ಬೆಂಗಳೂರು, ಅ. 01: ಜನಾರ್ದನ ರೆಡ್ಡಿಗೆ ತಮ್ಮ ರಾಜಕೀಯದ ಪ್ರಮುಖ ನೆಲೆಯಾಗಿರುವ ಬಳ್ಳಾರಿ ಜಿಲ್ಲೆಯ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಿ ಬಿಗ್ ರಿಲೀಫ್ ನೀಡಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನ ಸಭೆಯ ಶಾಸಕ ಜನಾರ್ದನ ರೆಡ್ಡಿ ಈ ಹಿಂದೆ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲುಪಾಲಾಗಿದ್ದರು. ನಂತರ ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು 2015 ರ ಜನವರಿ 23 ರಂದು ಜನಾರ್ದನ ರೆಡ್ಡಿಗೆ , ಬಳ್ಳಾರಿ, ಕಡಪ, ಅನಂತಪುರಕ್ಕೆ ತೆರಳಲು ಸುಪ್ರೀಂ ಕೋರ್ಟ್ ಪೂರ್ವಾನುಮತಿ ಪಡೆಯವುದನ್ನು ಕಡ್ಡಾಯಗೊಳಿಸಿ ಷರತ್ತುಬದ್ಧ ಜಾಮೀನನ್ನು ನೀಡಿತ್ತು.
ಇದೀಗ ನ್ಯಾ. ಎಂಎಂ ಸುಂದರೇಶ್ ನೇತೃತ್ವದ ದ್ವಿ ಸದಸ್ಯ ಪೀಠದಿಂದ ಹೊಸ ಆದೇಶ ಹೊರಬಿದ್ದಿದ್ದು ಬಳ್ಳಾರಿ ಪ್ರವೇಶಕ್ಕೆ ರೆಡ್ಡಿಗಿದ್ದ ನಿರ್ಬಂಧವನ್ನು ಸುಪ್ರೀಂ ಕೋರ್ಟ್ ತೆರವುಗೊಳಿಸಿದೆ. ಇದರೊಂದಿಗೆ ರೆಡ್ಡಿ ಬಳ್ಳಾರಿ ಎಂಟ್ರಿ ನಿರಾಳವಾಗಿದ್ದು ಇನ್ನುಮುಂದೆ ಮುಕ್ತವಾಗಿ ಬಳ್ಳಾರಿಗೆ ತೆರಳಬಹುದಾಗಿದೆ.