ಬೆಂಗಳೂರು, ಜೂನ್ 14: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಕಾವೇರಿ ನದಿ ಮೇಲ್ವಿಚಾರಾಣಾ ಮಂಡಳಿಯು ಡಿಪಿಆರ್ ಅನುಮೋದನೆ ಮಾಡಬೇಕೆಂದು ಕೇಂದ್ರ ಜಲ ಆಯೋಗವೇ ಹಿಂದೆ ಷರತ್ತು ವಿಧಿಸಿತ್ತು. ಕಾವೇರಿ ನದಿ ಮೇಲ್ವಿಚಾರಣಾ ಸಮಿತಿ ಈಗಾಗಲೇ ಹಲವಾರು ಸಭೆ ನಡೆಸಿದ್ದು, ಅಂತಿಮ ಜೂನ್ 16 ರಂದು ಅಂತಿಮ ಸಭೆ ನಡೆಯಲಿದೆ. ಕಾವೇರಿ ವಿಷಯದ ಮೇಲೆ ಈ ರೀತಿ ಹಲವಾರು ವರ್ಷಗಳಿಂದ ತಮಿಳುನಾಡು ಮಾಡಿದ್ದಾರೆ. ಇದು ಅದರ ಭಾಗವಷ್ಟೇ. ಇದು ಕಾನೂನಿನ ಚೌಕಟ್ಟಿನಲ್ಲಿ ನಿಲ್ಲುವುದೂ ಇಲ್ಲ. ಕಾನೂನು ಬಾಹಿರ ಪತ್ರವನ್ನು ಕೇಂದ್ರ ಖಂಡಿತವಾಗಿಯೂ ಪರಿಗಣಿಸುವುದಿಲ್ಲ. ನ್ಯಾಯ ಸಿಗುವ ಬಗ್ಗೆ ನಮಗೆ ವಿಶ್ವಾಸವಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಜೂನ್ 16 ರಂದು ತಮಿಳುನಾಡು, ಪಾಂಡಿಚೇರಿ, ಕರ್ನಾಟಕ, ಕೇರಳ ರಾಜ್ಯಗಳು ಹಾಗು ಕೇಂದ್ರ ಸರ್ಕಾರದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸುತ್ತಾರೆ ಎಂದರು.