ಬೆಂಗಳೂರು,ಜಿ.8:
ರೆಬಲ್ ಸ್ಟಾರ್ ಅಂಬರೀಶ್ ಅವರ ಪತ್ನಿ ಹುಚ್ಚೇಗೌಡರ ಸೊಸೆ ಎಂದು ಹೇಳುವ ಮೂಲಕ ಮಂಡ್ಯ ಜಿಲ್ಲೆಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ನಟಿ ಸುಮಲತಾ ಇದೀಗ ಮತ್ತೆ ಸಕ್ಕರೆ ನಾಡಿನ ರಾಜಕಾರಣದಲ್ಲಿ ಸಕ್ರಿಯರಾಗುವ ಸೂಚನೆ ನೀಡಿದ್ದಾರೆ.
ಮಂಡ್ಯ ರಾಜಕಾರಣದಲ್ಲಿ ರೆಬಲ್ ಲೇಡಿ ಎಂದೇ ಗುರುತಿಸಿಕೊಂಡ ಸುಮಲತಾ ಕಳೆದ ಲೋಕಸಭೆ ಚುನಾವಣೆ ಸಮಯದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು ಆನಂತರ ರಾಷ್ಟ್ರೀಯ ಮಟ್ಟದಲ್ಲಿ ನಡೆದ ಹೊಂದಾಣಿಕೆ ಅನ್ವಯ ತಮ್ಮ ಕ್ಷೇತ್ರವನ್ನು ಪ್ರತಿನಿಧಿಸಲು ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರಿಗೆ ಬಿಟ್ಟುಕೊಟ್ಟಿದ್ದರು ಆನಂತರ ಸಕ್ರಿಯ ರಾಜಕಾರಣದಲ್ಲಿ ಅಷ್ಟಾಗಿ ತೊಡಗಿಕೊಂಡಿರಲಿಲ್ಲ.
ಇದೀಗ ದಿಡೀರ್ ಎಂದುಮಂಡ್ಯ ನಗರದ ಬಂದಿಗೌಡ ಬಡಾವಣೆಯಲ್ಲಿ ಹೊಸ ಮನೆ ಬಾಡಿಗೆ ಪಡೆದ ಸುಮಲತಾ.ನೂತನ ಬಾಡಿಗೆ ಮನೆಯಲ್ಲಿ ಹಾಲು ಉಕ್ಕಿಸುವ ಕಾರ್ಯ ನೆರವೇರಿಸಿದ್ದಾರೆ.
ಸಂಕ್ರಾಂತಿಯ ನಂತರ ಮಂಡ್ಯ ಜಿಲ್ಲೆಯ ರಾಜಕಾರಣದಲ್ಲಿ ಸಕ್ರಿಯರಾಗುವ ಸೂಚನೆ ನೀಡಿರುವ ಸುಮಲತಾ ಅವರು ತಮ್ಮ ಪುತ್ರ ಅಭಿಷೇಕ್ ಅವರ ರಾಜಕೀಯ ಪ್ರವೇಶಕ್ಕೆ ರಂಗ ಸಜ್ಜುಗೊಳಿಸುತ್ತಿದ್ದಾರೆ.
ಮುಂಬರುವ ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿ ಮೂಲಕ ತಮ್ಮ ಬೆಂಬಲಿಗರನ್ನು ಚುನಾವಣೆಯ ಅಕಾಡಕ್ಕೆ ಧುಮುಕಿಸಲು ಕಾರ್ಯತಂತ್ರ ರೂಪಿಸುತ್ತಿರುವ ಸುಮಲತಾ ತಮ್ಮ ಪುತ್ರನನ್ನು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅಣಿಗೊಳಿಸುತ್ತಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
Previous ArticleMSIL ಟೂರ್ ಪ್ಯಾಕೇಜ್ ಇದೆ ನೋಡಿ
Next Article ಚಾಂಪಿಯನ್ಸ್ ಟ್ರೋಫಿಗೆ ಭಾರತ ಸಂಭಾವ್ಯ ತಂಡ