Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಯಲಲಿತಾ ಆಸ್ತಿ ಏನೆಲ್ಲಾ ಇದೆ ಗೊತ್ತಾ
    Viral

    ಜಯಲಲಿತಾ ಆಸ್ತಿ ಏನೆಲ್ಲಾ ಇದೆ ಗೊತ್ತಾ

    vartha chakraBy vartha chakraಜನವರಿ 31, 202524 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.31-ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರ ಚಿನ್ನಾಭರಣಗಳನ್ನು ಕೊಂಡೊಯ್ಯಲು
    ಛಾಯಾಗ್ರಾಹಕರು, ವಿಡಿಯೋಗ್ರಾಫರ್ ಮತ್ತು ಆರು ದೊಡ್ಡ ಪೆಟ್ಟಿಗೆಗಳ (ಟ್ರಂಕ್) ಜೊತೆಗೆ ಅಗತ್ಯ ಭದ್ರತೆಯೊಂದಿಗೆ ಆಗಮಿಸುವಂತೆ ತಮಿಳುನಾಡು ಸರ್ಕಾರಕ್ಕೆ ನಗರದ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ತಿಳಿಸಿದೆ.
    ಆರ್‌ಟಿಐ ಕಾರ್ಯಕರ್ತ ಟಿ.ನರಸಿಂಹಮೂರ್ತಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನಗರದ 36ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು, 2025ರ ಫೆಬ್ರವರಿ 14 ಮತ್ತು 15ರಂದು ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಸೂಚನೆ ನೀಡಿದರು.
    ಜಯಲಲಿತಾ ಅವರ ಆಸ್ತಿಗೆ ತಾವೇ ವಾರಸುದಾರರು ಎಂದು ಅವರ ಸಹೋದರನ ಸಂಬಂಧಿಗಳು ಸಲ್ಲಿಸಿದ್ದ ಮೇಲ್ಮನವಿಗಳನ್ನು ಹೈಕೋರ್ಟ್ ಇತ್ತೀಚೆಗೆ ವಜಾಗೊಳಿಸಿ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯ ಮತ್ತೊಮ್ಮೆ ಈ ಆದೇಶ ಮಾಡಿದೆ.
    ಏನೆಲ್ಲಾ ವಸ್ತುಗಳಿವೆ?:
    7,040 ಗ್ರಾಂ ತೂಕದ 468 ಬಗೆಯ ಚಿನ್ನ ಹಾಗೂ ವಜ್ರಖಚಿತ ಆಭರಣಗಳು, 700 ಕೆಜಿ ತೂಕದ ಬೆಳ್ಳಿ ಆಭರಣಗಳು, 740 ದುಬಾರಿ ಚಪ್ಪಲಿಗಳು, 11,344 ರೇಷ್ಮೆ ಸೀರೆಗಳು, 250 ಶಾಲು, 12 ರೆಫ್ರಿಜಿರೇಟರ್, 10 ಟಿವಿ ಸೆಟ್, 8 ವಿಸಿಆರ್, 1 ವಿಡಿಯೋ ಕ್ಯಾಮೆರಾ, 4 ಸಿಡಿ ಪ್ಲೇಯರ್, 2 ಆಡಿಯೋ ಡೆಕ್, 24 ಟೂ-ಇನ್ ಒನ್ ಟೇಪ್ ರೆಕಾರ್ಡರ್, 1040 ವಿಡಿಯೋ ಕ್ಯಾಸೆಟ್, 3 ಐರನ್ ಲಾಕರ್, 1,93,202 ರೂ. ನಗದು ಸೇರಿದಂತೆ ಹಲವು ವಸ್ತುಗಳನ್ನು ಜಯಲಲಿತಾ ಅವರಿಂದ ಜಪ್ತಿ ಮಾಡಲಾಗಿತ್ತು.
    ಪ್ರಕರಣದ ಹಿನ್ನೆಲೆ:
    ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಬೆಂಗಳೂರಿನ ವಿಶೇಷ ನ್ಯಾಯಾಲಯವು ಜಯಲಲಿತಾಗೆ ನಾಲ್ಕು ವರ್ಷ ಜೈಲು ಮತ್ತು 100 ಕೋಟಿ ರೂ. ದಂಡ ವಿಧಿಸಿ 2014ರ ಸೆ.27ರಂದು ಆದೇಶಿಸಿತ್ತು. ಜೊತೆಗೆ, ಜಪ್ತಿ ಮಾಡಲಾದ ಬೆಲೆಬಾಳುವ ವಸ್ತುಗಳನ್ನು ಆರ್‌ಬಿಐ, ಎಸ್‌ಬಿಐಗೆ ಅಥವಾ ಸಾರ್ವಜನಿಕ ಹರಾಜು ಮೂಲಕ ಮಾರಾಟ ಮಾಡಬೇಕು. ಅದರಿಂದ ಬಂದ ಹಣವನ್ನು ದಂಡದ ಮೊತ್ತಕ್ಕೆ ಹೊಂದಾಣಿಕೆ ಮಾಡಬೇಕು ಎಂದು ನಿರ್ದೇಶಿಸಿತ್ತು. ಈ ನಡುವೆ ಜಯಲಿತಾ ಮೃತಪಟ್ಟಿದ್ದರು.
    ಆದ್ದರಿಂದ ಜಯಲಲಿತಾರ ಒಡವೆಗಳ ಹಸ್ತಾಂತರ ಕುರಿತು ಆರ್‌ಟಿಐ ಕಾರ್ಯಕರ್ತ ನರಸಿಂಹ ಮೂರ್ತಿ ಅವರು ಜಯಲಲಿತಾ ಅವರ ವಸ್ತುಗಳ ವಿಲೇವಾರಿಗೆ ಕೈಗೊಂಡಿರುವ ಕ್ರಮಗಳ ಮಾಹಿತಿ ನೀಡುವಂತೆ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು

    Verbattle
    Verbattle
    Verbattle
    ಚಿನ್ನ ತಮಿಳುನಾಡು ನ್ಯಾಯ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಮರಿ ರೌಡಿಯ ಅಟ್ಟಹಾಸಕ್ಕೆ ಬೆಚ್ಚಿದ ಜನ
    Next Article ದುಪ್ಪಟ್ಟು ಲಾಭಕ್ಕಾಗಿ ದಿವಾಳಿಯಾದ
    vartha chakra
    • Website

    Related Posts

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಜನವರಿ 22, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಡಿ.ಕೆ. ಸುರೇಶ್ ಚುಚ್ಚುಮಾತು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Аутсорсинг бухгалтерии_uwmi ರಲ್ಲಿ JDS-BJP ಮೈತ್ರಿಗೆ ಆಘಾತ-NDA ಅಭ್ಯರ್ಥಿ ಸೋಲು
    • Daviddek ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • Daviddek ರಲ್ಲಿ The Essence Of Gandhi Jayanthi | Gandhi Jayanthi 2023
    Latest Kannada News

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಜನವರಿ 22, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.