ಬೆಂಗಳೂರು,ಮೇ.27-
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಲೈಂಗಿಕ ಕಿರುಕುಳದ (ಪೋಕ್ಸೊ) ಕೇಸ್ ದಾಖಲಿಸಿದ್ದ ಮಹಿಳೆಯು ಉಸಿರಾಟದ ತೊಂದರೆಯಿಂದ ನಗರದಲ್ಲಿ ಮೃತಪಟ್ಟಿದ್ದಾರೆ.
ಉಸಿರಾಟದ ತೊಂದರೆಯಿಂದ ಹುಳಿಮಾವು ಬಳಿಯ ನ್ಯಾನೋ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಮತಾ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ
ಮಹಿಳೆಯ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಈ ಹಿಂದೆ ಲೈಂಗಿಕ ದೌರ್ಜನ್ಯ ಆಗಿತ್ತು ಎನ್ನಲಾಗಿತ್ತು. ಈ ಸಂಬಂಧ ಎಸ್‌ಐಟಿ ತನಿಖೆಗೆ ವಹಿಸುವಂತೆ ಸಹಕರಿಸಬೇಕು ಎಂದು ಒತ್ತಾಯಿಸಲು 2024ರ ಫೆಬ್ರವರಿ 2ರಂದು ಯಡಿಯೂರಪ್ಪನವರ ಮನೆಗೆ ಸಂತ್ರಸ್ತ ಮಗಳ ಜತೆಗೆ ಮಹಿಳೆ ಹೋಗಿದ್ದರು.
ಈ ವೇಳೆ ಯಡಿಯೂರಪ್ಪ ಅವರು ತಾಯಿ ಮತ್ತು ಮಗಳ ಜತೆ 9 ನಿಮಿಷಗಳ ಕಾಲ ಮಾತನಾಡಿದ್ದರು. ಆಗ ಅವರು ಬಾಲಕಿಯನ್ನು ತಮ್ಮ ಪಕ್ಕದಲ್ಲೇ ಕೂರಿಸಿಕೊಂಡು ಸಾಂತ್ವನ ಹೇಳಿದ್ದರು ಎನ್ನಲಾಗಿದೆ. ನಂತರ ಯಡಿಯೂರಪ್ಪ ಅವರು ಬಾಲಕಿಯನ್ನು ತಮ್ಮ ರೂಮಿಗೆ ಕರೆದುಕೊಂಡು ಹೋಗಿ ಐದು ನಿಮಿಷ ಬಾಗಿಲು ಹಾಕಿಕೊಂಡಿದ್ದರು. ಈ ವೇಳೆ ಅವರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ತಾಯಿಗೆ ಬಾಲಕಿ ಹೇಳಿದ್ದಳು.
ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆ ನೀಡಿದ ದೂರಿನ ಮೇರೆಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್ ದಾಖಲಾಗಿತ್ತು. ನಂತರ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು.
Previous Articleಪ್ರಧಾನಿ ಹೋಟೆಲ್ ಬಿಲ್ ಪಾವತಿಸಿದ ರಾಜ್ಯ ಸರ್ಕಾರ.
Next Article ಮಾನವ ಕಳ್ಳ ಸಾಗಾಣಿಕೆ ಜಾಲ ಪತ್ತೆ.
1 ಟಿಪ್ಪಣಿ
i-tec.ru http://multimedijnyj-integrator.ru .