Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !
    Viral

    ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !

    vartha chakraBy vartha chakraಜುಲೈ 14, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು:
    ರಾಜ್ಯದ ಖಾಸಗಿ ದೇವಸ್ಥಾನಗಳಲ್ಲಿ ಅವ್ಯವಹಾರ ನಡೆದರೆ ಐದು ವರ್ಷ ಸರ್ಕಾರ ವಶಕ್ಕೆ ಪಡೆಯಲು ಅವಕಾಶ ಇದೆ. ಇದೇ ತತ್ವವನ್ನು ಆಧರಿಸಿ ಬೆಂಗಳೂರಿನ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ ವಶಕ್ಕೆ ಪಡೆಯಲಾಗಿದೆ ಎಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
    ಐತಿಹಾಸಕ ಗಾಳಿ ಆಂಜನೇಯ ಸ್ವಾಮಿ ದೇವಾಲಯವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ಪಡೆದಿರುವುದಕ್ಕೆ ಟ್ರಸ್ಟ್​ ಪದಾಧಿಕಾರಿಗಳು ಭಕ್ತರಿಂದ ತೀವ್ರ ಖಂಡನೆ ವ್ಯಕ್ತವಾಗುತ್ತಿರುವುದಕ್ಕೆ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಸಚಿವರು, ಖಾಸಗಿ ದೇವಸ್ಥಾನಗಳಲ್ಲಿ ಅವ್ಯವಹಾರ ನಡೆದರೆ ಐದು ವರ್ಷ ಸರ್ಕಾರ ವಶಕ್ಕೆ ಪಡೆಯಲು ಅವಕಾಶ ಇದೆ ಎಂದು ಹೇಳಿದ್ದಾರೆ.
    ಈ ಕುರಿತಂತೆ ಮಾತನಾಡಿದ ಅವರು, ರಾಜ್ಯದಲ್ಲಿರುವ ಸುಮಾರು 1.85 ಲಕ್ಷ ದೇವಸ್ಥಾನಗಳಲ್ಲಿ 35 ಸಾವಿರ ಮುಜರಾಯಿಗೆ ಒಳಪಟ್ಟಿವೆ. ಉಳಿದ 1,50 ಲಕ್ಷ ಖಾಸಗಿ ದೇವಸ್ಥಾನಗಳಾಗಿವೆ. ಖಾಸಗಿ ದೇವಸ್ಥಾನಗಳಲ್ಲಿ ಅವ್ಯವಹಾರ ನಡೆದರೆ ಐದು ವರ್ಷ ಸರ್ಕಾರ ವಶಕ್ಕೆ ಪಡೆಯಲು ಅವಕಾಶ ಇದೆ ಎಂದು ಹೇಳಿದರು.
    ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಅವ್ಯವಹಾರ ನಡೆದಿದೆ. ಹಣ ತೆಗೆದುಕೊಂಡು ಹೋಗುತ್ತಿದ್ದ ವಿಡಿಯೋ ನೀವೇ ನೋಡಿದ್ದೀರಿ, ಸಾರ್ವಜನಿಕ ವಲಯದಲ್ಲಿ ಈ ಬಗ್ಗೆ ವ್ಯಾಪಕ ಚರ್ಚೆಗಳಾಗಿವೆ ಆದ್ದರಿಂದಲೇ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಸ್ಪಷ್ಟಪಡಿಸಿದರು.
    ಐದು ವರ್ಷ ಆದ ಮೇಲೆ ದೇವಸ್ಥಾನವನ್ನು ಮರಳಿ ಟ್ರಸ್ಟ್ ಗೆ ವಾಪಸ್ ಕೊಡುತ್ತೇವೆ. ಈ ಹಿಂದೆ ರಾಜ್ಯದಲ್ಲಿ ಆಡಳಿತ ನಡೆಸಿದ ಬಿಜೆಪಿ‌ ಸರ್ಕಾರ ಎಂಟು ದೇವಸ್ಥಾನಗಳನ್ನು ವಶಕ್ಕೆ ಪಡೆದಿತ್ತು. ಅವ್ಯವಹಾರ ನಡೆದಿತ್ತು ಎನ್ನುವ ಕಾರಣದಿಂದ ಮುಜರಾಯಿ ಇಲಾಖೆ ಸುಪರ್ದಿಗೆ ಪಡೆದುಕೊಂಡು ವಾಪಾಸ್​ ಕೊಟ್ಟಿದೆ. ಖಾಸಗಿ ದೇವಸ್ಥಾನಗಳಲ್ಲಿ ಅವ್ಯಹಾರ ನಡೆದಾಗ ವಶಕ್ಕೆ ಪಡೆಯುವ ಅಧಿಕಾರ ಸರ್ಕಾರಕ್ಕೆ ಇದೆ ಎಂದರು.
    ಬಿಜೆಪಿ ಸರ್ಕಾರ ದೇವಾಲಯ ಸುಪರ್ದಿಗೆ ಪಡಿಸಿಕೊಂಡಾಗ ಏಕೆ ಮಾತನಾಡಿಲ್ಲ? ಗಾಳಿ ಆಂಜನೇಯ ದೇವಸ್ಥಾನದಲ್ಲಿ 25 ವರ್ಷಗಳಿಂದ ಅವ್ಯವಹಾರ ನಡೆಯುತ್ತಿದೆ. ಆಡಳಿತ ಮಂಡಳಿಯವರು ದೇವಸ್ಥಾನವನ್ನು ಚೆನ್ನಾಗಿ ನಡೆಸಿಕೊಂಡು ಹೋಗುತ್ತೇವೆ ಎಂದು ಹೇಳಿದರೆ ವಾಪಾಸ್​ ಕೊಡುತ್ತೇವೆ ಎಂದು ಭರವಸೆ ನೀಡಿದರು.

    ಬಿಜೆಪಿ ಬೆಂಗಳೂರು ವ್ಯವಹಾರ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !
    Next Article ಪೊಲೀಸ್ ಆಡಳಿತಕ್ಕೆ ಮೇಜರ್ ಸರ್ಜರಿ.
    vartha chakra
    • Website

    Related Posts

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    ಡಿಸೆಂಬರ್ 6, 2025

    ಶನಿವಾರವೂ 400ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

    ಡಿಸೆಂಬರ್ 6, 2025

    ಬೇಸ್ತು ಬಿದ್ದು ಪರಾರಿಯಾದ ಪತಿರಾಯ!

    ಡಿಸೆಂಬರ್ 6, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    ಶನಿವಾರವೂ 400ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

    ಬೇಸ್ತು ಬಿದ್ದು ಪರಾರಿಯಾದ ಪತಿರಾಯ!

    ದರ್ಶನ್‌ಗೆ ದುಡ್ಡು ಎಲ್ಲಿಂದ ಬಂತು?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomasnoids ರಲ್ಲಿ ಪ್ರತಿಪಕ್ಷಗಳ ದುರ್ಬಲಗೊಳಿಸಿದ ಪವಾರ್-ಅದಾನಿ ಭೇಟಿ | Sharad Pawar | Adani
    • promoulsl ರಲ್ಲಿ ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • gpsites.win ರಲ್ಲಿ ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    Latest Kannada News

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    ಡಿಸೆಂಬರ್ 6, 2025

    ಶನಿವಾರವೂ 400ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

    ಡಿಸೆಂಬರ್ 6, 2025

    ಬೇಸ್ತು ಬಿದ್ದು ಪರಾರಿಯಾದ ಪತಿರಾಯ!

    ಡಿಸೆಂಬರ್ 6, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೆಂಗಳೂರಲ್ಲಿ ಮನೆ ಕಟ್ಟೋಕೆ ಏನೇನ್ ರೂಲ್ಸ್ #varthachakra #buildingahouse #gba #bbmp #bangalorerealestate
    Subscribe