ಬೆಂಗಳೂರು,ನ.8-
ಮಲೆನಾಡು ಮತ್ತು ಕರಾವಳಿಯ ಕೆಲವು ಕಡೆ ಕಾಣಿಸಿಕೊಂಡಿದ್ದ ನಕ್ಸಲ್ ಚಟುವಟಿಕೆ ಕಡಿಮೆಯಾಗಿದೆ ಎಂದು ಭಾವಿಸಿರುವಾಗಲೆ ಉಡುಪಿ
ಜಿಲ್ಲೆಯ ಕಾರ್ಕಳ ತಾಲೂಕಿನ ಈದು ಗ್ರಾಮ ಬಳಿ ನಕ್ಸಲರ ಓಡಾಟದ ಶಂಕೆ ವ್ಯಕ್ತವಾಗಿದೆ.
ಈ ಬಗ್ಗೆ ಖಚಿತ ಮಾಹಿತಿ ಲಭ್ಯವಾದ ಹಿನ್ನಲೆಯಲ್ಲಿ ನಕ್ಸಲ್ ನಿಗ್ರಹ ಪಡೆ ಸಿಬ್ಬಂದಿ ನಕ್ಸಲರಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.
ಈದು ಗ್ರಾಮದಲ್ಲಿ ಕೆಲ ದಿನಗಳಿಂದ ಅನುಮಾನಾಸ್ಪದ ವ್ಯಕ್ತಿಗಳ ಓಡಾಟದ ಬಗ್ಗೆ ಮಾಹಿತಿ ದೊರೆತಿತ್ತು. ಈ ಸಂಬಂಧ ಸ್ಥಳೀಯರ ಬಳಿ ಎಎನ್ಎಫ್ ಮಾಹಿತಿ ಸಂಗ್ರಹಿಸಲು ಪ್ರಯತ್ನಿಸಿದೆ. ಆದರೆ, ನಕ್ಸಲ್ ಓಡಾಟದ ಬಗ್ಗೆ ಸ್ಥಳೀಯರಿಂದ ಯಾವುದೇ ಮಾಹಿತಿ ಸಿಕ್ಕಿಲ್ಲ.ಆದರೂ ಕೂಡ
ಪಶ್ಚಿಮಘಟ್ಟದ ತಪ್ಪಲಿನಲ್ಲಿ ನಕ್ಸಲರು ನುಸುಳಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ. ನಕ್ಸಲ್ ಬಗ್ಗೆ ಅರಣ್ಯವಾಸಿಗಳಿಂದಲೂ ಮಾಹಿತಿ ಸಂಗ್ರಹ ಕಾರ್ಯ ನಡೆಯುತ್ತಿದೆ. ಡ್ರೋಣ್, ಶ್ವಾನದಳ ಸಿಬ್ಬಂದಿ ಬಳಸಿಕೊಂಡು ಶೋಧ ಕಾರ್ಯ ನಡೆಸಲಾಗುತ್ತಿದೆ.
ನಕ್ಸಲ್ ಓಡಾಟದ ಬಗ್ಗೆ ಈವರೆಗೆ ಯಾವುದೇ ಸುಳಿವು ಪತ್ತೆಯಾಗಿಲ್ಲ. ಸಾರ್ವಜನಿಕರು ಆತಂಕಪಡುವುದು ಬೇಡ ಎಂದು ಎಎನ್ಎಫ್ ಅಧಿಕಾರಿಗಳು ಸ್ಥಳೀಯರಿಗೆ ಧೈರ್ಯ ತುಂಬಿದ್ದಾರೆ
Previous Articleಹೆದರಿದ ತೇಜಸ್ವಿ ಸೂರ್ಯ..?
Next Article ಕಾಂಗ್ರೆಸ್ ಅಭ್ಯರ್ಥಿ ಪರ ಬಿಜೆಪಿ ಶಾಸಕ ಪ್ರಚಾರ.

1 ಟಿಪ್ಪಣಿ
Najlepsze kasyno online to Betano https://betanogame.org/pl/. Odblokuj 100% do €500 + darmowe spiny i ciesz się nieustanną akcją. Szybkie wypłaty, ogromne turnieje i niekończąca się zabawa czekają na Ciebie.