ಬೆಂಗಳೂರು – ಭ್ರಷ್ಟಾಚಾರ ಆರೋಪ ಪ್ರಕರಣದ ಸುಳಿಗೆ ಸಿಲುಕಿದ್ದವ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪ ಮತ್ತು ಸಹಕಾರ ಮಂತ್ರಿ ಎಸ್.ಟಿ.ಸೋಮಶೇಖರ್ ಮತ್ತಿತರರಿಗೆ ಕೊಂಚ ರಿಲೀಫ್ ಸಿಕ್ಕಿದೆ.
ಅಕ್ರಮ ಅರೋಪದಡಿ ಇವರ ವಿರುದ್ಧ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದ್ದ ಎಫ್ಐಆರ್ ಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ತಮ್ಮ ವಿರುದ್ಧ ಜನ ಪ್ರತಿನಿಧಿಗಳ ನ್ಯಾಯಾಲಯ ನೀಡಿದ್ದ ಆದೇಶ ಪ್ರಶ್ನಿಸಿ ಯಡಿಯೂರಪ್ಪ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ವಿಭಾಗೀಯ ಪೀಠ ಪ್ರಕರಣದ ವಿಚಾರಣೆಗೆ ತಡೆಯಾಜ್ಞೆ ನೀಡಿದೆ ಇದರೊಂದಿಗೆ ಲೋಕಾಯುಕ್ತ ತನಿಖೆಗೆ ತಡೆಯಾಜ್ಞೆ ಸಿಕ್ಕಿದೆ.
ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ವಸತಿ ಯೋಜನೆಯ ಕಾಮಗಾರಿಯೊಂದರ ಗುತ್ತಿಗೆ ನೀಡಲು ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ, ಅವರ ಮಗ ಬಿ.ವೈ. ಬಿಜಯೇಂದ್ರ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸೇರಿದಂತೆ ಒಂಬತ್ತು ಜನರ ವಿರುದ್ಧ ಲಂಚ ಪಡೆದ ಆರೋಪ ಮಾಡಿದ್ದರು
ಈ ಸಂಬಂಧ ಜನ ಪ್ರತಿನಿಧಿಗಳ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ ಇದನ್ನು ವಿಚಾರಣೆ ನಡೆಸುತ್ತಿರುವ ಕೋರ್ಟ್ ಲೋಕಾಯುಕ್ತಕ್ಕೆ ತನಿಖೆ ನಡೆಸಲು ಸೂಚಿಸಿದೆ ಅದರಂತೆ ಇದೀಗ ಎಫ್ಐಆರ್ ದಾಖಲಾಗಿತ್ತು.
ಯಡಿಯೂರಪ್ಪ ಅವರ ಮೊಮ್ಮಗ ಶಶಿಧರ ಮರಡಿ, ಅಳಿಯ ಸಂಜಯ ಶ್ರೀ, ಗುತ್ತಿಗೆದಾರ ಚಂದ್ರಕಾಂತ ರಾಮಲಿಂಗಂ, ಐಎಎಸ್ ಅಧಿಕಾರಿ ಡಾ.ಜಿ.ಸಿ. ಪ್ರಕಾಶ್, ಕೆ. ರವಿ ಮತ್ತು ಯಡಿಯೂರಪ್ಪ ಅವರ ಮತ್ತೊಬ್ಬ ಅಳಿಯ ವಿರುಪಾಕ್ಷಪ್ಪ ಯಮಕನಮರಡಿ ಅವರನ್ನು ಎಫ್ಐಆರ್ ನಲ್ಲಿ ಹೆಸರಿಸಲಾಗಿದೆ.
Previous Articleಬಂಧಿತ ಉಗ್ರ ಬಾಂಬ್ ತಯಾರಿಕೆ ಪರಿಣಿತ
Next Article Bescom ಗ್ರಾಹಕರಿಗೆ ದರ ಹೆಚ್ಚಳದ ಬರೆ