ಹಾಸನ,ಜು.4-
ನಾಲ್ಕು ಅಡಿ ಜಾಗದ ಕಾರಣಕ್ಕೆ ದಾಯಾದಿಗಳ ನಡುವೆ ಶುರುವಾದ ಜಗಳವು ಓರ್ವನ ಕೊಲೆ ಮತ್ತೊಬ್ಬ ಇರಿತಕ್ಕೊಳಗಾಗಿ ಅಂತ್ಯವಾಗಿರುವ ದಾರುಣ ಘಟನೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದ ದಮ್ಮನಿಂಗಳ ಗ್ರಾಮದಲ್ಲಿ ನಡೆದಿದೆ.
ದಮ್ಮನಿಂಗಳ ಗ್ರಾಮದ ದಯಾನಂದ್ (40) ಮೃತ ದುರ್ದೈವಿಯಾಗಿದ್ದಾನೆ,ಜಲಜೀವನ್ ಮಿಷನ್ ಯೋಜನೆಯಿ ನೀರಿನ ನಲ್ಲಿ ಸಂಪರ್ಕ ಅಳವಡಿಸುವ ಜಾಗದ ವಿಷಯಕ್ಕೆ ದಯಾನಂದ್ ಹಾಗೂ ವರುಣ್ ನಡುವೆ ಜಗಳ ಆರಂಭವಾಗಿತ್ತು.
ಜಗಳ ವಿಕೋಪಕ್ಕೆ ತಿರುಗಿದ್ದು ಸಹೋದರರು ಚಾಕು ಹಾಗೂ ಮಾರಕಾಸ್ತ್ರಗಳಿಂದ ಪರಸ್ಪರ ಹಲ್ಲೆ ಮಾಡಿಕೊಂಡಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡ ದಯಾನಂದ್ ಸ್ಥಳದಲ್ಲೇ ಮೃತಪಟ್ಟರೆ,ಗಂಭೀರವಾಗಿ ಗಾಯಗೊಂಡ
ವರುಣ್ (36) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮನೆಯ ಪಕ್ಕದ ನಾಲ್ಕು ಅಡಿ ಜಾಗಕ್ಕಾಗಿ ಹಲವಾರು ವರ್ಷಗಳಿಂದ ವ್ಯಾಜ್ಯ ನಡೆಯುತ್ತಿತ್ತು. ಇದೇ ಜಾಗಕ್ಕಾಗಿ ಸಹೋದರರ ನಡುವೆ ಶುರುವಾದ ಜಗಳವು ಕೊಲೆಯಲ್ಲಿ ಅಂತ್ಯವಾಗಿದೆ.
ಸ್ಥಳಕ್ಕೆ ಅಪರ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್ ನಾಯ್ಡು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶ್ರವಣಬೆಳಗೊಳ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆಯನ್ನು ಕೈಗೊಂಡಿದ್ದಾರೆ.
Previous Article4 ತಿಂಗಳಿಗೊಮ್ಮೆ ಪ್ರಜ್ವಲ್ ಮಾಡಿಸಿಕೊಳ್ಳುತ್ತಿದ್ದ ಪರೀಕ್ಷೆ.
Next Article ಸಿದ್ದರಾಮಯ್ಯ ಅವರ ಬಟ್ಟೆ ಮಾತ್ರ ಶುದ್ಧವಂತೆ.!