ಮೋಹಕ ತಾರೆ ನಟಿ ರಮ್ಯಾ ಸಿನಿಮಾರಂಗಕ್ಕೆ ಸಂಬಂಧಪಟ್ಟ ವಿಚಾರಗಳ ಬಗ್ಗೆ ಮಾತನಾಡುತ್ತಲೇ ಇರುತ್ತಾರೆ. ಈಗ ಸಿನಿಮಾರಂಗದಲ್ಲಿ ಇರುವ ಲಿಂಗ ತಾರತಮ್ಯದ ಬಗ್ಗೆ ಮಾತನಾಡಿದ್ದಾರೆ. ಸಿನಿಮಾರಂಗದಲ್ಲಿ ನಟರಿಗೆ ಇರುವ ಮಾನ್ಯತೆ, ನಟಿಯರಿಗೆ ಇಲ್ಲ. ಇದು ಬದಲಾಗಬೇಕು ಎಂದಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಸಿನಿಮಾರಂಗದಲ್ಲಿ ನಟಿಯರು ಹೇಗೆ ಇರಬೇಕು ಎನ್ನುವ ಮಾನದಂಡವನ್ನು ನಿಗದಿಪಡಿಸಿರುವುದು ಪುರುಷರು. ಮಹಿಳೆಯರು ನೀವು ನೀವಾಗಿರಲು ಬೇರೆ ದಾರಿಯನ್ನು ಅರಿತಿರಬೇಕು. ಜಗತ್ತು ನೀವು ಹೇಗಿರಬೇಕು ಎಂದು ನಿರ್ಧರಿಸಲು ಬಿಡಬೇಡಿ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಬಣ್ಣದ ಜಗತ್ತಿನ ಕರಾಳ ಮುಖವನ್ನು ನಟಿ ರಮ್ಯಾ ಬಿಚ್ಚಿಟ್ಟಿದ್ದಾರೆ.
“ಪುರುಷನಾದವನು ಸಂಪೂರ್ಣವಾಗಿ ತಲೆಕೂದಲು ಉದುರಿದರೂ ಟೋಪಿ ಹಾಕಿಕೊಳ್ಳಬಹುದು. ಮುಖದಲ್ಲಿನ ಒಂದೊಂದು ಗಲ್ಲವೂ 5 ಕೆಜಿ ಇರಬಹುದು. 65 ವರ್ಷವಾದರೂ ಆತ ಹೀರೊ ಆಗುತ್ತಾನೆ. ಆದರೆ ಇದೇ ಮಹಿಳೆಗೆ ಅನ್ವಯವಾಗಿ ಆಕೆ ತೂಕ ಹೆಚ್ಚಿಸಿಕೊಂಡರೆ ಆಂಟಿ, ಬುಡ್ಡಿ, ಅಜ್ಜಿ ಎಂದು ಕರೆಯಲಾಗುತ್ತದೆ.” ಎಂದು ರಮ್ಯಾ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.