ಬೆಂಗಳೂರು,ಮೇ.26- ಗೃಹಿಣಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಪ್ರಿಯಕರನನ್ನು ದೊಡ್ಡಬೆಳವಂಗಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ವಡಗೆರೆಯ ಪ್ರಿಯಕರ ರಿಯಾಝ್ ಪಾಷಾ ಬಂಧಿತ ಆರೋಪಿಯಾಗಿದ್ದಾನೆ. ಕಳೆದ
ಮೇ 15 ರಂದು ಮಧ್ಯರಾತ್ರಿ ವಡಗೆರೆ ಗ್ರಾಮದ ಭಾಗ್ಯಶ್ರೀ(35) ಅವರನ್ನು ಮನೆಯಿಂದ ಹೊರಗೆಳೆದು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದನು. ಪ್ರಕರಣದ ಜಾಡು ಹಿಡಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಮೃತ ಭಾಗ್ಯಶ್ರೀ ಪತಿ ಚನ್ನಬಸವರಾಜು ಸಂಬಂಧಿಕರ ಗೃಹ ಪ್ರವೇಶಕ್ಕೆ ತೆರಳಿದ್ದು,ಮನೆಯಲ್ಲಿ ಭಾಗ್ಯಶ್ರೀ ಮತ್ತು ಮಕ್ಕಳು ಮನೆಯಲ್ಲಿಯೇ ಇದ್ದರು. ಸಮಯ ನೋಡಿಕೊಂಡು ರಿಯಾಝ್ ಪಾಷಾ, ಮನೆಗೆ ನುಗ್ಗಿ, ಅವಳನ್ನು ಹೊರಗೆಳೆದಿದ್ದನು. ನಂತರ ಮಕ್ಕಳ ಮುಂದೆಯೇ ಭಾಗ್ಯಶ್ರೀಯನ್ನು ನಿರ್ದಯವಾಗಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿ ಅಲ್ಲಿಂದ ಪರಾರಿಯಾಗಿದ್ದ.
ಈ ಕುರಿತಂತೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಬ್ ಇನ್‍ಸ್ಪೆಕ್ಟರ್ ಜ್ಞಾನಮೂರ್ತಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ರಾಯಚೂರಿನ ಲಿಂಗಸೂಗೂರು ಗ್ರಾಮದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ
Previous Article10 ಅಡಿ ಎತ್ತರದ ಬ್ರಹ್ಮಕಲಶ
Next Article ಇನ್ನೆರಡು ದಿನಗಳಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶ