ಉಡುಪಿ : ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿಯಿರುವಂತೆ ರಾಜಕೀಯ ನಾಯಕರ ಪಕ್ಷಾಂತರ ಪರ್ವ ಆರಂಭಗೊಂಡಿದೆ. ಉಡುಪಿ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ನಾಯಕ ಮೊಗವೀರ ಸಮುದಾಯದ ಮುಖಂಡ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿರುವ ಪ್ರಮೋದ್ ಮಧ್ವರಾಜ್, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಸದ್ಯದಲ್ಲೇ ಅವರು ಬಿಜೆಪಿ ಸೇರುವ ಸಾಧ್ಯತೆಯಿದೆ.ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಅವರು ನಂತರ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಲೋಕಸಭೆಗೂ ಸ್ಪರ್ಧಿಸಿ ಸೋಲುಂಡಿದ್ದರು.