Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಶೋಕ್ ಬಾಣ ಗುರಿಮುಟ್ಟಲಿದೆಯಾ..
    Trending

    ಅಶೋಕ್ ಬಾಣ ಗುರಿಮುಟ್ಟಲಿದೆಯಾ..

    vartha chakraBy vartha chakraಜೂನ್ 27, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜೂ.26:
    ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ವಿಚಾರವಾಗಿ ರಾಜ್ಯ ಕಾಂಗ್ರೆಸ್ ನಲ್ಲಿ ವಿದ್ಯಮಾನಗಳು ನಡೆಯುತ್ತಿರುವ ಬೆನ್ನಲ್ಲೇ ಪ್ರತಿ ಪಕ್ಷ ಬಿಜೆಪಿಯಲ್ಲೂ ಕುತೂಹಲಕರ ಬೆಳವಣಿಗೆಗಳು ನಡೆಯುತ್ತಿವೆ.
    ವಿಧಾನಪರಿಷತ್ ಪ್ರತಿ ಪಕ್ಷ ನಾಯಕನ ಆಯ್ಕೆ ವಿಚಾರವಾಗಿ ಪಕ್ಷದ ರಾಜ್ಯ ಅಧ್ಯಕ್ಷ ವಿಜಯೇಂದ್ರ ಮತ್ತು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೊಸ ತಂತ್ರವೊಂದನ್ನು ರೂಪಿಸಿದ್ದು ಅದು ಯಾವತ್ತಿರುವು ಪಡೆದುಕೊಳ್ಳು ತ್ತದೆ ಎಂಬ ಅಂಶ ಕುತೂಹಲ ಮೂಡಿಸಿದೆ.
    ಇಲ್ಲಿಯವರೆಗೆ ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾಗಿ ಕೆಲಸ ಮಾಡುತ್ತಿದ್ದ ಕೋಟಾ ಶ್ರೀನಿವಾಸ ಪೂಜಾರಿ ಅವರು ಲೋಕಸಭೆಗೆ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಅವರ ಸ್ಥಾನ ತೆರವುಗೊಂಡಿದೆ. ಈ ಹುದ್ದೆಯ ಮೇಲೆ ಹಲವರು ಕಣ್ಣಿಟ್ಟಿದ್ದಾರೆ.ಇದರಲ್ಲಿ ಪ್ರಮುಖವಾಗಿ ಮೊನ್ನೆಯಷ್ಟೇ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸಚಿವ ಸಿ.ಟಿ.ರವಿ ಪ್ರಮುಖರಾಗಿದ್ದಾರೆ.
    ಆದರೆ ಹಲವಾರು ಕಾರಣದಿಂದಾಗಿ ಸಿ.ಟಿ.ರವಿ ಅವರಿಗೆ ಈ ಹುದ್ದೆ ಸಿಗದಂತೆ ನೋಡಿಕೊಳ್ಳಲು ಆರ್ .ಅಶೋಕ್ ಮತ್ತು ವಿಜಯೇಂದ್ರ ತಂತ್ರ ರೂಪಿಸಿದ್ದಾರೆ.
    ಸಿ.ಟಿ.ರವಿ ಪ್ರಬಲ ಒಕ್ಕಲಿಗ ಸಮುದಾಯಕ್ಕೆ ಸೇರಿದವರಾಗಿದ್ದು,ಸಂಘ ಪರಿವಾರದ‌ ಪ್ರಮುಖ ನಾಯಕರ ಜೊತೆಗೆ ಉತ್ತಮ ಒಡನಾಟ ಹೊಂದಿದ್ದಾರೆ. ಇದು ತಮ್ಮ ರಾಜಕೀಯ ಮಹತ್ವಾಕಾಂಕ್ಷೆಗೆ ಅಡ್ಡಿಯಾಗಲಿದೆ ಎನ್ನುವುದು ಈ ಇಬ್ಬರೂ ನಾಯಕರ ಲೆಕ್ಕಾಚಾರವಾಗಿದೆ.ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ನಲ್ಲಿ ಪ್ರತಿಪಕ್ಷ ನಾಯಕನ ಹುದ್ದೆಯನ್ನು ಸಿ.ಟಿ.ರವಿ ಅವರಿಗೆ ಸಿಗದಂತೆ ನೋಡಿಕೊಳ್ಳಲು ಮುಂದಾಗಿದ್ದಾರೆ.
    ಸದ್ಯ ವಿಧಾನಸಭೆಯಲ್ಲಿ ಒಕ್ಕಲಿಗ ಸಮುದಾಯಕ್ಕೆ ಪ್ರತಿಪಕ್ಷ ನಾಯಕ ಹುದ್ದೆ ನೀಡಲಾಗಿದೆ.ಹೀಗಾಗಿ ಪರಿಷತ್ ನಲ್ಲಿ ದಲಿತ ಅಥವಾ ಹಿಂದುಳಿದ ಸಮುದಾಯಕ್ಕೆ ಈ ಹುದ್ದೆ ನೀಡಬೇಕೆಂದು ವಾದ ಮಂಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಬೀಡು ಬಿಟ್ಟಿರುವ ವಿಜಯೇಂದ್ರ ಪಕ್ಷದ ನಾಯಕರನ್ನು ಭೇಟಿ ಮಾಡಿ,ಪರಿಷತ್ ನಲ್ಲಿ ಪ್ರತಿಪಕ್ಷ ನಾಯಕರಾಗಿ ದಲಿತ ಬಲಗೈ ಸಮುದಾಯಕ್ಕೆ ಸೇರಿದ ‌ಛಲವಾದಿ ನಾರಾಯಣಸ್ವಾಮಿ ಅವರನ್ನು ನೇಮಕ ಮಾಡಬೇಕು. ಇಲ್ಲವಾದರೆ ಎರಡನೇ ಬಾರಿಗೆ ಪರಿಷತ್ ಸದಸ್ಯರಾಗಿರುವ ಹಿಂದುಳಿದ ಸಮುದಾಯಕ್ಕೆ ಸೇರಿದ ರವಿಕುಮಾರ್ ಅವರನ್ನು ನೇಮಿಸಬೇಕು ಎಂದು ‌ಮನವಿ ಮಾಡಿದ್ದಾರೆ.
    ಇದಕ್ಕೆ ಪ್ರತಿಯಾಗಿ ಮತ್ತೊಂದೆಡೆ ಸಂಘ ಪರಿವಾರದ ಹಿರಿಯ ನಾಯಕ ಹಾಗೂ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಈ ಹುದ್ದೆಯನ್ನು ಸಿ.ಟಿ.ರವಿ ಅವರಿಗೆ ಕೊಡಿಸಲು ಲಾಭಿ ನಡೆಸಿದ್ದಾರೆ. ಸದ್ಯ ಪ್ರತಿಪಕ್ಷ ನಾಯಕರಾಗಿ ಕೆಲಸ ಮಾಡುತ್ತಿರುವ ಅಶೋಕ್ ಅಷ್ಟೊಂದು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿಲ್ಲ.ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಬದಲಿಗೆ ‌ಹೊಂದಾಣಿಕೆ ಮಾಡಿಕೊಂಡಿದ್ದಾರೆಂಬ ಅನುಮಾನಬರುವ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ.ಇದನ್ನು ದೂರೀಕರಿಸಿ ಪ್ರಬಲ ಪ್ರತಿಪಕ್ಷವಾಗಿ ಕೆಲಸ ಮಾಡಲು ಸಿ.ಟಿ.ರವಿ ಅವರಂತಹ ಪ್ರಬಲರ ಅಗತ್ಯವಿದೆ ಎಂದು ಪ್ರತಿಪಾಸುತ್ತಿದ್ದು,ವಿದ್ಯಮಾನಗಳು ಕುತೂಹಲ ಮೂಡಿಸಿದೆ.

    Verbattle
    Verbattle
    Verbattle
    Bangalore BJP Congress Government Karnataka News Politics Trending Varthachakra ಕಾಂಗ್ರೆಸ್ ಕಾನೂನು ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಡ್ರಗ್ಸ್ ವಿರುದ್ಧ ಸಿಡಿದೆದ್ದ ಸರ್ಕಾರ.
    Next Article Honey tapper ಬಗ್ಗೆ ಮಾಹಿತಿ ಕೊಟ್ಟ ಶಾಸಕ.
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    1 ಟಿಪ್ಪಣಿ

    1. Wkzuav on ಫೆಬ್ರವರಿ 12, 2026 12:24 ಅಪರಾಹ್ನ

      betmgm Maine online casino betmgm play betmgm IL

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • LarryCax ರಲ್ಲಿ 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    • LinwoodGah ರಲ್ಲಿ ಧರೆಗುರುಳಿದ ಭಾರೀ ಗಾತ್ರದ ತೇರು | Anekal
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.