Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್
    ವಿಶೇಷ ಸುದ್ದಿ

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    vartha chakraBy vartha chakraಮೇ 8, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ.8-
    ಪಹಲ್ಗಾಮ್ ನಲ್ಲಿ ಅಮಾಯಕ ಪ್ರವಾಸಿಗರನ್ನು ಹತ್ಯೆಗೈದ ಪಾತಕಿ ಉಗ್ರರನ್ನು ಹೊಡೆದುರುಳಿಸಿದ
    ಆಪರೇಷನ್ ಸಿಂಧೂರ್ ಕಾರ್ಯಾಚರಣೆಗೆ ಸಿಲಿಕಾನ್ ಸಿಟಿ ಬೆಂಗಳೂರಿನ ನಂಟಿದೆ.
    ಉಗ್ರರ ಅಡಗುದಾಣಗಳ ಮೇಲೆ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗೆ ಬಳಸಲಾದ ಆತ್ಮಹುತಿ ಡ್ರೋನ್‌ಗಳು ಬೆಂಗಳೂರಿನಲ್ಲಿ ತಯಾರಾಗಿವೆ. ಈ ಡ್ರೋನ್‌ಗಳು ನಿಖರವಾಗಿ ಗುರಿಯನ್ನು ಪತ್ತೆಹಚ್ಚಿ ದಾಳಿ ಮಾಡುವ ಸಾಮರ್ಥ್ಯ ಹೊಂದಿವೆ.
    ಸ್ವಯಂಚಾಲಿತವಾಗಿ ಕಾರ್ಯನಿರ್ವಹಿಸುವ ಈ ಡ್ರೋನ್ ಗಳನ್ನು ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಗಳು ಜಂಟಿಯಾಗಿ ನಡೆಸಿದ ಆಪರೇಷನ್ ಸಿಂಧೂರ್ ನಲ್ಲಿ ಬಳಸಲಾಗಿದ್ದು ಉಗ್ರರನ್ನು ಹೊಡೆದುರುಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿವೆ.
    ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಮತ್ತು ಪಾಕಿಸ್ತಾನದಲ್ಲಿರುವ ಒಂಬತ್ತು ಉಗ್ರಗಾಮಿ ನೆಲೆಗಳ ಮೇಲಿನ ಈ ಪ್ರತೀಕಾರದ ದಾಳಿಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಡ್ರೋನ್‌ಗಳನ್ನು ಬಳಸಲಾಗಿದೆ. ಆತ್ಮಾಹುತಿ ಡ್ರೋನ್‌ ಇದು ಒಂದು ರೀತಿಯ ಸ್ವಯಂಚಾಲಿತ ಆಯುಧ. ಇವು ಸಾಮಾನ್ಯ ಡ್ರೋನ್‌ಗಳಂತೆ ಗಾಳಿಯಲ್ಲಿ ಹಾರಾಡುತ್ತವೆ, ಆದರೆ ಗುರಿಯನ್ನು ಪತ್ತೆ ಹಚ್ಚಿದ ತಕ್ಷಣ ಅದರ ಮೇಲೆ ನೇರವಾಗಿ ದಾಳಿ ಮಾಡಿ ಸ್ಫೋಟಗೊಳ್ಳುತ್ತವೆ. ಅದಕ್ಕಾಗಿಯೇ ಇವುಗಳನ್ನು “ಕಾಮಿಕಾಜೆ ಡ್ರೋನ್‌ಗಳು” ಎಂದೂ ಕರೆಯುತ್ತಾರೆ.
    ಬಾಲಕೋಟ್ ದಾಳಿ ಬಳಿಕ ಈ ಡ್ರೋನ್‌ಗಳನ್ನು ಸೇನೆಗೆ ಸೇರ್ಪಡೆ ಮಾಡಿಕೊಳ್ಳಲಾಗಿತ್ತು.
    ಪಶ್ಚಿಮ ಬೆಂಗಳೂರಿನ ಕೈಗಾರಿಕಾ ಪ್ರದೇಶದಲ್ಲಿ ಈ ಆತ್ಮಹತ್ಯಾ ಡ್ರೋನ್‌ಗಳ ನಿರ್ಮಾಣವಾಗಿದೆ.  ಆಲ್ಫಾ ಡಿಸೈನ್ ಮತ್ತು ಇಸ್ರೇಲ್‌ನ ಎಲ್ಬಿಟ್ ಸೆಕ್ಯುರಿಟಿ ಸಿಸ್ಟಮ್ಸ್  ಜಂಟಿಯಾಗಿ ಡ್ರೋನ್ ತಯಾರಿಕೆಯನ್ನು ಮಾಡುತ್ತವೆ. ಈ ಎರಡು ಕಂಪನಿಗಳ ಪ್ರಧಾನ ಕಚೇರಿ ಬೆಂಗಳೂರಿನಲ್ಲಿದೆ. 2021ರಲ್ಲಿ 100 ಡ್ರೋನ್‌ಗಳಿಗೆ   ಭಾರತೀಯ ಸೇನೆ ಖರೀದಿಗೆ ಆರ್ಡರ್ ನೀಡಿತ್ತು.
    100 ಕಿಮೀ ದೂರದವರೆಗೆ ಚಲಿಸಬಲ್ಲ ಈ ಡ್ರೋನ್‌ಗಳು 5 ರಿಂದ 10 ಕೆಜಿ ಸಿಸ್ಟಮ್‌ನ್ನುತ ತೆಗೆದುಕೊಂಡು ಸಾಮರ್ಥ್ಯವನ್ನು ಹೊಂದಿವೆ. ಕಡಿಮೆ ಎತ್ತರದಲ್ಲಿ ಕಾರ್ಯನಿರ್ವಹಿಸುವ ಈ ಡ್ರೋನ್‌ಗಳ ಚಲನೆ ಮಾತ್ರ ನಿಶ್ಯಬ್ಧವಾಗಿರುತ್ತವೆ. ಹಾಗಾಗಿ ಇವುಗಳ ಚಲನೆ ರಹಸ್ಯವಾಗಿರುತ್ತದೆ.
    100 ಕಿಮೀ ದೂರದವರೆಗೆ ಚಲಿಸಬಲ್ಲ ಈ ಡ್ರೋನ್‌ಗಳು 5 ರಿಂದ 10 ಕೆಜಿ ಸಿಸ್ಟಮ್‌ ಅನ್ನು ತೆಗೆದುಕೊಂಡು ಹೋಗುವ ಸಾಮರ್ಥ್ಯವನ್ನು ಹೊಂದಿವೆ.
    ಕಡಿಮೆ ಎತ್ತರದಲ್ಲಿ ಕಾರ್ಯನಿರ್ವಹಿಸುವ ಈ ಡ್ರೋನ್‌ಗಳ ಚಲನೆ ಮಾತ್ರ ನಿಶ್ಯಬ್ಧವಾಗಿರುತ್ತವೆ. ಹಾಗಾಗಿ ಇವುಗಳ ಚಲನೆ ರಹಸ್ಯವಾಗಿರುತ್ತದೆ. ಈ ಡ್ರೋನ್‌ಗಳ ಬಗ್ಗೆ ಪ್ರತಿಕ್ರಿಯಿಸಲು  ಆಲ್ಫಾ ಡಿಸೈನ್‌ನ ಸಿಎಂಡಿ, ಕರ್ನಲ್ (ನಿವೃತ್ತ) ಎಚ್‌ಎಸ್ ಶಂಕರ್ ನಿರಾಕರಿಸಿದ್ದಾರೆ.

    ಉಗ್ರ ತಂತ್ರಜ್ಞಾನ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಗೆಲುವಿಗಾಗಿ ವಿಶೇಷ ಪೂಜೆ.
    Next Article ಜಲಾಶಯಗಳಿಗೆ ಪ್ರವಾಸಿಗರು ಬರುವಂತಿಲ್ಲ
    vartha chakra
    • Website

    Related Posts

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    ಡಿಸೆಂಬರ್ 6, 2025

    ಶನಿವಾರವೂ 400ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

    ಡಿಸೆಂಬರ್ 6, 2025

    ಬೇಸ್ತು ಬಿದ್ದು ಪರಾರಿಯಾದ ಪತಿರಾಯ!

    ಡಿಸೆಂಬರ್ 6, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    ಶನಿವಾರವೂ 400ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

    ಬೇಸ್ತು ಬಿದ್ದು ಪರಾರಿಯಾದ ಪತಿರಾಯ!

    ದರ್ಶನ್‌ಗೆ ದುಡ್ಡು ಎಲ್ಲಿಂದ ಬಂತು?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Scotthem ರಲ್ಲಿ JDS ಕಚೇರಿಗೆ ಕರೆಂಟ್ ಕಳ್ಳತನದ ಪೋಸ್ಟರ್ | HD Kumaraswamy
    • UofmsiUnono ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • RobertPat ರಲ್ಲಿ May 3, 2023 51st Year Free Mass Marriage at Sri Kshetra Dharmasthala
    Latest Kannada News

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    ಡಿಸೆಂಬರ್ 6, 2025

    ಶನಿವಾರವೂ 400ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

    ಡಿಸೆಂಬರ್ 6, 2025

    ಬೇಸ್ತು ಬಿದ್ದು ಪರಾರಿಯಾದ ಪತಿರಾಯ!

    ಡಿಸೆಂಬರ್ 6, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೆಂಗಳೂರಲ್ಲಿ ಮನೆ ಕಟ್ಟೋಕೆ ಏನೇನ್ ರೂಲ್ಸ್ #varthachakra #buildingahouse #gba #bbmp #bangalorerealestate
    Subscribe