ಮೋದಿಯವರ ಆಡಳಿತದಲ್ಲಿ ದುಡ್ಡಿದ್ದವರು ಮಾತ್ರ ದುನಿಯಾ ನಡೆಸಲು ಸಾಧ್ಯ. ಬಡವರ ಪಾಲಿಗೆ ಮೋದಿ ಸರ್ಕಾರ ಶಾಪಗ್ರಸ್ತ ಸರ್ಕಾರವಾಗಿದೆ ಎಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ ಆಪಾದಿಸಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಅಚ್ಚೇದಿನದ ಪರಿಣಾಮ ಗೃಹಬಳಕೆಯ ಸಿಲಿಂಡರ್ ಬೆಲೆ ಸಾವಿರದ ಗಡಿ ದಾಟಿ ಹೋಗಿದೆ. ಕೇಂದ್ರದ ಉಜ್ವಲಾ ಯೋಜನೆಯ ಮೂಲಕ ಗ್ಯಾಸ್ ಸಂಪರ್ಕ ಪಡೆದಿದ್ದ ಬಡಪಾಯಿ ಬಡವ ಗ್ಯಾಸ್ ಬೆಲೆಯೇರಿಕೆಯ ಶಾಕ್‌ಗೆ ತತ್ತರಿಸಿ ಹೋಗಿದ್ದಾನೆ. ಸೌದೆ ಬಿಟ್ಟು ಸಿಲಿಂಡರ್ ಮೊರೆ ಹೋಗಿದ್ದ ಬಡವನಿಗೆ ದರ ಏರಿಕೆಯಿಂದ ಹಳೆ ಗಂಡನ ಪಾದವೇ ಗತಿ ಎಂಬಂತೆ ಸೌದೆಯೇ ಆಸರೆಯಾಗಿದೆ ಎಂದು ಹೇಳಿದ್ದಾರೆ.
ಹೊಗೆ ರಹಿತ ಅಡುಗೆ ಮನೆ ಉಜ್ವಲಾ ಯೋಜನೆಯ ಮೂಲ ಉದ್ದೇಶ. ಆದರೆ ಕೇಂದ್ರ ಸಿಲಿಂಡರ್ ಬೆಲೆಯನ್ನು ಯದ್ವಾತದ್ವಾ ಏರಿಸಿದರೆ ಬಡವನಿಗೆ ಕೊಳ್ಳುವ ಶಕ್ತಿಯೆಲ್ಲಿದೆ.? ಬಡವರು ಈ ದರದಲ್ಲಿ ಸಿಲಿಂಡರ್ ಖರೀದಿಸಿ ಅನ್ನ ಬೇಯಿಸಲು ಸಾಧ್ಯವೆ.? ಬಡವರು ಅನ್ಯಮಾರ್ಗವಿಲ್ಲದೆ ಅಡುಗೆಗೆ ಸೌದೆಯನ್ನೇ ಬಳಸಬೇಕು. ಹಾಗಾದರೆ ಉಜ್ವಲಾ ಯೋಜನೆಯ ಸಾರ್ಥಕತೆಯೇನು.?ಎಂದು ಪ್ರಶ್ನಿಸಿದ್ದಾರೆ.
ಬೆಲೆಯೇರಿಕೆ ಕೇವಲ ಗ್ಯಾಸ್‌ಗೆ ಮಾತ್ರ ಸೀಮಿತವಾಗಿಲ್ಲ. ಪ್ರತಿಯೊಂದು ವಸ್ತುವಿನ ಬೆಲೆಯೂ ಕೈಗೆಟುಕದಂತಾಗಿದೆ. ಬೆಲೆಯೇರಿಕೆಯಿಂದ ಆಮ್ ಆದ್ಮಿಯ ಪಾಡು ಅವನಿಗಷ್ಟೇ ಗೊತ್ತು. ಸರ್ಕಾರ ಗ್ಯಾಸ್ ಮೇಲಿನ ಸಬ್ಸಿಡಿಯನ್ನು ಸುಳಿವೇ ಕೊಡದೆ ರದ್ದು ಮಾಡಿದೆ. ಬಡವರು ಬದುಕಬಾರದು ಎನ್ನುವುದು ಮೋದಿ ಸರ್ಕಾರದ ಉದ್ದೇಶವೇ? ಎಂದಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
