Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿ.ಶ್ರೀರಾಮುಲು ಬಿಜೆಪಿ ಬಿಡೋದು ನಿಜಾನಾ..
    ರಾಜಕೀಯ

    ಬಿ.ಶ್ರೀರಾಮುಲು ಬಿಜೆಪಿ ಬಿಡೋದು ನಿಜಾನಾ..

    vartha chakraBy vartha chakraಜನವರಿ 22, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ.22:
    ಮಾಜಿ ಸಚಿವ ಬಿಜೆಪಿ ಹಿರಿಯ ನಾಯಕ ಬಿ ಶ್ರೀರಾಮುಲು ಇದೀಗ ಕಮಲ ಪಕ್ಷಕ್ಕೆ ಗುಡ್ ಬೈ ಹೇಳುತ್ತಾರಾ.. ಹೌದು ಎನ್ನುತ್ತವೆ ಕೇಸರಿ ಪಾಳಯದಲ್ಲಿ ನಡೆದಿರುವ ವಿದ್ಯಮಾನಗಳು.
    ಒಂದು ಕಾಲದಲ್ಲಿ ಬಿಜೆಪಿಯ ಪ್ರಭಾವಿ ನಾಯಕ ಎನಿಸಿಕೊಂಡಿದ್ದ ಬಳ್ಳಾರಿಯ ಜನಾರ್ಧನ ರೆಡ್ಡಿ ಅವರು ಇತ್ತೀಚೆಗೆ ತಮ್ಮ ಗೆಳೆಯ ಶ್ರೀರಾಮುಲು ಅವರೊಂದಿಗಿನ ಭಿನ್ನಾಭಿಪ್ರಾಯ ಕಾರಣಕ್ಕೆ ಬಿಜೆಪಿ ತೊರೆದು ತಮ್ಮದೇ ಆದ ಕೆಕೆಆರ್ ಪಿ ಪಕ್ಷವನ್ನು ಸ್ಥಾಪಿಸಿ ಗಂಗಾವತಿ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ.
    ಆನಂತರದಲ್ಲಿ ನಡೆದ ರಾಜಿ ಸಂಧಾನದ ಪರಿಣಾಮವಾಗಿ ಇದೀಗ ಅವರು ತಮ್ಮ ಪಕ್ಷವನ್ನು ಬಿಜೆಪಿ ಜೊತೆಗೆ ತಾವು ಕೂಡ ಪಕ್ಷ ಸೇರ್ಪಡೆಯಾಗಿದ್ದಾರೆ ಇದು ಶ್ರೀರಾಮುಲು ಅವರಿಗೆ ತೀವ್ರ ಮುಜುಗರ ಉಂಟು ಮಾಡಿದೆ. ಆದರೂ ಮೊನ್ನೆ ನಡೆದ ಸಂಡೂರು ಉಪಚುನಾವಣೆಯಲ್ಲಿ ಈ ಇಬ್ಬರು ನಾಯಕರು ಜೊತೆಯಾಗಿ ಕಾಣಿಸಿಕೊಳ್ಳುವ ಮೂಲಕ ತಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಘೋಷಿಸಿದರೂ ಕೂಡ ಆನಂತರ ಇಬ್ಬರು ಎಲ್ಲಿಯೂ ಒಟ್ಟಾಗಿ ಕಾಣಿಸಿಕೊಂಡಿಲ್ಲ. ಹೀಗಾಗಿ ಇಬ್ಬರ ನಡುವಿನ ಭಿನ್ನಾಭಿಪ್ರಾಯ ಮುಂದುವರೆದೇ ಇದೆ ಎನ್ನುತ್ತವೆ ಅವರ ಆಪ್ತ ಮೂಲಗಳು.
    ಈ ನಡುವೆ ರಾಜ್ಯ ಬಿಜೆಪಿ ಸಂಘಟನಾ ಪರ್ವ ಕಾರ್ಯಕ್ರಮದ ಪರಿಶೀಲನೆಗೆ ಆಗಮಿಸಿದ್ದ ರಾಜ್ಯ ಬಿಜೆಪಿ ಉಸ್ತುವಾರಿ ನಾಯಕ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರು ಬೆಂಗಳೂರಿನಲ್ಲಿ ಪಕ್ಷದ ಪ್ರಮುಖ ನಾಯಕರೊಂದಿಗೆ ಸರಣಿ ಸಭೆ ನಡೆಸಿದರು.
    ಕೋರ್ ಕಮಿಟಿ ಸದಸ್ಯರೊಂದಿಗೆ ಸಂಘಟನಾ ವಿಚಾರವಾಗಿ ಮಾತುಕತೆ ನಡೆಸುತ್ತಿದ್ದ ಅವರು ಇತ್ತೀಚೆಗೆ ನಡೆದ ಸಂಡೂರು ವಿಧಾನಸಭೆ ಕ್ಷೇತ್ರದ ಉಪಚುನಾವಣೆಯ ಫಲಿತಾಂಶದ ಕುರಿತಂತೆ ಮಾಹಿತಿ ಪಡೆದಿದ್ದಾರೆ.
    ಈ ವೇಳೆ ನೀವು ಸರಿಯಾಗಿ ಕೆಲಸ ಮಾಡಿಲ್ಲ ಎಂದು ಶ್ರೀರಾಮುಲು ವಿರುದ್ಧವೇ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರು ಗಂಭೀರ ಆರೋಪ ಮಾಡಿದ್ದಾರೆ. ಇದರಿಂದ ತೀವ್ರ ಅಸಮಾಧಾನಗೊಂಡ ಶ್ರೀರಾಮುಲು, ಇನ್ನೂ ಕೂಡ ಉಪಚುನಾವಣೆ ಸೋಲಿನ ಕುರಿತ ವರದಿಯನ್ನೇ ಕೊಟ್ಟಿಲ್ಲ. ಸದಾನಂದ ಗೌಡ ಸಮಿತಿ ಉಪ ಚುನಾವಣೆ ಕುರಿತ ವರದಿಯನ್ನೇ ಕೊಟ್ಟಿಲ್ಲ. ಅದಕ್ಕೂ ಮೊದಲು ನೀವು ಹೇಗೆ ಕೆಲಸ ಮಾಡಿಲ್ಲ ಎನ್ನುತ್ತಿರಿ ಎಂದು ಶ್ರೀರಾಮುಲು, ಸಭೆಯಲ್ಲೇ ಪ್ರಶ್ನಿಸಿದ್ದಾರೆ.
    ಅಲ್ಲದೆ ಪಕ್ಕದಲ್ಲಿದ್ದ ಪಕ್ಷದ ಅಧ್ಯಕ್ಷ ವಿಜಯೇಂದ್ರ ಅವರನ್ನು ಕುರಿತು ಅವರೇನು ಉತ್ತರ ಪ್ರದೇಶದಿಂದ ಬಂದಿದ್ದಾರೆ ಇಲ್ಲಿನ ಬಗ್ಗೆ ಅವರಿಗೆ ಮಾಹಿತಿ ಇಲ್ಲ ಪಕ್ಷದ ಅಧ್ಯಕ್ಷರಾದ ನೀವು ಸರಿಯಾದ ಮಾಹಿತಿ ಕೊಡಬೇಕಲ್ಲವೇ ಜನಾರ್ದನ ರೆಡ್ಡಿ ಕೊಟ್ಟ ವರದಿ ಆದರಿಸಿ ನನ್ನ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ತಕರಾರು ತೆಗೆದಿದ್ದಾರೆ.
    ಇದಕ್ಕೆ ಉತ್ತರಿಸಿದ ವಿಜಯೇಂದ್ರ ರಾಜ್ಯ ಉಸ್ತುವಾರಿ ಕೇವಲ ನಿಮ್ಮ ಬಗ್ಗೆ ಮಾತ್ರ ಕೇಳುತ್ತಿಲ್ಲ ನನ್ನ ಬಗ್ಗೆಯೂ ಆರೋಪ ಮಾಡಿದ್ದಾರೆ ಅದಕ್ಕೆ ನಾವು ಉತ್ತರ ಕೊಡಬೇಕು ಎಂದು ಹೇಳುತ್ತಿದ್ದಂತೆ ಅಸಮಾಧಾನಗೊಂಡ ಶ್ರೀರಾಮುಲು ನೀವು ಎಲ್ಲರೂ ಒಟ್ಟಾಗಿಯೇ ನನ್ನ ವಿರುದ್ಧ ತಿತೂರಿ ಮಾಡಿದ್ದೀರಿ. ಜನಾರ್ಧನ ರೆಡ್ಡಿ ಅವರ ಜೊತೆ ಸೇರಿಕೊಂಡು ನನ್ನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡುತ್ತಿದ್ದೀರಿ ಎಂದು ಆರೋಪಿಸಿದರು ಎನ್ನಲಾಗಿದೆ.
    ಮುಂದುವರೆದ ಅವರು ಪಕ್ಷದ ಇತ್ತೀಚಿನ ವಿದ್ಯಮಾನಗಳು ನಾಯಕರ ವೈಖರಿ ನನಗೆ ಅತೀವ ಬೇಸರ ತಂದಿದೆ. ಇಂತಹ ಪಕ್ಷದಲ್ಲಿ ಮುಂದುವರೆಯುವುದು ಬೇಡ ಎಂಬ ಚಿಂತನೆಯಲ್ಲಿ ಇದ್ದೇನೆ ಪಕ್ಷ ಬಿಡುವ ಮೊದಲು ದೆಹಲಿಗೆ ಹೋಗಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರಿಗೆ ಎಲ್ಲವನ್ನು ತಿಳಿಸಿ ಪಕ್ಷ ತೊರೆಯುತ್ತೇನೆ ಎಂದು ಹೇಳಿರುವುದು ಉನ್ನತ ಮೂಲಗಳು ತಿಳಿಸಿವೆ.
    ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಮುಂದೆಯೇ ಶ್ರೀರಾಮುಲು ಅವರು ಪಕ್ಷ ತೊರೆಯುತ್ತೇನೆ ಎಂದು ಹೇಳಿದರು ಕೂಡ ಯಾರು ಅದಕ್ಕೆ ಪ್ರತಿಕ್ರಿಯೆ ನೀಡಲಿಲ್ಲ ಎಂದು ಗೊತ್ತಾಗಿದೆ.

    ಚುನಾವಣೆ ಬಿಜೆಪಿ ಬೆಂಗಳೂರು ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಯತ್ನಾಳ್, ಜಾರಕಿಹೊಳಿ ಗೆ ಗೇಟ್ ಪಾಸ್ ಕೊಡಿ
    Next Article ಸಾಲದಲ್ಲಿ ದಾಖಲೆ ಮಾಡುತ್ತಾರಂತೆ ಸಿಎಂ ಸಿದ್ದರಾಮಯ್ಯ
    vartha chakra
    • Website

    Related Posts

    ಶಕ್ತಿ ಪ್ರದರ್ಶನಕ್ಕೆ ಮುಂದಾದರಾ ಡಿಸಿಎಂ

    ಡಿಸೆಂಬರ್ 13, 2025

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಡಿಸೆಂಬರ್ 12, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಶಕ್ತಿ ಪ್ರದರ್ಶನಕ್ಕೆ ಮುಂದಾದರಾ ಡಿಸಿಎಂ

    ಕಡ್ಡಾಯವಾಗಿ ಕನ್ನಡ ನಾಮಫಲಕ ಅಳಡಿಸದಿದ್ದರೆ ದಂಡ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mostbet-791 ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • 777bet_mpka ರಲ್ಲಿ ದೇವರಾಜೇಗೌಡ ಮೆಂಟಲ್ ಕೇಸ್ ಅಂತೆ.!
    • Justinoxill ರಲ್ಲಿ May 3, 2023 51st Year Free Mass Marriage at Sri Kshetra Dharmasthala
    Latest Kannada News

    ಶಕ್ತಿ ಪ್ರದರ್ಶನಕ್ಕೆ ಮುಂದಾದರಾ ಡಿಸಿಎಂ

    ಡಿಸೆಂಬರ್ 13, 2025

    ಕಡ್ಡಾಯವಾಗಿ ಕನ್ನಡ ನಾಮಫಲಕ ಅಳಡಿಸದಿದ್ದರೆ ದಂಡ

    ಡಿಸೆಂಬರ್ 13, 2025

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    14 ಬಾರಿ ಕಚ್ಚಿದ ಹಾವು ಕನಸಲ್ಲೂ ಬಂದಿತ್ತಂತೆ! #varthachakra #snakes #mythicalcreatures #snakeencounters
    Subscribe