Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗಂಡಸರು ಕಾಂಗ್ರೆಸ್ ಗೆ ವೋಟ್ ಹಾಕ ಬಾರದಂತೆ
    ರಾಜಕೀಯ

    ಗಂಡಸರು ಕಾಂಗ್ರೆಸ್ ಗೆ ವೋಟ್ ಹಾಕ ಬಾರದಂತೆ

    vartha chakraBy vartha chakraಜನವರಿ 7, 202530 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ವಿಜಯಪುರ: ಕರ್ನಾಟಕ ಗಂಡಸರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ಹಾಕಬಾರದು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
    ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸ್ ಟಿಕೆಟ್ ದರ 15% ಏರಿಕೆ ವಿಚಾರವಾಗಿ, ಹೆಣ್ಣುಮಕ್ಕಳಿಗೆ ಉಚಿತ ಕೊಟ್ಟು ಗಂಡಸರಿಗೆ ಹೆಚ್ಚಿನ ದುಡ್ಡು ಹಾಕಿದ್ದಾರೆ. ಗಂಡಸರು ಏನು ಪಾಪ ಮಾಡಿದ್ದಾರೆ? ಇದು ಹೆಣ್ಣು ಮಕ್ಕಳಿಗೂ ಅನ್ಯಾಯವಾಗುತ್ತದೆ. ಮಕ್ಕಳು ಮನೆಯ ಯಜಮಾನರಿಗೂ ಅನ್ಯಾಯವಾಗುತ್ತದೆ. ಇವರ ರಕ್ಷಣೆ ಮಾಡಬೇಕೆಂದರೆ ಹೆಣ್ಣು ಮಕ್ಕಳೂ ಸಹ ಕಾಂಗ್ರೆಸ್‌ಗೆ ಮತ ಹಾಕಬಾರದೆಂದು ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.
    ಕಲಬುರಗಿ ಪ್ರತಿಭಟನೆಯಲ್ಲಿ ವಿಜಯೇಂದ್ರ ಭಾಗಿಯಾಗದ ವಿಚಾರವಾಗಿ ಮಾತನಾಡಿ, ವಿಜಯೇಂದ್ರ ಅವರ ನೇತೃತ್ವದಲ್ಲಿ ಎಲ್ಲೆಡೆ ಪ್ರತಿಭಟನೆ ಎಂದು ಹೇಳಿಕೊಂಡಿದ್ದರು.ಪಾಪ ವಿಜಯೇಂದ್ರ ಅವರಿಗೆ ಏನು ಕೆಲಸ ಇತ್ತು ಗೊತ್ತಿಲ್ಲ. ಶನಿವಾರ ಮೂರು ಕಡೆ ಹೋರಾಟ ಆಗಿದೆ. ಒಂದು ವಕ್ಫ್ ವಿರುದ್ಧ, ಪ್ರಿಯಾಂಕ್ ಖರ್ಗೆ ವಿರುದ್ಧ ಹೋರಾಟ, ಇನ್ನೊಂದು ಬಾಣಂತಿಯರ ಸಾವು ಹೋರಾಟ. ಆ ಪೈಕಿ ವಿಜಯೇಂದ್ರ ಅವರು ಬಾಣಂತಿಯರ ಸಾವಿನ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಇದರಿಂದ ನಮ್ಮಲ್ಲಿ ಸಾಮೂಹಿಕ ನಾಯಕತ್ವ ಹೇಗಿದೆ ಎನ್ನುವುದು ಗೊತ್ತಾಗುತ್ತದೆ. ಅವರು ಅಲ್ಲಿ ಮಾಡಿದ್ದಾರೆ, ನಾವು ಇಲ್ಲಿ ಮಾಡಿದ್ದೇವೆ ಅಷ್ಟೇ ಎಂದು ಕಾಲೆಳದರು.
    ಆರ್.ಅಶೋಕ್ ಹಾಗೂ ವಿಜಯೇಂದ್ರ ಮಧ್ಯೆ ಹೊಂದಾಣಿಕೆ ಕೊರತೆ ವಿಚಾರವಾಗಿ, ಹಾಗೇನಿಲ್ಲ, ಆರ್.ಅಶೋಕ್ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗ್ತಾರೆ. ಬೆಳಗಾವಿ ಅಅಧಿವೇಶನದ ವೇಳೆ ನಮ್ಮ ಹಿರಿಯರ ಸಲಹೆ ಪಡೆದು ಚರ್ಚೆ ಮಾಡಿದ್ದಾರೆ. ಎಲ್ಲರಗೂ ಅವಕಾಶ ಕೊಟ್ಟಿದ್ದಾರೆ. ಅವರ ಬಗ್ಗೆ ನಮ್ಮದೇನು ಆರೋಪಗಳಿಲ್ಲ.
    ಬಿಜೆಪಿ ರಾಜ್ಯಾಧ್ಯಕ್ಷ ಚುನಾವಣೆ ವಿಚಾರವಾಗಿ, ಚುನಾವಣೆ ಪ್ರಕ್ರಿಯೆ ಇದ್ದೇ ಇರುತ್ತದೆ. ಪ್ರಹ್ಲಾದ್ ಜೋಶಿ ಅವರು ಹೇಳಿದ್ದು ಸರಿಯಿದೆ. ಅವರು ಹೇಳಿದ್ರಲ್ಲಿ ತಪ್ಪೇನಿಲ್ಲ. ಇನ್ನು ಮುಂದೆ ಬರೋದು ರೆಗ್ಯುಲರ್ ಚುನಾಯಿತ ಅಧ್ಯಕ್ಷರು. ಅದು ಯಾರು ಆಗುತ್ತಾರೆ? ಯಾರು ಆಗಬೇಕು? ಎಂದು ರಾಜ್ಯ ಘಟಕ ಕೇಂದ್ರ ಹೈಕಮಾಂಡ್‌ಗೆ ಅಧಿಕಾರಿ ಕೊಟ್ಟಿದೆ. ಕೇಂದ್ರದ ಹೈಕಮಾಂಡ್ ಯಾರಿಗೆ ಅಧ್ಯಕ್ಷರನ್ನ ಮಾಡಬೇಕು ಎಂದು ಇಚ್ಛಿಸುತ್ತದೆ ಅವರನ್ನು ಮಾಡ್ತಾರೆ. ಚುನಾವಣೆ ಆಗೋದಿಲ್ಲ,ಸಹಮತ ಮಾಡಿಕೊಂಡು ರಾಜ್ಯಾಧ್ಯಕ್ಷ ಆಯ್ಕೆ ಮಾಡುತ್ತಾರೆ ಎಂದರು.
    ಇದೇ ವೇಳೆ ಸಂಕ್ರಾಂತಿ ಸಿದ್ದೇಶ್ವರ ಜಾತ್ರೆ ಕುರಿತು ಮಾತನಾಡಿದ ಅವರು, ಜನವರಿ 11 ರಿಂದ ಜಾತ್ರೆಗೆ ಚಾಲನೆ ನೀಡಲಾಗುವುದು. ಈ ಬಾರಿ ಮದ್ದು ಸುಡುವ ಕಾರ್ಯಕ್ರಮ ಕೇವಲ ಸಾಂಪ್ರಾದಾಯಿಕವಾಗಿ ಆಚರಿಸಲಾಗುವುದು. ಅಂತರಾಷ್ಟ್ರೀಯ ಮಟ್ಟದ ಕುಸ್ತಿ ಪಟುಗಳಿಂದ ಕುಸ್ತಿ ಸ್ಪರ್ಧೆ ನಡೆಯಲಿದ್ದು, ವಿವಿಧ ಕ್ರೀಡೆಗಳ ಸ್ಪರ್ಧೆ ಏರ್ಪಾಟು ಮಾಡಲಾಗುವುದು ಎಂದು ಹೇಳಿದರು.

    Verbattle
    Verbattle
    Verbattle
    ಕರ್ನಾಟಕ ಕಾಂಗ್ರೆಸ್ ಕ್ರೀಡೆ ಚುನಾವಣೆ ನ್ಯಾಯ ಬಿಜೆಪಿ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    Next Article ಚಳಿ ಚಳಿ ತಾಳೆನು ಈ ಚಳಿಯಾ…
    vartha chakra
    • Website

    Related Posts

    ಮೈಸೂರು ಜೆಡಿಎಸ್ ನಲ್ಲಿ ತಲ್ಲಣ

    ಜನವರಿ 19, 2026

    ಅಬಕಾರಿ ಇಲಾಖೆಯಲ್ಲಿ ಲಂಚಾವತಾರ

    ಜನವರಿ 19, 2026

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಜನವರಿ 18, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    ಪರಪ್ಪನ ಅಗ್ರಹಾರದಲ್ಲಿ ಜೈಲರ್ ಮೇಲೆ ಹಲ್ಲೆ!

    ಮೈಸೂರು ಜೆಡಿಎಸ್ ನಲ್ಲಿ ತಲ್ಲಣ

    ಅಬಕಾರಿ ಇಲಾಖೆಯಲ್ಲಿ ಲಂಚಾವತಾರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ErnestMes ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • ErnestMes ರಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • ErnestMes ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    Latest Kannada News

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    ಜನವರಿ 19, 2026

    ಪರಪ್ಪನ ಅಗ್ರಹಾರದಲ್ಲಿ ಜೈಲರ್ ಮೇಲೆ ಹಲ್ಲೆ!

    ಜನವರಿ 19, 2026

    ಮೈಸೂರು ಜೆಡಿಎಸ್ ನಲ್ಲಿ ತಲ್ಲಣ

    ಜನವರಿ 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.