ಚಿತ್ರದುರ್ಗ,ಅ.10-ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಭಾಗಿಯಾಗಿ ಜೈಲು ಸೇರಿರುವ
ಮುರುಘಾಶ್ರೀಗಳಿಗೆ ಇಂದೂ ಜಾಮೀನು ಮಂಜೂರಾಗಿಲ್ಲ. ಅವರನ್ನು ಮತ್ತೆ ಹನ್ನೊಂದು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಲಯ ಆದೇಶಿಸಿದೆ.
ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಮುರುಘಾ ಶರಣರ ನ್ಯಾಯಾಂಗ ಬಂಧನ ಇಂದು ಅಂತ್ಯವಾದ ಹಿನ್ನೆಲೆ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ವಾರ್ಡನ್ಗೂ ಜೈಲೇ ಗತಿ:
ಪ್ರಕರಣದ ಎರಡನೇ ಆರೋಪಿ ಹಾಸ್ಟೆಲ್ನ ಮಹಿಳಾ ವಾರ್ಡನ್ ಅವರ ನ್ಯಾಯಾಂಗ ಬಂಧನ ಮುಗಿದಿತ್ತು. ಅವರನ್ನು ಸಹ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಮಹಿಳಾ ವಾರ್ಡನ್ ಅವರನ್ನು ಅಕ್ಟೋಬರ್ 21ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.
ಏನಿದು ಪ್ರಕರಣ:
ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಮಠದ ಶಾಲೆಯಲ್ಲಿ ಓದುತ್ತಿರುವ ಇಬ್ಬರು ವಿದ್ಯಾರ್ಥಿನಿಯಿರಿಂದ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣ ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂಬ ಕಾರಣ ನೀಡಿ ಮೈಸೂರಿನಿಂದ ಚಿತ್ರದುರ್ಗಕ್ಕೆ ಪ್ರಕರಣದ ವಿಚಾರಣೆಯನ್ನು ಹಸ್ತಾಂತರಿಸಲಾಗಿತ್ತು. ಅದಾದ ನಂತರ ದೊಡ್ಡ ಮಟ್ಟದ ಪ್ರತಿಭಟನೆಗಳು ನಡೆದ ಬಳಿಕ ಮುರುಘಾ ಶರಣರನ್ನು ಗುರುವಾರ ತಡರಾತ್ರಿ ಪೊಲೀಸರು ಬಂಧಿಸಿದ್ದರು. ಪ್ರಕರಣ ದಾಖಲಾಗಿ ವಾರ ಕಳೆದರೂ ಬಂಧನವಾಗದಿರುವುದಕ್ಕೆ ರಾಜ್ಯಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಹ ಶ್ರೀಗಳ ಪರ ಹೇಳಿಕೆ ನೀಡಿದ್ದರು. ಇದಕ್ಕೂ ಆಕ್ರೋಶ ಕೇಳಿ ಬಂದಿತ್ತು. ಸದ್ಯ ಆಸ್ಪತ್ರೆಯಲ್ಲಿರುವ ಶರಣರಿಗೆ 14 ದಿನಗಳ ನ್ಯಾಯಾಂಗ ಬಂಧನವಾಗಿದೆ.
Previous Articleಕೇಂದ್ರಕ್ಕೆ ಆಸ್ತಿ ಮಾರಿ ಹಣಗಳಿಸುವ ಚಿಂತೆ!
Next Article ದೇವಲೋಕ ವಾಸಿಯಾದ ದೈವಸ್ವರೂಪಿ ಮೊಸಳೆ