ಬೆಂಗಳೂರು.
ತಮ್ಮ ಒಡೆತನದ ಸಂಸ್ಥೆಯಲ್ಲಿ ಕೆಲಸ ಮಾಡುವ ಶಿಕ್ಷಕಿಗೆ ಲೈಂಗಿಕ ದೌರ್ಜನ್ಯ ದ ಆರೋಪದಲ್ಲಿ ಸಿಲುಕಿರುವ ಕಾಂಗ್ರೆಸ್ ಮುಖಂಡ ಗುರಪ್ಪ ನಾಯ್ಡು ಅವರಿಗೆ ಪಕ್ಷದಿಂದ ಗೇಟ್ ಪಾಸ್ ನೀಡಲಾಗಿದೆ.
ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿಯಲ್ಲಿ
ಕಾಂಗ್ರೆಸ್ ಮುಖಂಡ ಡಾ. ಗುರಪ್ಪ ನಾಯ್ಡು ಅವರ ವಿರುದ್ಧಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನವೆಂಬರ್ 26ರಂದು ನಾಯ್ಡು ಅವರು ತ್ಯಾಗರಾಜನಗರದಲ್ಲಿ ನಡೆಸುತ್ತಿರುವ ಶಾಲೆಯ ಶಿಕ್ಷಕಿಯೊಬ್ಬರು ನೀಡಿರುವ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಶಿಕ್ಷಕಿಯ ಹೇಳಿಕೆಯನ್ನು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಆರೋಪಿ ಗುರಪ್ಪ ನಾಯ್ಡು ಕೆಲವು ಶಿಕ್ಷಕಿಯರು ಹಾಗೂ ಸಿಬ್ಬಂದಿಯ ಗಮನಕ್ಕೆ ಬಾರದಂತೆ ಬೆತ್ತಲೆ ಹಾಗೂ ಅಶ್ಲೀಲ ವಿಡಿಯೊಗಳನ್ನು ಚಿತ್ರೀಕರಿಸಿಕೊಂಡು ಇಟ್ಟುಕೊಂಡಿದ್ದಾರೆ. ಇವುಗಳನ್ನು ಇಟ್ಟುಕೊಂಡು ಮಹಿಳಾ ಉದ್ಯೋಗಿಗಳನ್ನು ಹೆದರಿಸುತ್ತಿದ್ದಾರೆ. ಹೇಳಿದ ಹಾಗೆ ನಡೆದುಕೊಳ್ಳದಿದ್ದರೆ ವಿಡಿಯೊ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆ.ಹೆಣ್ಣು ಮಕ್ಕಳನ್ನು ಲೈಂಗಿಕ ತೃಷೆಗೆ ಬಳಸಿಕೊಂಡಿದ್ದಾರೆ ಎಂದು ಶಿಕ್ಷಕಿ ದೂರಿನಲ್ಲಿ ವಿವರಿಸಿದ್ದಾರೆ.
ಈ ಹಿಂದೆಯೇ ಗುರಪ್ಪ ನಾಯ್ಡು ಅವರ ವಿರುದ್ಧ ದೂರು ನೀಡಲು ಕೆಲವು ಶಿಕ್ಷಕಿಯರು ಹಾಗೂ ಸಿಬ್ಬಂದಿ ನಿರ್ಧರಿಸಿದ್ದೆವು. ಆದರೆ, ಗುರಪ್ಪ ನಾಯ್ಡು ಪ್ರಭಾವಿ ಹಾಗೂ ಆರ್ಥಿಕವಾಗಿ ಬಲಾಡ್ಯರಾಗಿದ್ದು ಅವರನ್ನು ಎದುರಿಸುವುದು ಕಷ್ಟ ಎಂದು ಸುಮ್ಮನಿದ್ದೆವು ಎಂದೂ ದೂರಿನಲ್ಲಿ ಎಫ್ ಐ ಆರ್ ನಲ್ಲಿ ಉಲ್ಲೇಖಿಸಲಾಗಿದೆ.
ಈ ಎಲ್ಲಾ ಅಂಶಗಳನ್ನು ವಿವರವಾಗಿ ಪರಿಶೀಲಿಸಿದ ಹಿರಿಯ ನಾಯಕ ಕೆ ರೆಹಮಾನ್ ಖಾನ್ ನೇತೃತ್ವದ ಪ್ರದೇಶ ಕಾಂಗ್ರೆಸ್ಸಿನ ಶಿಸ್ತು ಸಮಿತಿಯು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿರುವ ಗುರಪ್ಪ ನಾಯ್ಡು ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಅವರಿಗೆ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ.
Previous Articleಶತಾಯುಷಿಗೆ ಸುಪ್ರೀಂ ಕೋರ್ಟ್ ಜಾಮೀನು.
Next Article ಯುವಜನರಿಗೆ ಜಿಮ್ ನಲ್ಲಿ ಹೃದಯಾಘಾತ!