ಬೆಂಗಳೂರು: ಸಿನಿಮಾ ನಿರ್ದೇಶಕ, ಅಂತಾರಾಷ್ಟ್ರೀಯ ವನ್ಯಜೀವಿ ಛಾಯಾಗ್ರಾಹಕ ಕೆ.ಎನ್.ಮೋಹನ್ ಕುಮಾರ್ (56) ಸೋಮವಾರ ಹೃದಯಾಘಾತದಿಂದ ಕೊನೆಯುಸಿರೆಳೆದರು.
ರಂಗಭೂಮಿ ಹಿನ್ನೆಲೆಯಿಂದ ಬಂದ ಮೋಹನ್ ಕುಮಾರ್ ಅವರು ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರಸಾರವಾದ ‘ಜಾನಪದ’ ಕಾರ್ಯಕ್ರಮದ ನಿರೂಪಕರಾಗಿ ಕಿರುತೆರೆ ಪ್ರವೇಶಿಸಿ ಜನಪ್ರಿಯತೆ ಗಳಿಸಿದ್ದರು.
ಎಂಜಿನಿಯರ್ ಆಗಿದ್ದ ಇವರು ರಂಗಭೂಮಿ, ಧಾರಾವಾಹಿ, ಪತ್ರಿಕೋದ್ಯಮ, ಪ್ರಕಾಶನ ಹೀಗೆ ಹಲವು ಕ್ಷೇತ್ರಗಳಲ್ಲಿ ತಮ್ಮ ಛಾಪು ಮೂಡಿಸಿದ್ದರು. ‘ಮೈಸೂರು ಮಲ್ಲಿಗೆ’ ಸಿನಿಮಾದ ನಾಯಕನಿಗೆ ಕಂಠದಾನ ಮಾಡಿದ್ದರು.
ಪತ್ನಿ ವತ್ಸಲಾ ಮೋಹನ್ ಅವರ ‘ಸಜ್ಜಾದನಾ ಗಣೇಶ’ ಕಾದಂಬರಿ ಆಧರಿಸಿ 2016ರಲ್ಲಿ ‘ಬೊಂಬೆಯಾಟ’ ಮಕ್ಕಳ ಸಿನಿಮಾವನ್ನು ನಿರ್ದೇಶಿಸಿದರು. ರಷ್ಯಾದ ಮಾಸ್ಕೋದಲ್ಲಿ ನಡೆದ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಆಯ್ಕೆಯಾದ ಏಕೈಕ ಭಾರತೀಯ ಸಿನಿಮಾ ‘ಬೊಂಬೆಯಾಟ’ ಎಂಬುದು ಇದರ ಹೆಗ್ಗಳಿಕೆ. ಮೃತರಿಗೆ ತಾಯಿ ಕಮಲಮ್ಮ, ಕಲಾವಿದೆಯಾದ ಪತ್ನಿ ವತ್ಸಲಾ ಮೋಹನ್, ಪುತ್ರಿ ಹಾಗೂ ನಟಿ ಅನನ್ಯಾ ಮೋಹನ್ ಇದ್ದಾರೆ.
ಆನೇಕಲ್ ಬಳಿಯ ಸಮಂದೂರು ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ಅಂತ್ಯಕ್ರಿಯೆ ನಡೆಯಲಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
