ಬೆಂಗಳೂರು,ಡಿ.27- ಹೊಸ ವರ್ಷಾಚರಣೆಗೆ ದಿನಗಣನೆ ಆರಂಭಗೊಂಡ ಬೆನ್ನಲ್ಲೇ ಮಾದಕ ವಸ್ತುಗಳ ದಂಧೆಕೋರರ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ
ನಗರವನ್ನು ಸಂಪರ್ಕಿಸುವ ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ, ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ನಡುವೆ ರೈಲುಗಳ ಮೂಲಕ ನಗರಕ್ಕೆ ಗಾಂಜಾ ಪೂರೈಸುತ್ತಿದ್ದ ಪ್ರತ್ಯೇಕ 5 ಪ್ರಕರಣಗಳಲ್ಲಿ 8 ಮಂದಿಯನ್ನು ರಾಜ್ಯ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.
ಅಲ್ಲದೇ, ಆರೋಪಿಗಳಿಂದ ಸರಿಸುಮಾರು 86 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿರುವುದಾಗಿ ರಾಜ್ಯ ರೈಲ್ವೆ ಪೊಲೀಸ್ ಎಸ್ಪಿ ಡಾ. ಸೌಮ್ಯಲತಾ ಎಸ್.ಕೆ. ಮಾಹಿತಿ ನೀಡಿದ್ದಾರೆ.
ಆರೋಪಿಗಳು ಜಾರ್ಖಂಡ್ ಹಾಗೂ ಒಡಿಶಾ ಮೂಲದವರಾಗಿದ್ದಾರೆ. ರಸ್ತೆ ಮಾರ್ಗಗಳ ಮೂಲಕ ಮಾದಕ ಪದಾರ್ಥಗಳನ್ನು ತಂದರೆ ಸಿಕ್ಕಿಬೀಳುವ ಭಯದಿಂದ, ಪೊಲೀಸ್ ಶ್ವಾನಗಳಿಗೂ ವಾಸನೆ ತಿಳಿಯದಂತೆ ಪ್ಯಾಕ್ ಮಾಡಿ ನಗರಕ್ಕೆ ಗಾಂಜಾ ತರುತ್ತಿದ್ದರು. ಮಾದಕ ದಂಧೆಕೋರರ ವಿರುದ್ಧ ಡಿಸೆಂಬರ್ ಮೊದಲ ವಾರದಿಂದಲೇ ವಿಶೇಷ ಕಾರ್ಯಾಚರಣೆ ಆರಂಭಿಸಿರುವ ರೈಲ್ವೆ ಪೊಲೀಸರು ಪ್ರಶಾಂತಿ ಎಕ್ಸ್‌ಪ್ರೆಸ್ ಹಾಗೂ ಹಟಿಯಾ ಎಕ್ಸ್‌ಪ್ರೆಸ್ ರೈಲುಗಳಲ್ಲಿ ತಲಾಶ್ ನಡೆಸಿದ್ದಾರೆ.
ಈ ವೇಳೆ ಟ್ರ್ಯಾಲಿ ಬ್ಯಾಗ್‌ಗಳಲ್ಲಿ ಗಾಂಜಾ ತುಂಬಿಸಿ ತರುತ್ತಿರುವುದು ಪತ್ತೆಯಾಗಿದೆ. ಬಂಧಿತರ ವಿಚಾರಣೆ ಮುಂದುವರೆಸಲಾಗಿದ್ದು, ಅವರ ಸಂಪರ್ಕದಲ್ಲಿದ್ದವರ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Previous Articleಅಣ್ಣಾಮಲೈ ಛಡಿಯೇಟು.
Next Article ಹನಿಟ್ರ್ಯಾಪ್-ಮುನಿರತ್ನ ವಿರುದ್ಧ ಚಾರ್ಜ್ ಷೀಟ್.

10 ಪ್ರತಿಕ್ರಿಯೆಗಳು
купить диплом после 11 класса купить диплом после 11 класса .
most trusted canadian online pharmacies
pharmacy prices compare
best canadian pharmacies
canadian pharcharmy online viagra
legitimate online pharmacy
canadian pharmacy online review
india online pharmacy
us online pharmacy
Заказать официальный диплом о высшем образовании : git.futaihulian.com/valp0305678139/8197557/-/issues/1