ಬೆಂಗಳೂರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮತಿ ನೀಡಿದರೆ ರಾಜ್ಯದ ಮುಖ್ಯಮಂತ್ರಿ ಆಗಲು ಸಿದ್ದ ಎಂದು ಹೇಳಿದ್ದ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಆರ್ ವಿ ದೇಶಪಾಂಡೆ ಇದೀಗ ತಮ್ಮ ನಿಲುವು ಬದಲಾಯಿಸಿದ್ದಾರೆ.
ತಮ್ಮ ಹೇಳಿಕೆ ರಾಜ್ಯ ಕಾಂಗ್ರೆಸ್ ಮತ್ತು ರಾಜಕಾರಣದಲ್ಲಿ ಸಾಕಷ್ಟು ಸಂಚಲನ ಮೂಡಿಸಿದ ಬೆನ್ನಲ್ಲೇ ಇದೀಗ ತಾವು ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಹೇಳಿದರು.
ಸದ್ಯ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಅವರ ಸಹ ಕಷ್ಟ ಪಡುತ್ತಿದ್ದಾರೆ. ಸರ್ಕಾರದಲ್ಲಿ ಎಲ್ಲಾವೂ ಸರಿ ಇದೆ. ಹೀಗಾಗಿ ಮುಖ್ಯಮಂತ್ರಿ ಸ್ಥಾನದ ಮೇಲೆ ಆಸೆ ಪಡಲು ಅವಕಾಶವೇ ಇಲ್ಲ ಎಂದು ತಿಳಿಸಿದರು.
Previous Articleಕನ್ನಡ ಚಿತ್ರರಂಗದಲ್ಲಿ ಪುರುಷರೂ ಸೇಫ್ ಅಲ್ಲ.
Next Article ಹೆಣ್ಣು ಭ್ರೂಣ ಹತ್ಯೆ Kingpin ಅರೆಸ್ಟ್.