ಬೆಂಗಳೂರು,ನ.29-
ರಾಜಧಾನಿ ಮಹಾನಗರ ಬೆಂಗಳೂರಿನ ಹೊರವಲಯದಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ ಬನ್ನೇರುಘಟ್ಟ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಜನರು ಆತಂಕದಲ್ಲಿ ಜೀವನ ನಡೆಸುತ್ತಿದ್ದಾರೆ.
ಆನೇಕಲ್ ತಾಲೂಕಿನ ಜಿಗಣಿ ಸಮೀಪದ ನಿಸರ್ಗ ಬಡಾವಣೆ ಮತ್ತು ಲೋಟಸ್ ಬಡಾವಣೆ ಸುತ್ತಮುತ್ತ ಚಿರತೆ ಓಡಾಡುತ್ತಿದ್ದು ಚಿರತೆ ಓಡಾಟದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಈ ವಿಚಾರ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದು ಅರಣ್ಯ ಇಲಾಖೆ ಅಧಿಕಾರಿಗಳು ಕಳೆದ ರಾತ್ರಿ ಚಿರತೆಗಾಗಿ ಹುಡುಕಾಟ ನಡೆಸಿದ್ದಾರೆ. ಆದರೆ ರಾತ್ರಿ ಚಿರತೆ ಎಲ್ಲೂ ಸಹ ಪತ್ತೆಯಾಗಿಲ್ಲ.
ಇನ್ನು ನಿಸರ್ಗ ಬಡಾವಣೆ ಸೇರಿದಂತೆ ಸುತ್ತಮುತ್ತ ಇರುವ ಎಲ್ಲಾ ಬಡಾವಣೆ ನಿವಾಸಿಗಳು ರಾತ್ರಿ ಸಮಯದಲ್ಲಿ ಒಬ್ಬೊಬ್ಬರೇ ಹೊರಗಡೆ ತಿರುಗಾಡಬೇಡಿ ಎಂದು ಅರಣ್ಯ ಇಲಾಖೆಯಿಂದ ಎಚ್ಚರಿಕೆ ನೀಡುತ್ತಿದ್ದಾರೆ.
ಜೊತೆಗೆ ಇತ್ತೀಚಿಗೆ ಬನ್ನೇರುಘಟ್ಟ ಕಾಡಂಚಿನ ಗ್ರಾಮ ಹಾಗೂ ಬಡಾವಣೆಗಳಲ್ಲಿ ಆದಷ್ಟು ಎಚ್ಚರಿಕೆಯಿಂದ ಇರಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಸೂಚನೆ ನೀಡುತ್ತಿದ್ದಾರೆ. ಇನ್ನು ರಾತ್ರಿ ಸಹ ಅರಣ್ಯ ಇಲಾಖೆ ಕಾರ್ಯಚರಣೆ ನಡೆಸಿದ್ದು, ಆದಷ್ಟು ಬೇಗ ಚಿರತೆ ಸೆರೆಹಿಡಿಯಲು ಹರಸಾಹಸ ಪಡುತ್ತಿದ್ದಾರೆ.
Previous ArticleSan Fransisco ನಗರದ ಪರಿಸ್ಥಿತಿ ನೋಡಿ!
Next Article ಅಮೆರಿಕಾಕ್ಕೆ ಬಂದವೇ ಅನ್ಯಲೋಕದ ಜೀವಿಗಳು?