Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಲ್ತುಳಿತ ಕುರಿತು ಕಾಂಗ್ರೆಸ್ ಹೈಕಮಾಂಡ್ ಹೇಳಿದ್ದೇನು ಗೊತ್ತೆ ?
    ಸುದ್ದಿ

    ಕಾಲ್ತುಳಿತ ಕುರಿತು ಕಾಂಗ್ರೆಸ್ ಹೈಕಮಾಂಡ್ ಹೇಳಿದ್ದೇನು ಗೊತ್ತೆ ?

    vartha chakraBy vartha chakraಜೂನ್ 10, 20251 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.10:
    ಐಪಿಎಲ್ ಕಪ್ ಗೆದ್ದ ಆರ್‌ಸಿಬಿ ತಂಡಕ್ಕೆ ಅಭಿನಂದನೆ ಸಲ್ಲಿಸುವ ವಿಚಾರದಲ್ಲಿ ಉಂಟಾಗಿರುವ ಗೊಂದಲ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕಾಂಗ್ರೆಸ್ ಹೈಕಮಾಂಡ್ ಇನ್ನು ಮುಂದೆ ರಾಜ್ಯದಲ್ಲಿ ಇಂತಹ ಯಾವುದೇ ಘಟನೆ ನಡೆಯದಂತೆ ನೋಡಿಕೊಳ್ಳಬೇಕು ಎಂದು ತಾಕೀತು ಮಾಡಿದೆ.
    ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಪಕ್ಷದ ಕಚೇರಿಯಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಜೊತೆ ಈ ವಿಚಾರವಾಗಿ ಸುಧೀರ್ಘ ಸಮಾಲೋಚನೆ ನಡೆಸಿದರು.
    ಈ ವೇಳೆ ರಾಜ್ಯದಲ್ಲಿ ಅತ್ಯುತ್ತಮ ಆಡಳಿತ ನಡೆಸುತ್ತಿರುವ ಸರ್ಕಾರಕ್ಕೆ ಈ ಘಟನೆ ಒಂದು ಕಪ್ಪು ಚುಕ್ಕೆಯಾಗಿ ಪರಿಣಮಿಸಿತು. ಸಂಪೂರ್ಣ ಖಾಸಗಿಯಾಗಿ ವಾಣಿಜ್ಯ ಉದ್ದೇಶಕ್ಕೆ ನಡೆಯುವ ಐಪಿಎಲ್ ಪಂದ್ಯ ಕ್ರೀಡೆಯೇ ಅಲ್ಲ ಇಂತಹ ಟೂರ್ನಿಯ ಕಪ್ ಗೆದ್ದ ತಂಡಕ್ಕೆ ರಾಜ್ಯ ಸರ್ಕಾರ ಅಭಿನಂದನೆ ಸಲ್ಲಿಸಲು ನಿರ್ಧರಿಸಿದ ವಿಚಾರ ಸರಿಯಲ್ಲ ಎಂದು ಹೇಳಿದರೆನ್ನಲಾಗಿದೆ.
    ಚೆನ್ನೈ ಸೂಪರ್ ಕಿಂಗ್ಸ್ ತಂಡ ಹಲವು ಬಾರಿ ಚಾಂಪಿಯನ್ ಆಗಿದೆ ಆ ತಂಡಕ್ಕೆ ಎಂದಿಗೂ ತಮಿಳುನಾಡು ಸರ್ಕಾರ ಅಭಿನಂದನೆ ಸಲ್ಲಿಸಿಲ್ಲ ಆರ್ ಸಿ ಬಿ ತಂಡ ಚಾಂಪಿಯನ್ ಆದ ತಕ್ಷಣ ಸರ್ಕಾರ ಅಭಿನಂದನೆ ಸಲ್ಲಿಸಬೇಕು ಎಂಬ ವಿಚಾರ ಹೇಗೆ ಬಂತು ಇಂತಹ ಪ್ರಸ್ತಾಪವನ್ನು ಯಾರು ಮಂಡಿಸಿದರು ಎಂದು ಕೇಳಿದ ರಾಹುಲ್ ಗಾಂಧಿ ಮುಂದೆ ಯಾವುದೇ ಕಾರಣಕ್ಕೂ ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿರುವುದಾಗಿ ಗೊತ್ತಾಗಿದೆ.
    ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದಿರುವ ಕಾಲ್ತುಳಿತ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು ಇದರಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಯಾವುದೇ ಒತ್ತಡಗಳಿಗೂ ಸರ್ಕಾರ ಮಣಿಯಬಾರದು ಎಂದು ತಾಕೀತು ಮಾಡಿರುವುದಾಗಿ ಗೊತ್ತಾಗಿದೆ.
    ಸಮಗ್ರ ತನಿಖೆ:
    ಈ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎಐಸಿಸಿ ಸಂಘಟನಾ ಕಾರ್ಯದರ್ಶಿ ವೇಣುಗೋಪಾಲ್ ಕಾಲ್ತುಳಿತ ಪ್ರಕರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಘಟನೆಯಿಂದ ಭಾದಿತರಾದವರಿಗೆ ರಾಜ್ಯ ಸರ್ಕಾರ ಎಲ್ಲಾ ನೆರವು ಕಲ್ಪಿಸಬೇಕು ಎಂಬ ಸೂಚನೆ ನೀಡಿದೆ ಎಂದು ತಿಳಿಸಿದರು.
    ಘಟನೆಯ ಬಗ್ಗೆ ನಿಷ್ಪಕ್ಷ ಹಾಗೂ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರು ಯಾರೇ ಆಗಿದ್ದರು ಅವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಈ ವಿಚಾರದಲ್ಲಿ ಸರ್ಕಾರ ಕೈಗೊಳ್ಳುವ ಕ್ರಮಕ್ಕೆ ಪಕ್ಷ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಹೇಳಿದರು

    ಕಾಂಗ್ರೆಸ್ ಕ್ರೀಡೆ ಚಿನ್ನ ತಮಿಳುನಾಡು ಬೆಂಗಳೂರು ರಾಹುಲ್ ಗಾಂಧಿ ವಾಣಿಜ್ಯ ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಜಾತಿವಾರು ಜನಗಣತಿಗೆ ಹೈಕಮಾಂಡ್ ಸೂಚನೆ.
    Next Article ಮುಡಾ ಅಕ್ರಮ ಕುರಿತು ಇ.ಡಿ.ಬ್ರಹ್ಮಾಸ್ತ್ರ.
    vartha chakra
    • Website

    Related Posts

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    1 ಟಿಪ್ಪಣಿ

    1. https://retag1.com on ಜೂನ್ 12, 2025 10:50 ಫೂರ್ವಾಹ್ನ

      70918248

      References:

      long term effects of steroids on the body; https://retag1.com,

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamreosy ರಲ್ಲಿ ಸೈಬರ್ ಅಪರಾಧ ತಡೆಗೆ ಹೊಸ ಕ್ರಮ
    • EdwardNor ರಲ್ಲಿ ಪಾಕಿಸ್ತಾನೀಯರಿಗಾಗಿ ರಾಜ್ಯದಲ್ಲಿ ಹುಡುಕಾಟ
    • 20c45 ರಲ್ಲಿ ಎಸ್ಕಾರ್ಟ್ ಸರ್ವಿಸ್ ಹೆಸರಲ್ಲಿ ವಂಚಿಸಿದ್ದು ಹೀಗೆ..
    Latest Kannada News

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಿತ್ಯಾನಂದನ ಕೈಲಾಸ ಎಲ್ಲಿದೆ ಗೊತ್ತಾ?#nithyananda #kailasa #heaven #australia #varthachakra #yoga
    Subscribe