Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಹೇಳುವುದು ಒಂದು ಮಾಡೋದು ಇನ್ನೊಂದು
    ರಾಜಕೀಯ

    ಬಿಜೆಪಿ ಹೇಳುವುದು ಒಂದು ಮಾಡೋದು ಇನ್ನೊಂದು

    vartha chakraBy vartha chakraಫೆಬ್ರವರಿ 27, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.27-
    ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆ ಕುರಿತು ದಕ್ಷಿಣ ಭಾರತದ ರಾಜ್ಯಗಳಲ್ಲಿ ಉಂಟಾಗಿರುವ ಆತಂಕ ನಿವಾರಣೆಗೊಳಿಸುವ ದೃಷ್ಟಿಯಿಂದ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ನೀಡಿರುವ ಹೇಳಿಕೆಯನ್ನು ನಂಬಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
    ಕೊಯಮತ್ತೂರಿನಲ್ಲಿ ನಿನ್ನೆ ಅಮಿತ್ ಶಾ ನೀಡಿರುವ ಹೇಳಿಕೆಗೆ ಸುಧೀರ್ಘ ಪತ್ರಿಕಾ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ನಾಯಕರ ಮಾತು ಮತ್ತು ಕರ್ತವ್ಯದಲ್ಲಿ ಎಂದಿಗೂ ಸಾಮ್ಯತೆ ಇರುವುದಿಲ್ಲ ಅವರು ಹೇಳುವುದು ಒಂದು ಮಾಡುವುದು ಮತ್ತೊಂದು ಎಂದಿದ್ದಾರೆ.
    ಅಮಿತ್ ಶಾ ಅವರ ಹೇಳಿಕೆಯು ದಕ್ಷಿಣದ ರಾಜ್ಯಗಳಲ್ಲಿ ಗೊಂದಲ ಸೃಷ್ಟಿಸುವ ದುರುದ್ದೇಶದಿಂದ ಕೂಡಿದೆ. ಅವರಿಗೆ ಮಾಹಿತಿಯ ಕೊರತೆ ಇದೆ ಅಥವಾ ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳಾದ ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶಗಳಿಗೆ ಅನ್ಯಾಯ ಮಾಡುವ ದುರುದ್ದೇಶ ಇದೆ ಎಂದು ಅರ್ಥೈಸುತ್ತದೆ ಎಂದು ಹೇಳಿದ್ದಾರೆ.
    ದಕ್ಷಿಣದ ರಾಜ್ಯಗಳಿಗೆ ಅನ್ಯಾಯ ಮಾಡಬಾರದೆಂಬ ಸದುದ್ದೇಶ ಕೇಂದ್ರ ಸರ್ಕಾರ ಹೊಂದಿರುವುದಾಗಿದ್ದರೆ ಕ್ಷೇತ್ರ ಪುನರ್ ವಿಂಗಡನೆಯನ್ನು ಜನಸಂಖ್ಯೆಯ ಅನುಪಾತದ ಆಧಾರದಲ್ಲಿ ಮಾಡಲಾಗುವುದೋ? ಅಥವಾ ಲೋಕಸಭಾ ಸದಸ್ಯರ ಈಗಿನ ಸಂಖ್ಯೆಯ ಅನುಪಾತದಲ್ಲಿ ಮಾಡಲಾಗುವುದೋ? ಎನ್ನುವುದಕ್ಕೆ ಸಚಿವರೇ ಉತ್ತರಿಸಬೇಕು ಎಂದಿದ್ದಾರೆ.
    ಕ್ಷೇತ್ರ ಪುನರ್ ವಿಂಗಡನೆಯ ಪರಿಣಾಮಗಳ ಬಗ್ಗೆ ಹಲವಾರು ಅಧ್ಯಯನಗಳು ನಡೆದಿವೆ. ಇವುಗಳ ಪ್ರಕಾರ ಇತ್ತೀಚಿನ ಜನಗಣತಿಯನ್ನು (2021 ಇಲ್ಲವೇ 2031) ಮಾತ್ರ ಆಧರಿಸಿ ಕ್ಷೇತ್ರ ಪುನರ್ ವಿಂಗಡನೆ ನಡೆದರೆ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 28ರಿಂದ 26ಕ್ಕೆ ಇಳಿಯುವ ಸಾಧ‍್ಯತೆ ಇದೆ. ಉತ್ತರಪ್ರದೇಶದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 80ರಿಂದ 91, ಬಿಹಾರದ ಸಂಖ್ಯೆ 40ರಿಂದ 50, ಮಧ್ಯಪ್ರದೇಶದ ಸಂಖ್ಯೆ 29ರಿಂದ 33ಕ್ಕೆ ಏರಿಕೆಯಾಗಲಿದೆ. ಕ್ಷೇತ್ರ ಪುನರ್ ವಿಂಗಡಣೆಯಿಂದ ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ ಆಗಬಾರದೆಂದರೆ 1971ರ ಜನಗಣತಿಯನ್ನು ಆಧಾರವಾಗಿಟ್ಟುಕೊಳ್ಳಬೇಕು. ಇಲ್ಲವಾದರೆ ಜನಸಂಖ್ಯೆಯ ಮಾನದಂಡವನ್ನು ಕೈಬಿಟ್ಟು ಈಗಿನ ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು ಅನುಪಾತಕ್ಕನುಗುಣವಾಗಿ ಹೆಚ್ಚಿಸಬೇಕು ಎಂದಿದ್ದಾರೆ
    ಇತ್ತೀಚಿನ ಜನಗಣತಿಯಿಂದ ಪಡೆದ ಜನಸಂಖ್ಯೆಯ ಅನುಪಾತದ ಮೇಲೆ ನಡೆಸಿದರೆ ಜನಸಂಖ್ಯೆಯ ನಿಯಂತ್ರಣ ಮಾಡಿರುವ ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳ ಲೋಕಸಭಾ ಕ್ಷೇತ್ರಗಳ ಸಂಖ್ಯೆ ಒಂದೋ ಕಡಿಮೆಯಾಗಲಿದೆ. ಇಲ್ಲದೆ ಇದ್ದರೆ ಉತ್ತರದ ರಾಜ್ಯಗಳ ಕ್ಷೇತ್ರಗಳ ಪ್ರಮಾಣದಲ್ಲಿ ಏರಿಕೆ ಆಗಲಾರದು. ಈ ಎರಡೂ ಬೆಳವಣಿಗಳಿಂದ ದಕ್ಷಿಣದ ರಾಜ್ಯಗಳೇ ನಷ್ಟ ಅನುಭವಿಸಲಿದೆ ಎಂದು ಹೇಳಿದ್ದಾರೆ.
    ಕರ್ನಾಟಕದ ಜನತೆ ಬಿಜೆಪಿಯನ್ನು ಬೆಂಬಲಿಸದೆ ಇದ್ದರೆ ರಾಜ್ಯಕ್ಕೆ ನರೇಂದ್ರ ಮೋದಿ ಅವರ ಆಶೀರ್ವಾದ ಇರುವುದಿಲ್ಲ ಎಂದು ವಿಧಾನಸಭಾ ಚುನಾವಣಾ ಪ್ರಚಾರದ ಕಾಲದಲ್ಲಿ ಜೆ.ಪಿ.ನಡ್ಡಾ ನೀಡಿದ್ದ ಎಚ್ಚರಿಕೆ ನಮ್ಮ ರಾಜ್ಯದ ವಿರುದ್ಧ ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಕ್ರಮದಲ್ಲಿ ನಿಜವಾಗುತ್ತಿದೆ. ತೆರಿಗೆ ಹಂಚಿಕೆ, ಜಿಎಸ್‌ಟಿ ಮತ್ತು ಪ್ರಕೃತಿ ವಿಕೋಪ ಪರಿಹಾರದಲ್ಲಿ ಅನ್ಯಾಯ, ರಾಜ್ಯಕ್ಕೆ ಕಂಟಕವಾಗಿರುವ ಹೊಸ ಶಿಕ್ಷಣ ನೀತಿ ಮತ್ತು ಯುಜಿಸಿ ನಿಯಮಾವಳಿಗಳಿಗೆ ತಿದ್ದುಪಡಿಯೂ ಸೇರಿದಂತೆ ಕೇಂದ್ರ ಸರ್ಕಾರದ ಪ್ರತಿಯೊಂದು ಕ್ರಮವೂ ರಾಜ್ಯವನ್ನು ಶಿಕ್ಷಿಸುವ ದುರುದ್ದೇಶದಿಂದ ಕೂಡಿದೆ ಎನ್ನುವುದು ಸ್ಪಷ್ಟವಾಗುತ್ತಿದೆ ಎಂದಿದ್ದಾರೆ.

    ಕರ್ನಾಟಕ ತಮಿಳುನಾಡು ತೆಲಂಗಾಣ ನರೇಂದ್ರ ಮೋದಿ ನ್ಯಾಯ ಬಿಜೆಪಿ ಬೆಂಗಳೂರು ಶಿಕ್ಷಣ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಇನ್ನು ಮುಂದೆ ಇಡ್ಲಿ ತಯಾರಿಕೆಗೆ ಇದು ಬಳಸುವಂತಿಲ್ಲ
    Next Article ಇಂಧನ ಉಳಿತಾಯದತ್ತ ಬೆಸ್ಕಾಂ ಹೆಜ್ಜೆ.
    vartha chakra
    • Website

    Related Posts

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಮೇ 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ಮಹಿಳೆಯರೇ‌ ಹುಷಾರ್

    ಮೇ 7, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಗೆಲುವಿಗಾಗಿ ವಿಶೇಷ ಪೂಜೆ.

    ಆಪರೇಷನ್ ಸಿಂಧೂರ

    ಮಹಿಳೆಯರೇ‌ ಹುಷಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarrySquag ರಲ್ಲಿ ಅನಾಮಧೇಯ ಪತ್ರದಿಂದ ಪತ್ತೆಯಾಯಿತು ನಕಲಿ ಜಾಲ | Mysore Sandal
    • Martinboorn ರಲ್ಲಿ ವಿಶ್ವ ಮಧುಮೇಹ ದಿನಾಚರಣೆ, ಸಾರ್ವಜನಿಕರಿಗೆ ಅರಿವಿನ ಜಾತ
    • CASHBACK VANGPOKER ರಲ್ಲಿ ಕುಂಭಮೇಳದಲ್ಲಿ ಕಿನ್ನರ ಕಲರವ
    Latest Kannada News

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಮೇ 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ಆಪರೇಷನ್ ಸಿಂಧೂರ

    ಮೇ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇತಿಹಾಸದಲ್ಲೇ ಮೊದಲಬಾರಿಗೆ ಕಗ್ಗತ್ತಲಲ್ಲಿ ಮುಳುಗಿದ ಸ್ವರ್ಣ ಮಂದಿರ#goldentemple #news #facts #historyinshorts
    Subscribe