ನವದೆಹಲಿ: ದಿನಬಳಕೆಯ ಅಡುಗೆ ಅನಿಲ ಬೆಲೆ ಮತ್ತೆ ಏರಿಕೆಯಾಗಿದೆ. ಇಂದು ಗುರುವಾರದಿಂದಲೇ ಜಾರಿಗೆ ಬರುವಂತೆ 14.2 ಕೆಜಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 3.5 ರೂಪಾಯಿ ಏರಿಕೆಯಾಗಿದೆ.
ವಾಣಿಜ್ಯ ಬಳಕೆ ಸಿಲಿಂಡರ್‌ಗಳ ಬೆಲೆಯನ್ನು 8 ರೂಪಾಯಿ ಹೆಚ್ಚಿಸಲಾಗಿದೆ.
ದರ ಏರಿಕೆ ಪರಿಣಾಮವಾಗಿ ಇಂದಿನಿಂದ ಗೃಹಬಳಕೆಯ ಸಿಲಿಂಡರ್ ಬೆಲೆ 1003 ರೂಪಾಯಿ ಆಗಿದೆ.
ಒಂದು ತಿಂಗಳ ಅವಧಿಯಲ್ಲಿ ಗೃಹಬಳಕೆಯ ಸಿಲಿಂಡರ್‌ಗಳ ಬೆಲೆ ಏರಿಕೆಯಾಗುತ್ತಿರುವುದು ಇದು ಎರಡನೇ ಬಾರಿ. ಈ ಹಿಂದೆ ಮೇ 8 ರಂದು ಗೃಹಬಳಕೆಯ ಅಡುಗೆ ಅನಿಲದ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 50 ರೂಪಾಯಿ ಹೆಚ್ಚಿಸಲಾಗಿತ್ತು. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಮೇ 7 ರಂದು ಪ್ರತಿ ಸಿಲಿಂಡರ್‌ಗೆ 10 ರೂಪಾಯಿ ಹೆಚ್ಚಿಸಲಾಗಿತ್ತು.
14.2 ಕೆಜಿ LPG ಸಿಲಿಂಡರ್ ಈಗ ದೆಹಲಿಯಲ್ಲಿ 1003 ರೂ, ಕೋಲ್ಕತ್ತಾದಲ್ಲಿ ಪ್ರತಿ ಸಿಲಿಂಡರ್‌ಗೆ 1029 ರೂಪಾಯಿಗೆ ದರವನ್ನು ಪರಿಷ್ಕರಿಸಲಾಗಿದೆ. ದರ ಏರಿಕೆಯ ನಂತರ ಚೆನ್ನೈ ಸಿಲಿಂಡರ್ ಬೆಲೆ 1018.5 ರೂಪಾಯಿ ಆಗಿದೆ. ಮುಂಬೈನಲ್ಲಿ ಹೊಸ ದರ 1003 ರೂಪಾಯಿ ಆಗಿದೆ.