ನವದೆಹಲಿ: ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಗ್ಯಾನ್‌ವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ವಾರಣಾಸಿ ಸಿವಿಲ್ ಕೋರ್ಟ್ ನಡೆಸುತ್ತಿದ್ದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಗ್ಯಾನ್‌ವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಮಸೀದಿಯ ಆವರಣದಲ್ಲಿ ವಿಡಿಯೋಗ್ರಫಿ ಸರ್ವೆಗೆ ಆದೇಶ ನೀಡಿದ್ದ ವಾರಣಾಸಿ ಸಿವಿಲ್ ಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಗೆ ಗುರುವಾರ ಸುಪ್ರೀಂಕೋರ್ಟ್ ಸಮ್ಮತಿ ಸೂಚಿಸಿದೆ. ಅಂಜುಮನ್ ಇಂತೇಜಾಮೀಯ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಡಿ.ವೈ ಚಂದ್ರಚೂಡ್ ನೇತೃತ್ವದ ದ್ವಿಸದಸ್ಯ ಪೀಠ ವಿಚಾರಣೆಗೆ ಒಪ್ಪಿಗೆ ಸೂಚಿಸಿತು.
ವಾದ ಪ್ರತಿವಾದ ಆಲಿಸಿದ ಸುಪ್ರೀಂ ಕೋರ್ಟ್ ನಾಳೆ ಈ ಬಗ್ಗೆ ವಿಚಾರಣೆ ನಡೆಸಲಾಗುವುದು. ಅಲ್ಲಿಯವರೆಗೂ ವಾರಣಾಸಿ ಸಿವಿಲ್ ಕೋರ್ಟ್‌ಗೆ ಅರ್ಜಿದಾರರು ಹೋಗದಂತೆ ಹಾಗೂ ಆದೇಶಕ್ಕಾಗಿ ಕೋರ್ಟ್‌ಗೆ ಒತ್ತಾಯಿಸದಂತೆ ಸೂಚನೆ ನೀಡಿತು. ಈ ಸಂಬಂಧ ಯಾವುದೇ ಆದೇಶಗಳನ್ನು ನೀಡದಂತೆ ಸಿವಿಲ್ ಕೋರ್ಟ್‌ಗೂ ಸೂಚನೆ ನೀಡಿತು.
ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಮುಂದೂಡಿದೆ.
ಗ್ಯಾನ್‌ವಾಪಿ ಮಸೀದಿ ವಿಚಾರ: ವಾರಣಾಸಿ ಕೋರ್ಟ್ ವಿಚಾರಣೆಗೆ ಸುಪ್ರೀಂ ತಡೆ
Previous ArticleFOOTPATH ಮೇಲೆ ಮಲಗಿ ಮೃತಪಟ್ಟರು…
Next Article ಬಿಜೆಪಿ ಮುಖಂಡನ ಸಾವಿಗೆ ಹೊಸ Twist!