ಬೆಂಗಳೂರು.ಮೇ,12:
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಪೆನ್ ಡ್ರೈವ್ ಬಹಿರಂಗದ ಬೆನ್ನಲ್ಲೇ ಅವರ ತಂದೆ ಮಾಡಿ ಸಚಿವ ಎಚ್ ಡಿ ರೇವಣ್ಣ ಇಂತಹುದೇ ಆರೋಪದಲ್ಲಿ ಜೈಲು ಪಾಲಾಗಿದ್ದಾರೆ. ಇದೀಗ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧವು ಇಂತಹ ಆರೋಪ ಕೇಳಿ ಬರಲಿದೆ ಎಂದು ಶಾಸಕರೊಬ್ಬರು ಭವಿಷ್ಯ ನುಡಿದಿದ್ದಾರೆ
ಮದ್ದೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕದಲೂರು ಉದಯ ಗೌಡ ಸುದ್ದಿಗಾರರೊಂದಿಗೆ ಮಾತನಾಡಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಏನು ಸಾಚಾ ಅಲ್ಲ, ರೇವಣ್ಣನಂತೆ ಕುಮಾರಸ್ವಾಮಿ ಸಹ ಜೈಲಿಗೆ ಹೋಗುವ ಕಾಲ ಹತ್ತಿರ ಬಂದಿದೆ ಎಂದು ಹೇಳಿದರು.
ಸದ್ಯದಲ್ಲಿಯೇ ಕುಮಾರಸ್ವಾಮಿ ಅವರ ವಿರುದ್ಧವೂ ಮಹಿಳೆಯರು ಲೈಂಗಿಕ ದೌರ್ಜನ್ಯದ ದೂರು ಕೊಡುತ್ತಾರೆ ಎಂದು ಸ್ಫೋಟಕ ಹೇಳಿಕೆ ನೀಡಿದರು.
ಪ್ರಜ್ವಲ್‌ರೇವಣ್ಣ ಪೆನ್‌ಡ್ರೈವ್ ಪ್ರಕರಣ ಹೊರ ಬಂದ ಮೇಲೆ ಮಹಿಳೆಯರು ಕುಮರಸ್ವಾಮಿ ವಿರುದ್ಧವೂ ದೂರು ಕೊಡುವ ಧೈರ್ಯ ಮಾಡಲಿದ್ದಾರೆ. ಕುಮಾರಸ್ವಾಮಿ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎಂಬ ಮಾತುಗಳು ಇವೆ. ನಟಿ ರಾಧಿಕಾ ಅವರನ್ನು ಇವರು ಪತ್ನಿಯ ರೀತಿ ಕಾಣುತ್ತಿದ್ದಾರಾ ಎಂಬ ಬಗ್ಗೆ ಉತ್ತರ ನೀಡಬೇಕು ಎಂದರು.
ಕುಮಾರಸ್ವಾಮಿ ಅವರು ಜೀವನದುದ್ದಕ್ಕೂ ಬ್ಲ್ಯಾಕ್‌ಮೇಲ್, ಅಪಪ್ರಚಾರ ಮಾಡುತ್ತ ಬೇರೆಯವರನ್ನು ಮುಳುಗಿಸಿದ್ದೇ ಇವರ ಸಾಧನೆ ಎಂದು ವಾಗ್ದಾಳಿ ನಡೆಸಿದರು
ಪ್ರಜ್ವಲ್ ಪ್ರಕರಣದಲ್ಲಿ ಹೆಣ್ಣುಮಕ್ಕಳಿಗೆ ಅನ್ಯಾಯವಾಗಿದೆ. ಸಂತ್ರಸ್ಥೆಯರ ಪರ ಜೆಡಿಎಸ್ ನಾಯಕರು ಧ್ವನಿ ಎತ್ತಿಲ್ಲ. ಅವರಿಗೆ ಧೈರ್ಯ ಹೇಳಿ ಸಾಂತ್ವನ ಹೇಳುವ ಕೆಲಸವನ್ನೂ ಮಾಡಿಲ್ಲ. ಇವರ ಮನೆಯ ಹೆಣ್ಣು ಮಕ್ಕಳಿಗೆ ಅನ್ಯಾಯವಾಗಿದ್ದರೆ ಹೀಗೆ ಮಾಡುತ್ತಿದ್ದರಾ. ಯಾವ ನೈತಿಕತೆ ಇಟ್ಟುಕೊಂಡು ಜೆಡಿಎಸ್ ಪ್ರತಿಭಟನೆ ಮಾಡುತ್ತಿದೆ ಎಂದು ಹರಿಹಾಯ್ದರು.