Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಲಗಿದ್ದಲ್ಲೇ ಸುಟ್ಟು ಕರಕಲಾದರು
    ಸುದ್ದಿ

    ಮಲಗಿದ್ದಲ್ಲೇ ಸುಟ್ಟು ಕರಕಲಾದರು

    vartha chakraBy vartha chakraಆಗಷ್ಟ್ 16, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.16-
    ರಾಜಧಾನಿ ಮಹಾನಗರ ಬೆಂಗಳೂರಿನಲ್ಲಿ ಎದೆ ಝಲ್ಲೆನಿಸುವ ಹೃದಯ ವಿದ್ರಾವಕ ಘಟನೆ ನಡೆದಿದೆ
    ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಮಕ್ಕಳೊಂದಿಗೆ ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಜೀವ ದಹನವಾಗಿದ್ದಾರೆ.
    ಕರ್ನಾಟಕ ಶಕ್ತಿ ಕೇಂದ್ರ ವಿಧಾನಸೌಧದ ಕೂಗಳತೆ ದೂರದಲ್ಲಿರುವ ಹಲಸೂರು ಗೇಟ್ ಪೋಲಿಸ್ ಠಾಣೆ ವ್ಯಾಪ್ತಿಯ ನಗರ್ತಪೇಟೆಯಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ.
    ದುರ್ಘಟನೆಯಲ್ಲಿ ಸಜೀವ ದಹನವಾಗಿರುವವರನ್ನು ಮದನ್ (38), ಪತ್ನಿ ಸಂಗೀತಾ (33) ಮಿತೇಶ್ (8), ವಿಹಾನ್ (5) ಎಂದು ಗುರುತಿಸಲಾಗಿದೆ. ಈ ಎಲ್ಲರೂ ಒಂದೇ ಕುಟುಂಬದವರಾಗಿದ್ದು, ಮತ್ತೊಂದು ಮಹಡಿಯಲ್ಲಿದ್ದ ಸುರೇಶ್‌ ಎಂಬವರೂ ಸುಟ್ಟು ಕರಕಲಾಗಿದ್ದಾರೆ.
    ನಗರ್ತಪೇಟೆಯ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಮುಂಜಾನೆ 3.30ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ನಿಂದ ಅಂಗಡಿಯಲ್ಲಿ ಬೆಂಕಿ ಹೊತ್ತಿಕೊಂಡು ಈ ದುರ್ಘಟನೆ ಸಂಭವಿಸಿದೆ.
    ಸಂದೀಪ್ ಮತ್ತು ಬಾಲಕೃಷ್ಣ ಎಂಬುವವರ ಒಡೆತನದ ಒಟ್ಟು ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ನೆಲಮಹಡಿ ಸೇರಿ ಎರಡು ಮಹಡಿಯಲ್ಲಿ ಗೋಡೌನ್ ಇದೆ.ಈ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೊದಲ ಮಹಡಿಯಲ್ಲಿ ಮಲಗಿದ್ದ ಕಾರ್ಮಿಕ ಸುರೇಶ್ ಸಜೀವ ದಹನಗೊಂಡಿದ್ದಾರೆ.
    ಮೂರನೇ ಮಹಡಿಯಲ್ಲಿ ಮದನ್ ಕುಮಾರ್ ಪತ್ನಿ ಸಂಗೀತಾ, ಮಕ್ಕಳಾದ ವಿಹಾನ್ ಹಾಗೂ ನಿತೇಶ್ ವಾಸವಿದ್ದರು. ಘಟನೆಯಲ್ಲಿ ಎಲ್ಲರೂ ಸಾವನ್ನಪ್ಪಿದ್ದಾರೆ.
    ಘಟನಾ ಸ್ಥಳಕ್ಕೆ ನಗರ ಪೊಲೀಸ್‌ ಆಯುಕ್ತ  ಸೀಮಂತ್‌ ಕುಮಾರ್‌ ಸಿಂಗ್‌ ಅವರು ಭೇಟಿ ನೀಡಿ ಪರಿಶೀಲಿಸಿದರು .ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾತ್ರಿ 2.30ರ ಸುಮಾರಿಗೆ ಅಗ್ನಿ ಅವಗಢ ಸಂಭವಿಸಿದ ಮಾಹಿತಿ ಬಂದಿದೆ.ತಕ್ಷಣವೇ ಅಗ್ನಿಶಾಮಕ ದಳದವರು ನಮ್ಮ ಪೊಲೀಸರು ಪರಿಶೀಲನೆ ಮಾಡಿ ಪರಿಹಾರ ಕಾರ್ಯ ಕೈಗೊಂಡಿದ್ದಾರೆ.
    ನೆಲಮಹಡಿಯಲ್ಲಿರುವ ಗೋಡೌನ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಅದು ಮೇಲಿನ ಮಹಡಿಗಳಿಗೆ ಆವರಿಸಿದೆ. ಬೆಂಕಿ ಹೊತ್ತಿಕೊಂಡ ಕೂಡಲೇ ಕಟ್ಟಡದಲ್ಲಿದ್ದ ಬಹುತೇಕ ಜನ ಓಡಿ ಹೋಗಿದ್ದಾರೆ. ಆದರೆ ಒಂದು ಕುಟುಂಬದ ನಾಲ್ವರು ಮತ್ತೊಬ್ಬ ಸೇರಿ  ಐವರು ಕೆನ್ನಾಲಿಗೆಗೆ ಸಿಲುಕಿಕೊಂಡಿದ್ದಾರೆ.ಮೃತದೇಹಗಳನ್ನು ಈಗಾಗಲೇ ಹೊರ ತೆಗೆಯಲಾಗಿದೆ. ಅಗ್ನಿಶಾಮಕ ಸಿಬ್ಬಂದಿ, ವಿಧಿವಿಜ್ಞಾನ ಪ್ರಯೋಗಾಲಯ ಅಧಿಕಾರಿಗಳು ಹಾಗೂ ನಮ್ಮ ರಕ್ಷಣಾ ತಂಡದವರು ಕಾರ್ಯಾಚರಣೆ ಕೈಗೊಂಡಿದ್ದರು ಎಂದು ಹೇಳಿದರು.
    ಕೆ.ಆರ್ ಮಾರ್ಕೆಟ್ ಬಳಿಯ ನಗರ್ತಪೇಟೆಯ ವಾಣಿಜ್ಯ ಕಟ್ಟಡದಲ್ಲಿದ್ದ ಮಹಡಿ ಮನೆಯಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ್ದ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿ ಸ್ಥಳದಲ್ಲಿ ಅಂಬುಲೆನ್ಸ್‌ಗಳನ್ನ ನಿಯೋಜನೆ ಮಾಡಲಾಗಿತ್ತಾದರೂ ಅದರೊಳಗೆ ಸಿಲುಕಿದ್ದ ಎಲ್ಲರೂ ಸಜೀವ ದಹನಗೊಂಡಿದ್ದಾರೆ.

    Verbattle
    Verbattle
    Verbattle
    ಕರ್ನಾಟಕ ಪೋಲಿಸ್ ಬೆಂಗಳೂರು ವಾಣಿಜ್ಯ ಸಜೀವ ದಹನ
    Share. Facebook Twitter Pinterest LinkedIn Tumblr Email WhatsApp
    Previous Articleಸ್ಪೋಟಕ್ಕೆ ಬೆಚ್ಚಿದ ಬೆಂಗಳೂರು
    Next Article ದರ್ಶನ್ ಯಾವ ಜೈಲಿಗೆ ಹೋಗ್ತಾರೆ ಗೊತ್ತಾ?
    vartha chakra
    • Website

    Related Posts

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಜನವರಿ 18, 2026

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ಜನವರಿ 18, 2026

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ಜನವರಿ 18, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ವಿಮಾನ ಸೇವೆ ವ್ಯತ್ಯಯ: ಇಂಡಿಗೋಗೆ ಭಾರಿ ದಂಡ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AlbertQuida ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • VincentFEd ರಲ್ಲಿ ಅಗಲಿದ “ಕಲಾ ತಪಸ್ವಿ”
    • RichardCet ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    Latest Kannada News

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಜನವರಿ 18, 2026

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ಜನವರಿ 18, 2026

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ಜನವರಿ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.