Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಎಕ್ಸ್ ಖಾತೆಯಲ್ಲಿ ಯತ್ನಾಳ್ ಅಳಲು
    Viral

    ಎಕ್ಸ್ ಖಾತೆಯಲ್ಲಿ ಯತ್ನಾಳ್ ಅಳಲು

    vartha chakraBy vartha chakraಮಾರ್ಚ್ 27, 202527 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.27:
    ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ ತಮ್ಮನ್ನು ಉಚ್ಛಾಟಿಸಿರುವ ಕ್ರಮಕ್ಕೆ ಬೇಸರ ವ್ಯಕ್ತಪಡಿಸಿರುವ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್
    ಕಾರ್ಯಕರ್ತರ ಪಕ್ಷ ಎಂದು ಹೆಸರುವಾಸಿಯಾಗಿದ್ದ ಭಾರತೀಯ ಜನತಾ ಪಕ್ಷ ಈಗ ಕುಟುಂಬ ರಾಜಕಾರಣದಲ್ಲಿ ಮುಳುಗಿರುವುದು ವಿಷಾದನೀಯ ಎಂದು ಹೇಳಿದ್ದಾರೆ.
    ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಕುರಿತಂತೆ ಸುಧೀರ್ಘ ಹೇಳಿಕೆಯನ್ನು ನೀಡಿರುವ ಅವರು
    ಪಕ್ಷದ ವಿರುದ್ದ ಬಹಿರಂಗವಾಗಿ ಮಾತನಾಡಿ ಹಾಗೂ ಆಡಳಿತಾರೂಢ ಪಕ್ಷದ ಸಭೆಯಲ್ಲಿ ಭಾಗವಹಿಸುತ್ತಿದ್ದ ಶಾಸಕರನ್ನು ಉಚ್ಚಾಟನೆ ಮಾಡದೆ ಉತ್ತರ ಕರ್ನಾಟಕದ ಭಾಗದಲ್ಲಿ ಪಕ್ಷದ ಬಲವರ್ಧನೆಗೆ ಟೊಂಕಕಟ್ಟಿ ಕೆಲಸ ಮಾಡಿದ ನನ್ನನ್ನು ಉಚ್ಚಾಟನೆ ಮಾಡಿರುವುದು ಪಕ್ಷದ ದ್ವಂದ್ವ ನೀತಿಗಳಿಗೆ ಹಿಡಿದ ಕೈಗನ್ನಡಿ’ ಎಂದು ಟೀಕಿಸಿದ್ದಾರೆ.
    ಕಲ್ಯಾಣ ಕರ್ನಾಟಕದಲ್ಲಿ ಸಧೃಡವಾಗಿದ್ದ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಮಕಾಡೆ ಮಲಗಿದ್ದು, ಯಾರ ಅಡ್ಜಸ್ಟ್‌ಮೆಂಟ್‌ ಪಾಲಿಟಿಕ್ಸ್‌ನಿಂದ ಎಂಬುದನ್ನು ಪಕ್ಷದ ಹೈಕಮಾಂಡ್ ವಿಶ್ಲೇಷಿಸಬೇಕು’ ಎಂದು ಆಗ್ರಹಿಸಿದ್ದಾರೆ.
    ಕೆಲ ರಾಜಕೀಯ ಪಟ್ಟಭದ್ರರು, ಅಡ್ಜಸ್ಟ್‌ಮೆಂಟ್‌ ಪಾಲಿಟಿಕ್ಸ್‌ನ ಹರಿಕಾರರಿಂದ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆಯಾಯಿತು. ಕಲಬುರಗಿ, ರಾಯಚೂರು, ಬಳ್ಳಾರಿ, ಚಿಕ್ಕೋಡಿಯಲ್ಲಿ ಆದ ಸೋಲಿನ ಪರಾಮರ್ಶೆಯನ್ನು ಹೈಕಮಾಂಡ್ ಮಾಡದೆ ಇರುವುದು ಕಲ್ಯಾಣ ಕರ್ನಾಟಕದಲ್ಲಿ ಪಕ್ಷದ ಅವನತಿಗೆ ಕಾರಣವಾಗಿದೆ’ ಎಂದು ಬಣ್ಣಿಸಿದ್ದಾರೆ.
    ಕಲ್ಯಾಣ ಕರ್ನಾಟಕದಲ್ಲಿ ಸಧೃಡವಾಗಿದ್ದ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಮಕಾಡೆ ಮಲಗಿದ್ದು, ಯಾರ ಅಡ್ಜಸ್ಟ್‌ಮೆಂಟ್‌ ಪಾಲಿಟಿಕ್ಸ್‌ನಿಂದ ಎಂಬುದನ್ನು ಪಕ್ಷದ ಹೈಕಮಾಂಡ್ ವಿಶ್ಲೇಷಿಸಬೇಕು’ ಎಂದು ಆಗ್ರಹಿಸಿದ್ದಾರೆ
    ಅಡ್ಜಸ್ಟ್‌ಮೆಂಟ್‌ ರಾಜಕಾರಣ ನಿಲ್ಲದಿದ್ದರೆ ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ ಮಕಾಡೆ ಮಲಗುವುದು ಖಚಿತ. ಕುಟುಂಬ ರಾಜಕಾರಣಕ್ಕೆ ಕಡಿವಾಣ ಹಾಕಿ, ನಿಜವಾದ ಜನ ಪರ ಕಾಳಜಿ ಇರುವ ನಾಯಕರಿಗೆ ಪಕ್ಷ ಅವಕಾಶ ನೀಡಬೇಕು ಎಂದು ಹೇಳಿದ್ದಾರೆ
    ಕಾಟಾಚಾರಕ್ಕೆ ಸರ್ಕಾರದ ನೀತಿಗಳನ್ನು ಖಂಡಿಸಿ ಸಂಜೆ ವೇಳೆ ಅವರ ಮನೆಯಲ್ಲಿ ಭೋಜನ ಕೂಟದಲ್ಲಿ ಭಾಗವಹಿಸುವ ನಾಯಕರ ಅವಶ್ಯ ಪಕ್ಷಕ್ಕಿಲ್ಲ’ ಎಬುದನ್ನು ಹೈಕಮಾಂಡ್ ಗಮನಿಸಬೇಕು ಎಂದಿದ್ದಾರೆ
    ಹಿಂದುತ್ವವಾದದ ಬಗ್ಗೆ ರಾಜಿ ಮಾಡಿಕೊಳ್ಳದೆ, ಕುಟುಂಬ ರಾಜಕಾರಣದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ರಾಜ್ಯದಲ್ಲಿ ಪಕ್ಷವನ್ನು ಕಟ್ಟಿದ್ದ ಈಶ್ವರಪ್ಪನವರನ್ನು ಹೊರಗಿಟ್ಟರು. ನಿಸ್ವಾರ್ಥ ಕಾರ್ಯಕರ್ತರು, ತನು-ಮನ-ಧನದಿಂದ ದುಡಿದ ಮುಖಂಡರಿಂದ ಪಕ್ಷದ ಸಂಘಟನೆಯಾಯಿತೇ ಹೊರತು ಸ್ವಯಂಘೋಷಿತ ‘ಪೂಜ್ಯ’ರಿಂದಲ್ಲ ಎಂದು ಗುಡುಗಿದ್ದಾರೆ.
    ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ವಕ್ಫ್ ಹೋರಾಟಕ್ಕೆ ಧರಣಿ ಸತ್ಯಾಗ್ರಹವನ್ನು ಪ್ರಾರಂಭಿಸಿದ್ದು ನಾವೇ. ವಾಲ್ಮೀಕಿ ಹಗರಣ, ದಲಿತರ ಅನುದಾನದ ದುರ್ಬಳಕೆಯನ್ನು ಖಂಡಿಸಿ ಹೋರಾಟ ರೂಪಿಸಿದ್ದೆವು. ವಕ್ಫ್ ವಿರುದ್ಧ ನಾವು ಮಾಡಿದ್ದ ಮಾಹಿತಿ ಸಂಗ್ರಹಕ್ಕೆ ಜೆಪಿಸಿ ಅಧ್ಯಕ್ಷರಾದ ಜಗದಂಬಿಕಾ ಪಾಲ್ ಅವರು ಪ್ರಶಂಸಿಸಿದ್ದರು ಎಂದು ಉಲ್ಲೇಖಿಸಿದ್ದಾರೆ.
    ಪ್ರತಿಬಾರಿ ಅಧಿವೇಶನ ನಡೆದಾಗಲೂ ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಮಲತಾಯಿ ಧೋರಣೆ, ಕೃಷ್ಣ ಯೋಜನೆಯ ವಿಳಂಬದ ಬಗ್ಗೆ ಧ್ವನಿ ಎತ್ತಿದ್ದೇನೆ. ಕರ್ನಾಟಕ ಲೋಕಸೇವಾ ಆಯೋಗದಲ್ಲಿರುವ ಭ್ರಷ್ಟರನ್ನು ಕಿತ್ತೊಗೆಯಲು ಸ್ಪರ್ಧಾರ್ಥಿಗಳ ಜೊತೆಗೆ ನಿಂತಿದ್ದೇನೆ. ಬಾಣಂತಿಯರ ಸಾವಿನ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದು ನಾನೇ. ಪಕ್ಷದಲ್ಲಿ ಆಗಬೇಕಾದ ಕೆಲ ಬದಲಾವಣೆಗಳು, ಸುಧಾರಣೆಗಳು ಸೂಚಿಸಿದಕ್ಕೆ ನಮ್ಮ ನಿಲುವು ಕೆಲವರಿಗೆ ‘ಅಪಥ್ಯ’ವಾಗಿದೆ ಎಂದು ಕುಟುಕಿದ್ದಾರೆ.

    Verbattle
    Verbattle
    Verbattle
    ಈಶ್ವರಪ್ಪ ಕರ್ನಾಟಕ ಚುನಾವಣೆ ಬಿಜೆಪಿ ಬೆಂಗಳೂರು ರಾಜಕೀಯ ವಾಲ್ಮೀಕಿ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಹನಿ ಟ್ರ್ಯಾಪ್ ಬಗ್ಗೆ ಸಿಐಡಿ ತನಿಖೆ
    Next Article ಸದ್ಯಕ್ಕಿಲ್ಲ ಒಳ ಮೀಸಲಾತಿ
    vartha chakra
    • Website

    Related Posts

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಕೊಲೆ ಮಾಡಿ ಮನೆಯಲ್ಲಿ ಹೂತು ಹಾಕಿದ ಪಾಪಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • StevenCaf ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • StevenCaf ರಲ್ಲಿ ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    • Walterfak ರಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    Latest Kannada News

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.