ಬೆಂಗಳೂರು,ಜು.2:
ಕೆಎಎಸ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ರಾಜ್ಯ ಸರ್ಕಾರ ಆದೇಶಿಸಿದೆ.
ಬೆಂಗಳೂರು ದಕ್ಷಿಣ ಉಪ ವಿಭಾಗದ ಉಪ ವಿಭಾಗಾಧಿಕಾರಿ ಅಪೂರ್ವ ಬಿದರಿ ಅವರು
ಅರೆ ನ್ಯಾಯಿಕ ಪ್ರಕರಣಗಳ ವಿಲೇವಾರಿಯಲ್ಲಿ ದೋಷಪೂರಿತ ಆದೇಶಗಳನ್ನು ಹೊರಡಿಸಿರುವ ಆರೋಪದ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲು ಆದೇಶಿಸಲಾಗಿದೆ.
ಇವರ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಆದೇಶಿಸಿದ್ದಾರೆ.
ಕೆಎಎಸ್ ಅಧಿಕಾರಿಯಾಗಿರುವ ಅಪೂರ್ವ ಬಿದರಿ ಅವರು ಬೆಂಗಳೂರು ದಕ್ಷಿಣ ಉಪ ವಿಭಾಗದ ಉಪ ವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ
ಇವರು ಅಧಿಕಾರ ವಹಿಸಿಕೊಂಡ ದಿನದಿಂದ ಈವರೆಗೆ ಹೊರಡಿಸಿರುವ ಅರೆ ನ್ಯಾಯಿಕ ಪ್ರಕರಣಗಳ ಆದೇಶಗಳನ್ನು ಪರಿಶೀಲಿಸಲು ತಂಡವೊಂದನ್ನು ರಚಿಸಲಾಗಿತ್ತು.
ಈ ತಂಡದ ಪರಿಶೀಲನೆಯಲ್ಲಿಅಪೂರ್ವ ಬಿದರಿ ಅವರು 53 ಅರೆ ನ್ಯಾಯಿಕ ಪ್ರಕರಣಗಳನ್ನು ನಿರ್ಧರಿಸುವಲ್ಲಿಗಂಭೀರ ಕರ್ತವ್ಯ ಲೋಪ ಎಸಗಿರುವುದು ಕಂಡು ಬಂದಿದೆ.ಈ ಹಿನ್ನೆಲೆಯಲ್ಲಿಅಪೂರ್ವ ಬಿದರಿ ವಿರುದ್ಧ ಕರ್ನಾಟಕ ಭೂಕಂದಾಯ ಅಧಿನಿಯಮ 1964ರ ಸೆಕ್ಷನ್ 35 ಮತ್ತು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 257ರ ಅಡಿ ಶಿಸ್ತುಕ್ರಮಕ್ಕೆ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲಾಗಿತ್ತು. ಸರಕಾರ ಈ ಪ್ರಸ್ತಾವನೆಯನ್ನು ಪರಿಶೀಲಿಸಿದ್ದು, ಅಪೂರ್ವ ಬಿದರಿ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ನೀಡಿದೆ.
ಈ ಕುರಿತಂತೆ ಪ್ರಾದೇಶಿಕ ಆಯುಕ್ತರ ಕಚೇರಿಯಿಂದ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಜೂನ್ 30ರಂದು ಪತ್ರ ಬರೆಯಲಾಗಿದ್ದು, ಅಪೂರ್ವ ಬಿದರಿ ವಿರುದ್ಧ ಎಫ್‌ಐಆರ್ ದಾಖಲಿಸಿ ತುರ್ತಾಗಿ ಅನುಪಾಲನಾ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.
Previous Articleಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.
Next Article ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ