Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೊಮ್ಮಾಯಿ ಗೇಮ್ ಪ್ಲಾನ್..!!
    ಸುದ್ದಿ

    ಬೊಮ್ಮಾಯಿ ಗೇಮ್ ಪ್ಲಾನ್..!!

    vartha chakraBy vartha chakraಮೇ 12, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ರಾಜ್ಯ ಬಿಜೆಪಿಯಲ್ಲಿನ ವಿದ್ಯಮಾನಗಳು ಕುತೂಹಲದ ಘಟ್ಟ ತಲುಪಿವೆ. ಸಂಪುಟ ವಿಸ್ತರಣೆ ಕುರಿತಂತೆ ಬಿಕ್ಕಟ್ಟು ಉಂಟಾಗಿರುವ ಬೆನ್ನಲ್ಲೆ ನಾಯಕತ್ವ ಬದಲಾವಣೆ ಪ್ರಸ್ತಾಪವೂ ಕೇಳಿಬಂದಿದ್ದು ಒತ್ತಡಕ್ಕೆ ಸಿಲುಕಿರುವ ಮುಖ್ಯಮಂತ್ರಿ ಬೊಮ್ಮಾಯಿ ಚಾಣಾಕ್ಷ ರಾಜಕೀಯ ನಡೆ ಇಡಲು ಮುಂದಾಗಿದ್ದಾರೆ. ಸಿಎಂ ತಮ್ಮ ಎರಡು ದಿನದ ದೆಹಲಿ ಭೇಟಿಯ ವೇಳೆ ಛಲದಂಕ ಮಲ್ಲನಂತೆ ಕಾದು ಕೇಂದ್ರ ಸಚಿವ ಅಮಿತ್ ಶಾ‌ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ. ಇವರಿಬ್ಬರ ಭೇಟಿಗೂ ಮುನ್ನ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದರು
    ಈ ವೇಳೆ ಅವರು ಮುಖ್ಯಮಂತ್ರಿಗಳಿಗೆ ಕಹಿ ಸುದ್ದಿಯೊಂದನ್ನು ಹೇಳಿದ್ದು, ಇದರಿಂದ ವಿಚಲಿತರಾದ ಬೊಮ್ಮಾಯಿ ನಂತರ ಅಮಿತ್ ಶಾ ಅವರನ್ನು ಭೇಟಿ ಮಾಡಿದರು.
    ಹತ್ತು ನಿಮಿಷದ ಈ ಭೇಟಿಯಲ್ಲಿ ಅಮಿತ್ ಶಾ‌ ಅವರಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತ ಕೋರ್ಟ್ ಆದೇಶ ವಿವರಿಸಿ ಸಂಪುಟ ವಿಸ್ತರಣೆಗೆ ಅನುಮತಿ ಕೋರಿದರು.ಆದರೆ ಅಮಿತ್ ಶಾ ಇದಕ್ಕೆ ಯಾವುದೇ ಸ್ಪಷ್ಟ ಪ್ರತಿಕ್ರಿಯೆ ನೀಡದೆ ಸದ್ಯದಲ್ಲೇ ರಾಜಕೀಯ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಹೇಳಿ ಪಕ್ಷದ ಅಧ್ಯಕ್ಷ ನಡ್ಡಾ ಅವರನ್ನು ಭೇಟಿ ಮಾಡಲು ಸೂಚಿಸಿದರು.
    ಅದರಂತೆ ಸಿಎಂ ಬೊಮ್ಮಾಯಿ ಪಕ್ಷದ ಅಧ್ಯಕ್ಷ ನಡ್ಡಾ ಅವರನ್ನು ಭೇಟಿ ಮಾಡಿದರು. ಈ ವೇಳೆ ನಡ್ಡಾ ಕೂಡಾ ಸಂಪುಟ ವಿಸ್ತರಣೆಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದರಿಂದ ವಿಚಲಿತರಾದ ಸಿಎಂ ಬೇಸರದಿಂದಲೇ ಹೊರ ಬಂದಿದ್ದಾರೆ. ನಂತರದಲ್ಲಿ ಸಂಪುಟ ಸರ್ಜರಿ ಸದ್ಯಕ್ಕಿಲ್ಲ ಎಂದವರು ಇದೀಗ ರಾಜಕೀಯ ದಾಳ ಪ್ರಯೋಗಿಸಲು ಮುಂದಾಗಿದ್ದಾರೆ.
    ಇವರಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ವರದಾನವಾಗಿ ಬಂದಿದೆ. ಇದನ್ನಿಟ್ಟುಕೊಂಡ ಈಗ ಸಿಎಂ ಬೊಮ್ಮಾಯಿ ಬಾಕಿಯಿರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಹಲವು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಮುಂದಾಗಿದ್ದಾರೆ.
    ಇದರೊಂದಿಗೆ ವಿಧಾನ ಪರಿಷತ್ ಹಾಗು ರಾಜ್ಯಸಭೆ ಚುನಾವಣೆ ಸಹ ನಡೆಯುತ್ತಿದ್ದು ಈ ಎಲ್ಲಾ ಪ್ರಕ್ರಿಯೆ ಪೂರ್ಣಗೊಳ್ಳಲು ಕನಿಷ್ಟ ಎರಡು ತಿಂಗಳಾದರೂ ಬೇಕು, ಅಲ್ಲಿಯವರೆಗೆ ಪಕ್ಷ ಸಂಪುಟ ವಿಸ್ತರಣೆಯೂ ಸೇರಿದಂತೆ ಯಾವುದೇ ರಾಜಕೀಯ ತೀರ್ಮಾನ ಕೈಗೊಳ್ಳುವುದಿಲ್ಲ ಎನ್ನುವುದು ಸಿಎಂ ಬೊಮ್ಮಾಯಿ ಅವರ ಲೆಕ್ಕಾಚಾರವಾಗಿದೆ.
    ಇದಕ್ಕೆ ಪೂರಕವೆಂಬಂತೆ ದೆಹಲಿಯಿಂದ ಬರುತ್ತಿದ್ದಂತೆ ಸಿಎಂ ಬೊಮ್ಮಾಯಿ ಸ್ಥಳೀಯ ಸಂಸ್ಥೆ ಚುನಾವಣೆ ಕುರಿತಂತೆ ಕೋರ್ಟ್ ನೀಡಿರುವ ಆದೇಶದ ಬಗ್ಗೆ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ ಜೊತೆ ಚರ್ಚೆ ನಡೆಸಿದರು.
    ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಸ್ಥಳೀಯ ಸಂಸ್ಥೆ ಚುನಾವಣೆ ಸಂಬಂಧ ಸಚಿವರು ಹಾಗು ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸುತ್ತೇವೆ. ಸುಪ್ರೀಂ ಕೋರ್ಟ್ ನ ಎರಡೂ ತೀರ್ಪುಗಳ ಬಗ್ಗೆಯೂ ಚರ್ಚಿಸುತ್ತೇವೆ. ಒಬಿಸಿ ಮೀಸಲಾತಿ ಇಟ್ಟುಕೊಂಡೇ ಚುನಾವಣೆ ಮಾಡಬೇಕು ಎಂಬ ಬಗ್ಗೆ ಸುಪ್ರೀಂ ಕೋರ್ಟ್‌ನ ಎರಡು ತೀರ್ಪಿನ ಬಗ್ಗೆ ವಿಶ್ಲೇಷಣೆ ಮಾಡುತ್ತೇವೆ ಎಂದರು.
    ಹಿಂದುಳಿದ ವರ್ಗಗಳಿಗೆ ಮೀಸಲಾತಿ ಸಂಬಂಧ ಈಗಾಗಲೇ ಸಮಿತಿ ಕೂಡ ನೇಮಿಸಿದ್ದೇವೆ. ಅದರ ಬಗ್ಗೆಯೂ ಹಾಗು ವಿಪಕ್ಷ ನಾಯಕರ ಪತ್ರದ ಬಗ್ಗೆ ಚರ್ಚೆ ಮಾಡುತ್ತೇವೆ. ಮುಂದೆ ಯಾವ ನಿಲುವನ್ನು ತೆಗೆದುಕೊಳ್ಳಬೇಕು ಎಂದು ಕಾನೂನು ತಜ್ಞರ ಜೊತೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದರು.
    ಇದುವರೆಗಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಸಂವಿಧಾನದ ಪ್ರಕಾರವೇ ಓಬಿಸಿಯವರಿಗೆ ಪ್ರಾತಿನಿಧ್ಯ ಕೊಡುತ್ತಾ ಬಂದಿದ್ದೇವೆ. ಈಗ ಒಬಿಸಿ ಇಟ್ಟುಕೊಂಡೇ ಚುನಾವಣೆ ಮಾಡಬೇಕೆಂಬುದು ನಮ್ಮ ಉದ್ದೇಶ ಆಗಿದೆ. ಹೀಗಾಗಿ ಒಬಿಸಿ ಇಟ್ಟುಕೊಂಡು ಯಾವ ರೀತಿ ಚುನಾವಣಾ ಪ್ರಕ್ರಿಯೆ ಮಾಡಬಹುದು ಎಂಬುದರ ಬಗ್ಗೆ ಚಿಂತನೆ ನಡೆದಿದೆ ಎಂದು ಹೇಳಿದರು.

    bommayi
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯಸಭೆ ಚುನಾವಣೆ
    Next Article ಲಿಪ್ ಸ್ಟಿಕ್ ಗೆ ಹೋಯ್ತು 3ಲಕ್ಷ
    vartha chakra
    • Website

    Related Posts

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    RCB ಪದಾಧಿಕಾರಿಗಳಿಗೆ ಜಾಮೀನು.

    ಜೂನ್ 12, 2025

    ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್.

    ಜೂನ್ 11, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಅಹಮದಾಬಾದ್ ನಲ್ಲಿ ವಿಮಾನ ದುರಂತ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Donaldtip ರಲ್ಲಿ ವೇತನ ತಾರತಮ್ಯ ಸರಿಪಡಿಸಲು ಕ್ರಮ
    • Donaldtip ರಲ್ಲಿ ನಾವೇ ಒರಿಜಿನಲ್, ಬಿಜೆಪಿಯವರು ನಕಲಿ – ರಾಮಲಿಂಗಾರೆಡ್ಡಿ | Ramlinga Reddy
    • bylgegmwh ರಲ್ಲಿ ಪೊಲೀಸರಿಗೆ ಕೊಟ್ಟ ದೂರನ್ನೇ ಬದಲಾಯಿಸಿದ ಲಕ್ಷ್ಮಿ ಹೆಬ್ಬಾಳ್ಕರ್ | Lakshmi Hebbalkar
    Latest Kannada News

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಜೂನ್ 13, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಜೂನ್ 13, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಮನೆ ಬಳಿ ಕಳ್ಳತನ #thief #movie #memes #sump #house #criminal #police #meme #fraud #impeached
    Subscribe