ಬೆಂಗಳೂರು,ಅ.19:
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಅಣ್ಣ ಗೋಪಾಲ ಜೋಶಿ ಹಾಗೂ ಅವರ ಅಣ್ಣನ ಪುತ್ರ ಅಜಯ್ ಜೋಶಿಯನ್ನು ಬೆಂಗಳೂರಿನ ಬಸವೇಶ್ವರನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ವಿಜಯಪುರ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ 2 ಕೋಟಿ ಸುಲಿಗೆ ನಡೆಸಿದ್ದ ಆರೋಪದ ಅಡಿ ದಾಖಲಾಗಿದ್ದ ಪ್ರಕರಣದಲ್ಲಿ ಈ ಇಬ್ಬರನ್ನು ಬಂಧಿಸಿದ್ದಾರೆ.ಇದರೊಂದಿಗೆ ಪ್ರಕರಣದಲ್ಲಿ ಬಂಧಿತರಾದವರ ಸಂಖ್ಯೆ ನಾಲ್ಕಕ್ಕೇರಿದೆ.
ಪ್ರಲ್ಹಾದ ಜೋಶಿ ಅವರ ಅಣ್ಣ ಗೋಪಾಲ ಜೋಶಿ ಅವರನ್ನು ಕೊಲ್ಲಾಪುರದಲ್ಲಿ ಹಾಗೂ ಗೋಪಾಲ ಅವರ ಪುತ್ರ ಅಜಯ್ ಜೋಶಿ ಅವರನ್ನು ಪುಣೆಯಲ್ಲಿ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ವಿಜಯಪುರ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಕೊಡಿಸುವ ಆಮಿಷವೊಡ್ಡಿ ವಿಜಯಪುರ ಜಿಲ್ಲೆ ನಾಗಠಾಣ ಕ್ಷೇತ್ರದ ಮಾಜಿ ಶಾಸಕ ದೇವಾನಂದ್ ಚವ್ಹಾಣ್ ಅವರಿಂದ 2 ರೂಪಾಯಿ ಕೋಟಿ ಸುಲಿಗೆ ಮಾಡಿದ್ದ ಆರೋಪದ ಅಡಿ ಇವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಎಫ್ಐಆರ್ ದಾಖಲಾಗುತ್ತಿದ್ದಂತೆ ಗೋಪಾಲ ಜೋಶಿ ನಾಪತ್ತೆಯಾಗಿದ್ದರು ಅವರಿಗಾಗಿ ಹುಡುಕಾಟ ನಡೆಸಿದ ಪೊಲೀಸರು ಖಚಿತ ಮಾಹಿತಿ ಆಧಾರದ ಮೇಲೆ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ವಶಕ್ಕೆ ತೆಗೆದುಕೊಂಡಿದ್ದಾರೆ.
ದೇವಾನಂದ ಚೌಹಾಣ್ ಅವರ ಪತ್ನಿ ಸುನಿತಾ ಚವ್ಹಾಣ್ ಅವರು ಬೆಂಗಳೂರಿನ ಬಸವೇಶ್ವರನಗರ ಪೊಲೀಸರಿಗೆ ಇವರ ವಿರುದ್ಧ ದೂರು ನೀಡಿದ್ದಾರೆ
Previous Articleವಾಮಾಚಾರಕ್ಕೆ ವ್ಯಕ್ತಿ ಬಲಿ ಕೊಟ್ಟ ಪಾಪಿಗಳು.
Next Article ಮಳೆಗಾಲ ಚಳಿಗಾಲದಲ್ಲಿ ನಿಮ್ಮ ಮಕ್ಕಳ ಅರೋಗ್ಯದ ಕಡೆ ಇರಲಿ ಗಮನ