ಮಂಗಳೂರು,ಜೂ.10- ಮಾದಕ ವಸ್ತು ಎಂಡಿಎಂಎನ್ನು ಕಾರಿನಲ್ಲಿಟ್ಟುಕೊಂಡು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನಗರ ಪೊಲೀಸರು
ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ಪುದು ಗ್ರಾಮದ ಅಮ್ಮೆಮಾರ್ನ ಮಹಮ್ಮದ್ ಆಶ್ರಫ್ ಯಾನೆ ಚೋಟಾ ಅಶ್ರಫ್(43), ಪೆರ್ಮನ್ನೂರಿನ ಪಿಲಾರ್ ದಾರಂದಬಾಗಿಲು ನಿವಾಸಿ ದಾವೂದ್ ಫರ್ವೆಜ್ (36) ಬಂಧಿತ ಆರೋಪಿಗಳಾಗಿದ್ದಾರೆ.
ಬೆಂಗಳೂರಿನಿಂದ ಎಂಡಿಎಂಎ ಅನ್ನು ಖರೀದಿಸಿ ಕಾರಿನಲ್ಲಿ ಮಂಗಳೂರಿಗೆ ಬಂದು ನಗರದ ನೆಹರೂ ಮೈದಾನ ಪರಿಸರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ ಹೆಗಡೆ ಅವರ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ, ನೆಹರೂ ಮೈದಾನದಲ್ಲಿ ಇಬ್ಬರನ್ನು ಬಂಧಿಸಿದೆ
ಬಂಧಿತ ಆರೋಪಿಗಳಿಂದ ಒಟ್ಟು 55.5 ಗ್ರಾಂ ತೂಕದ 2,77,500 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಎರಡು ಮೊಬೈಲ್ ಫೋನ್ಗಳು, 3,230 ರೂ. ನಗದು, ಮಾರುತಿ ಕಾರು ಮತ್ತು ಡಿಜಿಟಲ್ ತೂಕ ಮಾಪನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳ ಪೈಕಿ ಮೊಹಮ್ಮದ್ ಅಶ್ರಫ್ ಯಾನೆ ಛೋಟಾ ಅಶ್ರಫ್ ಎಂಬಾತನ ವಿರುದ್ಧ ಈ ಹಿಂದೆ ಮಂಗಳೂರು ಗ್ರಾಮಾಂತರ ಠಾಣೆ ಹಾಗೂ ಬಂಟ್ವಾಳ ಠಾಣೆಯಲ್ಲಿ ಒಟ್ಟು 6 ಗಾಂಜಾ ಪ್ರಕರಣಗಳು ದಾಖಲಾಗಿದೆ. ಇನ್ನೊಬ್ಬ ಆರೋಪಿ ದಾವೂದ್ ಫರ್ವೆಜ್ ವಿರುದ್ಧ ಮಂಗಳೂರು ಉತ್ತರ, ಮಂಗಳೂರು ಗ್ರಾಮಾಂತರ, ಕಾರ್ಕಳ, ಉಡುಪಿ ಪೊಲೀಸ್ ಠಾಣೆಗಳಲ್ಲಿ ಒಟ್ಟು 6 ಗಾಂಜಾ ಪ್ರಕರಣಗಳು ದಾಖಲಾಗಿವೆ.
ಈ ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಸುದೀಪ್ ಎಂ ವಿ ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.
12 ವಿದ್ಯಾರ್ಥಿಗಳ ಬಂಧನ:
ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ 12 ಮಂದಿ ವಿದ್ಯಾರ್ಥಿಗಳನ್ನು ಕಳೆದ ವರ್ಷದ ಜುಲೈ ತಿಂಗಳಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಶಾನೂಫ್ ಅಬ್ದುಲ್ ಗಫೂರ್(21), ಗೋಕುಲ ಕೃಷ್ಣನ್(22), ಶಾರೂನ್ ಆನಂದ(19), ಅನಂತು ಕೆ.ಪಿ(18), ಮೊಹಮ್ಮದ್ ರಸೀನ್(22), ಅಮಲ್(21), ಶಾಹೀದ್ ಎಂ.ಟಿ.ಪಿ(22), ಫಹಾದ್ ಹಬೀಬ್(22), ಅಭಿಷೇಕ(21), ನಿದಾಲ್(21), ಮೊಹಮ್ಮದ್ ರಿಶಿನ್(22), ರಿಜಿನ್ ರಿಯಾಜ್(22) ಬಂಧಿತರು. ಬಂಧಿತ ವಿದ್ಯಾರ್ಥಿಗಳೆಲ್ಲರೂ ಕೇರಳ ರಾಜ್ಯದವರಾಗಿದ್ದಾರೆ.
Previous ArticleCM ಅಲ್ಲ ಕಂಡಕ್ಟರ್ ಸಿದ್ದರಾಮಯ್ಯ?
Next Article Express ಹೆದ್ದಾರಿ ಅಲ್ಲ ಯಮ ಸ್ವರೂಪಿ ದಾರಿ
10 ಪ್ರತಿಕ್ರಿಯೆಗಳು
cost generic clomid without a prescription cost cheap clomid online can i get generic clomiphene without insurance get clomid online buy cheap clomiphene price cost cheap clomid without rx can i purchase generic clomid for sale
Thanks an eye to sharing. It’s first quality.
More content pieces like this would insinuate the интернет better.
order amoxicillin generic – order ipratropium pills order ipratropium pill
buy cheap generic azithromycin – buy zithromax buy nebivolol 5mg for sale
cheap augmentin – atbioinfo.com order ampicillin
purchase coumadin generic – https://coumamide.com/ order cozaar 50mg for sale
meloxicam 7.5mg without prescription – swelling order mobic 15mg generic
online ed medications – site buy ed pills cheap
buy amoxicillin generic – https://combamoxi.com/ buy amoxil generic