರು ಮೃತಪಟ್ಟಿದ್ದು, 200ಕ್ಕೂ ಹೆಚ್ಚು ಜನರು ಕಣ್ಮರೆಯಾಗಿರುವುದು ಅತ್ಯಂತ ನೋವಿನ ಸಂಗತಿ. ಈ ದುರಂತಗಳು ನಮಗೂ ಎಚ್ಚರಿಕೆಯ ಗಂಟೆಯಾಗಿದ್ದು, ಪಶ್ಚಿಮ ಘಟ್ಟದ ಉಳಿವು ಹಿಂದೆಂಗಿಂತಲೂ ಇಂದು ಹೆಚ್ಚಾಗಿದೆ ಎಂದು ಹೇಳಿದ್ದಾರೆ.
ಸ್ವಾಭಾವಿಕ, ಪ್ರಕೃತಿ ದತ್ತವಾದ ಪಶ್ಚಿಮ ಘಟ್ಟದ ಗುಡ್ಡಗಳು ಮತ್ತು ಶೋಲಾ ಅರಣ್ಯಗಳ ತಲೆ ಕಡಿದು ಕಾಫಿ ತೋಟ, ಮನೆ, ಹೋಂಸ್ಟೇ, ರೆಸಾರ್ಟ್ ಮಾಡುತ್ತಿರುವುದರಿಂದ ಹಾಗೂ ಬೇರಿನಿಂದ ಗಟ್ಟಿಯಾಗಿ ಮಣ್ಣು ಹಿಡಿದಿಡುವ ಬೃಹತ್ ಮರಗಳ ಕಡಿತಲೆ, ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸಿ ನಿರ್ಮಿಸುವ ರಸ್ತೆಗಳಿಂದ ಇಂತಹ ದುರಂತ ಮರುಕಳಿಸುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದೂ ತಮ್ಮ ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.
ಗಿರಿ ಮತ್ತು ಘಟ್ಟ ಪ್ರದೇಶದಲ್ಲಿ ವಿಪರೀತ ವಾಹನಗಳ ಸಂಚಾರದಿಂದಲೂ ಅಪಾಯ ಎದುರಾಗುತ್ತಿದೆ. ವಾರಾಂತ್ಯದಲ್ಲಿ ಪ್ರವಾಸ, ಚಾರಣದ ಹೆಸರಲ್ಲಿ ಗಿರಿ ಮತ್ತು ಕಾನನ ಪ್ರದೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಬರುವುದೂ ಇಂತಹ ದುರಂತಗಳಿಗೆ ಪೂರಕವಾಗಿದೆ ಎಂದು ಉಲ್ಲೇಖಿಸಿದ್ದು, ಚಾರಣಕ್ಕೂ ಕಡಿವಾಣ ಬೀಳುವ ಸಾಧ್ಯತೆ ಇದೆ.
ಅನಧಿಕೃತ ಹೋಂಸ್ಟೇ, ರೆಸಾರ್ಟ್ ವಿರುದ್ಧ ಕ್ರಮಕ್ಕೆ ಅರಣ್ಯ ಸಚಿವರ ಸೂಚನೆ
Previous Articleರಾಜ್ಯಪಾಲರ ವಿರುದ್ಧ ರಾಜ್ಯ ಸರ್ಕಾರದ ಸಂಘರ್ಷ.
Next Article ಬೆಂಗಳೂರು ಪೊಲೀಸರಿಗೆ ಟೋಪಿ ಹಾಕುವ ಯತ್ನ.
2 ಪ್ರತಿಕ್ರಿಯೆಗಳು
Installez l’application 888 starz et jouez ou que vous soyez.
888starz platformasi haqidagi fikrlar bilan tanishmoqchimisiz? Unda 888starz отзывы bo’limiga tashrif buyuring va foydalanuvchilarning tajribasi haqida bilib oling. Ushbu ilova yuqori tezlik, qulay interfeys va xavfsizlikni ta’minlaydi. Har qanday o’yinchi uchun bu eng yaxshi tanlov bo’ladi.