ಈ ಸರಕಾರದಲ್ಲಿ ನಡೆಯುತ್ತಿರುವುದು ಬರೀ ಲೂಟಿಯಲ್ಲ, ಹಗಲು ದರೋಡೆ. ಅಧಿಕಾರಿ ಚಂದ್ರಶೇಖರ್ ಸಾವಿಗೆ ಸಚಿವರೇ ನೇರ ಕಾರಣವಾಗಿದ್ದು, ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟಿನ ಹಾಲಿ ನ್ಯಾಯಾಧೀಶರಿಂದ ಸಮಗ್ರ ತನಿಖೆ ನಡೆಸಿ ಅಪರಾಧಿಗಳಿಗೆ ಶಿಕ್ಷೆ ವಿಧಿಸಬೇಕು ಎಂದು ಸಿ.ಟಿ ರವಿ ಅವರು ಹೇಳಿದರು.
ಪರಿಷತ್ ಚುನಾವಣೆಯಲ್ಲಿ ಆರೂ ಸ್ಥಾನಗಳು ಎನ್‍ಡಿಎಗೆ:
ವಿಧಾನ ಪರಿಷತ್‍ನ ಮೂರು ಪದವೀಧರ ಕ್ಷೇತ್ರಗಳು ಮತ್ತು ಮೂರು ಶಿಕ್ಷಕಕರ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಭಾರತೀಯ ಜನತಾಪಕ್ಷ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಎಲ್ಲ ಆರೂ ಸ್ಥಾನಗಳನ್ನು ಗೆಲ್ಲುವುದು ನಿಶ್ಚಿತ ಎಂದು ಪ್ರತಿಪಾದಿಸಿದರು.
ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಬೆಂಬಲದೊಂದಿಗೆ ಮೈತ್ರಿಪಕ್ಷ ಜಾತ್ಯತೀತ ಜನತಾ ದಳದ ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದಾರೆ. ಈ ಭಾಗದಲ್ಲಿ ನಮ್ಮ ಅಭ್ಯರ್ಥಿ ಅಮರನಾಥ ಪಾಟೀಲ್ ಸ್ಪರ್ಧಿಸಿದ್ದಾರೆ. ಈ ಹಿಂದೆ ಅವರು ಪದವೀಧರ ಕ್ಷೇತ್ರವನ್ನು ಪ್ರತಿನಿಧಿಸಿ ಉತ್ತಮ ಕೆಲಸ ಮಾಡಿದ್ದಾರೆ. ಈ ಬಾರಿಯೂ ನಮ್ಮೆಲ್ಲ ಪ್ರಜ್ಞಾವಂತ ಮತದಾರ ಬಾಂಧವರು ಅವರನ್ನು ಬೆಂಬಲಿಸಿ ಗೆಲ್ಲಿಸಿ ವಿಧಾನ ಪರಿಷತ್‍ಗೆ ಆಯ್ಕೆ ಮಾಡಬೇಕೆಂದು ಮನವಿ ಮಾಡುತ್ತೇನೆ ಎಂದು ಸಿ.ಟಿ ರವಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಸ್ಕಿ ಶಾಸಕ ಡಾ. ಶಿವರಾಜ್ ಪಾಟೀಲ್ ಹಾಗೂ ಮಾಜಿ ಶಾಸಕ ಪ್ರತಾಪ್ ಗೌಡ ಸೇರಿದಂತೆ ಮುಖಂಡರು ಪಾಲ್ಗೊಂಡಿದ್ದರು.