ಬೆಂಗಳೂರು
ವಿಧಾನಸಭೆಯ ಪ್ರತಿ ಪಕ್ಷ ನಾಯಕ ಆರ್ ಅಶೋಕ್
ಇದೀಗ ಭೂ ಚಕ್ರದ ಸುಳಿಯಲ್ಲಿ ಸಿಲುಕಿದ್ದಾರೆ ಇವರ ವಿರುದ್ಧದ ಅಕ್ರಮ ಭೂ ಮಂಜೂರಾತಿ ಆರೋಪ ಪ್ರಕರಣಕ್ಕೆ ಜೀವ ಬಂದಿದೆ.
ಪ್ರಕರಣದ ಬಗ್ಗೆ ಲೋಕಾಯುಕ್ತ ನಡೆಸಿರುವ ತನಿಖೆ ಕುರಿತಂತೆ ಪ್ರಮಾಣ ಪತ್ರ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಲೋಕಾಯುಕ್ತಕ್ಕೆ ಆದೇಶ ನೀಡಿದೆ.
ಬಿಜೆಪಿ ಶಾಸಕರಾಗಿದ್ದ ಆರ್.ಅಶೋಕ್ 1998 ರಿಂದ 2006ರ ಅವಧಿಯವರೆಗೆ ಬೆಂಗಳೂರು ದಕ್ಷಿಣ ತಾಲೂಕು ಬಗರ್ ಹುಕುಂ ಸಮಿತಿಯ ಅಧ್ಯಕ್ಷರಾಗಿದ್ದರು .
ಈ ವೇಳೆ ಅವರು ಕಾನೂನು ಬಾಹಿರವಾಗಿ ಅನರ್ಹ ಫಲಾನುಭವಿಗಳಿಗೆ ಭೂ-ಮಂಜೂರಾತಿ ಮಾಡಿದ್ದಾರೆ ಎಂದು ಆರೋಪಿಸಿ ಎ.ಆನಂದ ಎಂಬವರು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು.
ಈ ದೂರು ಆಧರಿಸಿ ಎಸಿಬಿ ಪೊಲೀಸರು ಅಶೋಕ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಈ ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ ಅಶೋಕ್, ತಾವು ಯಾವುದೇ ಅಕ್ರಮ ನಡೆಸಿಲ್ಲ. ಕೇವಲ ರಾಜಕೀಯ ದುರುದ್ದೇಶದಿಂದ ತನ್ನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹೀಗಾಗಿ, ತನ್ನ ವಿರುದ್ಧ ಎಸಿಬಿ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿದ್ದಾರೆ. ಜತೆಗೆ ಅರ್ಜಿ ಇತ್ಯರ್ಥವಾಗುವವರೆಗೆ ಎಫ್‌ಐಆರ್ ಆಧರಿಸಿ ತನ್ನ ವಿರುದ್ಧ ಯಾವುದೇ ಕ್ರಮಕ್ಕೆ ಮುಂದಾಗದಂತೆ ಎಸಿಬಿಗೆ ನಿರ್ದೇಶಿಸುವಂತೆ ಮಧ್ಯಂತರ ಮನವಿ ಮಾಡಿದ್ದರು
ಎಸಿಬಿ ರದ್ದುಗೊಂಡ ನಂತರ ಈ ಪ್ರಕರಣ ಲೋಕಾಯುಕ್ತಕ್ಕೆ ವರ್ಗಾವಣೆಯಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಅಶೋಕ್ ಅವರ ಮನವಿಯನ್ನು ತಿರಸ್ಕರಿಸಿ ಭ್ರಷ್ಟಾಚಾರ ನಿಯಂತ್ರಣ ಕಾಯಿದೆಯಡಿ ತನಿಖೆ ನಡೆಸಬಹುದು ಎಂದು ತೀರ್ಪು ನೀಡಿತ್ತು.
ಇದನ್ನು ಪ್ರಶ್ನಿಸಿ ಅಶೋಕ್ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದರು.ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಪ್ರಮಾಣಪತ್ರ ಸಲ್ಲಿಸುವಂತೆ ಲೋಕಾಯುಕ್ತಕ್ಕೆ ಸೂಚಿಸಿ ಮುಂದಿನ ವಿಚಾರಣೆಯನ್ನು ಏಪ್ರಿಲ್ 22ಕ್ಕೆ ಮುಂದೂಡಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

