Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಂಧಿತ ಉಗ್ರ ಬಾಂಬ್ ತಯಾರಿಕೆ ಪರಿಣಿತ
    ಅಪರಾಧ

    ಬಂಧಿತ ಉಗ್ರ ಬಾಂಬ್ ತಯಾರಿಕೆ ಪರಿಣಿತ

    vartha chakraBy vartha chakraಸೆಪ್ಟೆಂಬರ್ 23, 2022Updated:ಸೆಪ್ಟೆಂಬರ್ 23, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಶಿವಮೊಗ್ಗ,ಸೆ.23- ಪೊಲೀಸರು ಇತ್ತೀಚೆಗೆ ಬಂಧಿಸಿದ್ದ ಶಂಕಿತ ಉಗ್ರರಿಂದ ಬಾಂಬ್ ತಯಾರಿಗೆ ಬೇಕಿರುವ ಕಚ್ಚಾ ಸಾಮಗ್ರಿಗಳು,ಲ್ಯಾಪ್‌ಟಾಪ್‌,ಡಾಂಗಲ್, ಮೊಬೈಲ್ ಗಳು ಸೇರಿದಂತೆ ಹಲವು ಮಹತ್ವದ ವಸ್ತುಗಳನ್ನು ವಶಪಡಿಸಿಕೊಂಡು ತನಿಖೆಯನ್ನು ತೀವ್ರಗೊಳಿಸಲಾಗಿದೆ.
    ಶಂಕಿತ ಉಗ್ರರ ಬಂಧನ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಬಂಧಿತ ಶಂಕಿತ ಉಗ್ರರನ್ನು ತೀವ್ರ ವಿಚಾರಣೆ ನಡೆಸಿ ಮಾಹಿತಿಯನ್ನು ಪಡೆದುಕೊಳ್ಳಲಾಗುತ್ತಿದೆ ಎಂದರು.
    ಪ್ರೇಮ್​ಸಿಂಗ್ ಹತ್ಯೆ ಪ್ರಕರಣದಲ್ಲಿ ಜಬೀ ಬಂಧನವಾಗಿತ್ತು. ಜಬೀ ವಿಚಾರಣೆ ಮಾಡಿದಾಗ ಶಾರಿಕ್ ವಿಚಾರ ಬೆಳಕಿಗೆ ಬಂತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ. ಈವರೆಗೆ 11 ಸ್ಥಳಗಳಲ್ಲಿ ದಾಳಿ ಮಾಡಿ ಹಲವು ವಸ್ತುಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಬಂಧಿತರಿಂದ 14 ಮೊಬೈಲ್‌ ಮತ್ತು 1 ಡಾಂಗಲ್ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.
    ಬಂಧಿತರಿಂದ ಎರಡು ಲ್ಯಾಪ್‌ಟಾಪ್‌, ಒಂದು ಪೆನ್‌ಡ್ರೈವ್ ಹಾಗೂ ಇತರ ಎಲೆಕ್ಟ್ರಾನಿಕ್ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಸ್ಫೋಟದ ಸ್ಥಳದಲ್ಲಿ ಬಾಂಬ್‌ನ ಅವಶೇಷಗಳು ಪತ್ತೆಯಾಗಿವೆ. ಆಗಸ್ಟ್​​ ತಿಂಗಳಲ್ಲಿ ರಾಷ್ಟ್ರಧ್ವಜ ಸುಟ್ಟಿರುವ ಮಾಹಿತಿಯೂ ಲಭ್ಯವಾಗಿದೆ. ಬಂಧಿತರಿಂದ ಬಾಂಬ್ ತಯಾರಿಸಲು ಬೇಕಾದ ಸಾಮಗ್ರಿಗಳನ್ನೂ ವಶಪಡಿಸಿಕೊಂಡಿದ್ದೇವೆ ಎಂದು ತಿಳಿಸಿದರು.
    ಬಂಧಿತರ ಮೂವರೂ ಆರೋಪಿಗಳು ಇಸ್ಲಾಮಿಕ್ ಸ್ಟೇಟ್ ಸಿದ್ಧಾಂತಕ್ಕೆ ಬದ್ಧರಾಗಿದ್ದರು. ನಮಗೆ ಬ್ರಿಟೀಷರಿಂದ ಮಾತ್ರ ಸ್ವಾತಂತ್ರ್ಯ ಸಿಕ್ಕಿದೆ. ನೈಜ ಸ್ವಾತಂತ್ರ್ಯ ಇಲ್ಲ. ಇಸ್ಲಾಮಿಕ್ ಸ್ಟೇಟ್ ನಿರ್ಮಾಣ, ಷರಿಯಾ ಕಾನೂನುಗಳಿಂದ ಮಾತ್ರ ಸ್ವಾತಂತ್ರ್ಯ ಸಾರ್ಥಕವಾಗುತ್ತದೆ ಎಂಬ ಅಭಿಪ್ರಾಯಕ್ಕೆ ಬಂಧಿದ್ದರು. ಪ್ರಾಯೋಗಿಕವಾಗಿ ಬಾಂಬ್ ಸ್ಫೋಟಿಸಿದ್ದ ಆರೋಪಿಗಳು ನೈಜ ಬಾಂಬ್​ ಸ್ಫೋಟಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಕ್ರಿಪ್ಟೊ ಕರೆನ್ಸಿ ಮೂಲಕ ವಹಿವಾಟು ನಡೆಸಿದ್ದ ಮಾಹಿತಿಯೂ ಲಭ್ಯವಾಗಿದೆ ಎಂದು ಎಸ್​ಪಿ ತಿಳಿಸಿದರು.
    ಪಿಯುಸಿ ಓದುತ್ತಿರುವಾಗಲೇ ಸೈಯದ್ ಯಾಸಿನ್​ಗೆ ಮಾಜ್ ಮುನೀರ್ ಅಹ್ಮದ್​ ಎಂಬಾತನ ಪರಿಚಯವಾಗಿತ್ತು. ಅವನ ಮುಖಾಂತರ ಶಾರೀಖ್ ಪರಿಚಯವಾಯಿತು. ಶಾರೀಖ್ ಮುಸ್ಲಿಂ ಮೂಲಭೂತವಾದದ ಬಗ್ಗೆ ಸದಾ ಮಾತನಾಡುತ್ತಿದ್ದ. ಅಂಥದ್ದೇ ಫೈಲ್​ಗಳನ್ನು ಹಂಚಿಕೊಳ್ಳುತ್ತಿದ್ದ ಎಂದರು.
    ಐಸಿಸ್ (ಇಸ್ಲಾಮಿಕ್ ಸ್ಟೇಟ್) ಮಾದರಿಯಲ್ಲಿ ಭಯೋತ್ಪಾದಕ ಕೃತ್ಯ ಮುಂದುವರಿಸಲು ಆರೋಪಿಗಳು ಯೋಚಿಸಿದ್ದರು. ಕಾಫೀರರ (ಇಸ್ಲಾಂ ಧರ್ಮಕ್ಕೆ ಸೇರದವರು) ವಿರುದ್ಧ ಜಿಹಾದ್ ನಡೆಸಲು ಇವರು ಸಿದ್ಧತೆ ಮಾಡಿಕೊಳ್ಳುತ್ತಿದ್ದರು.
    ಐಸಿಸ್​ನ ಅಧಿಕೃತ ಅಲ್​-ಹಯಾತ್ ಟೆಲಿಗ್ರಾಮ್ ಚಾನೆಲ್​ಗೆ ಸದಸ್ಯರಾಗಿದ್ದರು.
    ಶಾರೀಖ್ ಹಂಚಿಕೊಂಡಿದ್ದ ಫೈಲ್​ಗಳಲ್ಲಿದ್ದ ಬಾಂಬ್ ತಯಾರಿಸುವ ವಿವರ ಅಭ್ಯಾಸ ಮಾಡಿದ್ದ ಇತರರು ಅದಕ್ಕೆ ಬೇಕಿರುವ ಟೈಮರ್, ರಿಲೆ, ಸರ್ಕೀಟ್​ಗಳನ್ನು ಅಮೆಜಾನ್ ಮೂಲಕ ಖರೀದಿಸಿದ್ದರು. ಇತರ ಅಗತ್ಯ ವಸ್ತುಗಳನ್ನು ಶಿವಮೊಗ್ಗದ ಸ್ಥಳೀಯ ವರ್ತಕರಿಂದ ಖರೀದಿಸಿದ್ದರು.
    ರಾಷ್ಟ್ರಧ್ವಜವನ್ನು ಸುಟ್ಟು, ಅದನ್ನು ವಿಡಿಯೊ ಮಾಡಿಕೊಂಡಿದ್ದಾರೆ. ಕೆಮ್ಮನಗುಂಡಿಯಲ್ಲಿ ಪ್ರಾಯೋಗಿಕವಾಗಿ ಬಾಂಬ್ ಸ್ಫೋಟ ನಡೆಸಿದ್ದರು ಎಂದರು.

    ಉಗ್ರ ಕಾನೂನು ಧರ್ಮ
    Share. Facebook Twitter Pinterest LinkedIn Tumblr Email WhatsApp
    Previous ArticleSDPI ಮುಖಂಡರ ಸೆರೆ : ಪ್ರತಿಭಟನೆ
    Next Article ಯಡಿಯೂರಪ್ಪಗೆ ರಿಲೀಫ್!
    vartha chakra
    • Website

    Related Posts

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DennisSaike ರಲ್ಲಿ ಬೆಂಗಳೂರಿನಲ್ಲಿ ಬೋರ್ ವೆಲ್ ಗಳಿಗೆ ಕಡಿವಾಣ | Bengaluru
    • f9hw5 ರಲ್ಲಿ ಕ್ರೈಸ್ತ ಧರ್ಮಗುರು ಪೋಪ್ ಫ್ರಾನ್ಸಿಸ್ ಅ‌ಸ್ತಂಗತ
    • DennisSaike ರಲ್ಲಿ ಮಡಿಕೇರಿ ಜನರ ಭರವಸೆಯ ಬೆಳಕು, ಮಂತರ್ ಗೌಡ.
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe