Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜಾ ಕಾಲುವೆ ಒತ್ತುವರಿ ಮುಲಾಜಿಲ್ಲದೆ ತೆರವು
    Viral

    ರಾಜಾ ಕಾಲುವೆ ಒತ್ತುವರಿ ಮುಲಾಜಿಲ್ಲದೆ ತೆರವು

    vartha chakraBy vartha chakraಮೇ 22, 20254 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮೇ.21: ನಗರದಲ್ಲಿ ರಾಜಕಾಲುವೆ ಒತ್ತುವರಿಯನ್ನು ಎಷ್ಟೇ ಪ್ರಭಾವಿಗಳು ಮಾಡಿದ್ದರೂ, ಅದನ್ನು ಮುಲಾಜಿಲ್ಲದೆ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

    ಅವರು ಇಂದು ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

    ಬೆಂಗಳೂರಿನಲ್ಲಿ ನೆರೆ ನೀರು ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ರಾಜಕಾಲುವೆ ಅಭಿವೃದ್ದಿಯಂತಹ ಮೂಲಸೌಕರ್ಯ ಅಭಿವೃದ್ಧಿಗೆ ನಮ್ಮ ಸರ್ಕಾರ ಯೋಜನೆಗಳನ್ನು ರೂಪಿಸಿ ಕಾಮಗಾರಿಗಳನ್ನು ಕೈಗೊಂಡಿದ್ದೇವೆ. ರಾಜಕಾಲುವೆ ಸುಮಾರು 860 ಕಿಮೀ ಇದೆ. 491 ಕಿಮೀ ರಾಜಕಾಲುವೆಯಲ್ಲಿ ಲೈನಿಂಗ್ ಕೆಲಸ ಮುಗಿದಿದೆ. 125 ಕಿಮೀ ರಾಜಕಾಲುವೆ ಕಾಮಗಾರಿ ನಡೆಯುತ್ತಿದ್ದು, ಮೂರು ತಿಂಗಳ ಒಳಗಾಗಿ ಪೂರ್ಣಗೊಳಿಸಲಾಗುವುದು. ಇನ್ನುಳಿದ 173 ಕಿಮೀ ರಾಜಕಾಲುವೆ ಅಭಿವೃದ್ಧಿಗೆ ವಿಶ್ವಬ್ಯಾಂಕ್ನಿಂದ 2 ಸಾವಿರ ಕೋಟಿ ರೂ. ಸಾಲ ಪಡೆದು ಕಾಮಗಾರಿಗೆ ಕೈಗೊಂಡಿದ್ದೇವೆ. ಇದರ ಟೆಂಡರ್ ಮುಗಿದಿದ್ದು, ಮೂರು ವರ್ಷಗಳ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಲು ತಿಳಿಸಿದ್ದೇವೆ.

    ಮನೆಗಳಿಗೆ ನೀರು ನುಗ್ಗಿ ಹಾನಿ ಸಂಭವಿಸಿರುವ ಎಲ್ಲಾ ಸಂತ್ರಸ್ತರಿಗೆ ತಕ್ಷಣ ಪರಿಹಾರ ಒದಗಿಸಲಾಗುವುದು. ಹಾನಿ ಕುರಿತು ಕೂಡಲೇ ಸಮೀಕ್ಷೆ ನಡೆಸಿ ಪರಿಹಾರ ಒದಗಿಸಲು ಸೂಚನೆ ನೀಡಿದ್ದೇನೆ. ತಗ್ಗು ಪ್ರದೇಶಗಳಲ್ಲಿ ಬೇಸ್ಮೆಂಟ್ಗಳಲ್ಲಿ ನಿರ್ಮಾಣಕ್ಕೆ ಇನ್ನು ಮುಂದೆ ಅನುಮತಿ ನೀಡದಂತೆ ಸಂಬಂಧಿತ ಪ್ರಾಧಿಕಾರಗಳಿಗೆ ಸೂಚನೆ ನೀಡಿದ್ದೇನೆ. 166 ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ತಗ್ಗು ಪ್ರದೇಶಗಳೆಂದು ಗುರುತಿಸಿ ಮುಂಜಾಗರೂಕತಾ ಕ್ರಮ ಕೈಗೊಳ್ಳಲಾಗಿದೆ.

    ಮಾನ್ಯತಾ ಟೆಕ್ಪಾರ್ಕ್ ಬಳಿ ರಾಜಕಾಲುವೆ ಪರಿಶೀಲನೆ ನಡೆಸಿದ್ದು ಅಲ್ಲಿ ರಾಜಕಾಲುವೆ ಒತ್ತುವರಿ ಗಮನಿಸಲಾಗಿದೆ. ಒತ್ತುವರಿಯನ್ನು ಕೂಡಲೇ ತೆರವುಗೊಳಿಸಲು ಸೂಚನೆ ನೀಡಿದ್ದೇನೆ. ಮಾನ್ಯತಾ ಟೆಕ್ಪಾರ್ಕ್ ಸಿಇಒ ಅವರು ಸ್ವಂತ ರಸ್ತೆಯಲ್ಲಿ 90ದಿನಗಳಲ್ಲಿ ಚರಂಡಿ ನಿರ್ಮಿಸಿ ನೀರು ಸರಾಗವಾಗಿ ಹರಿಯಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

    ಹೆಚ್ಬಿಆರ್ ಬಡಾವಣೆಯ ಐದನೇ ಹಂತದ ರಾಜಕಾಲುವೆ ಸಮಸ್ಯೆಯಿದ್ದು, ಅಲ್ಲಿನ ಮನೆಗಳಿಗೆ ನೀರು ನುಗ್ಗಿದೆ. ರಾಜಕಾಲುವೆಗೆ ಅಲ್ಲಿ ತಡೆಗೋಡೆ ನಿರ್ಮಾಣವಾಗುತ್ತಿದೆ. ಈ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚನೆ ನೀಡಿದ್ದೇವೆ. ಚರಂಡಿಗೆ ಕಸ ಹಾಕುವವರ ವಿರುದ್ಧ ಕಠಿಣ ಕ್ರಮ ಸೂಚನೆ ನೀಡಿದ್ದೇವೆ.

    ಸಾಯಿ ಲೇಔಟ್ ಭೇಟಿ ನೀಡಿದ್ದು, ಅದು ರಾಜಕಾಲುವೆಗಿಂತ ತಗ್ಗು ಪ್ರದೇಶದಲ್ಲಿದೆ. ರೈಲ್ವೆ ಸೇತುವೆ ಬಳಿ ವೆಂಟ್ ಕಿರಿದಾಗಿದ್ದು, ಅದನ್ನು ಅಗಲಗೊಳಿಸಿದರೆ ಮಾತ್ರ ಸಮಸ್ಯೆ ಪರಿಹಾರ ಸಾಧ್ಯ. ಅನೇಕ ವರ್ಷದಿಂದ ಈ ಸಮಸ್ಯೆಯಿದೆ. ವೆಂಟ್ಗಳ ನಿರ್ಮಾಣ ಮತ್ತು ಅಗಲಗೊಳಿಸಲು ಈಗಾಗಲೇ ಅನುದಾನ ಒದಗಿಸಲಾಗಿದ್ದು, ಕಾಮಗಾರಿ ಆದಷ್ಟು ಬೇಗನೆ ಪೂರ್ಣಗೊಳಿಸಲು ಸೂಚನೆ. ಬಿಬಿಎಂಪಿ ಇದಕ್ಕಾಗಿ ಒಟ್ಟು 13ಕೋಟಿ ಬಿಡುಗಡೆಗೆ ಸೂಚನೆ ನೀಡಿದ್ದೇನೆ. ಈಗಾಗಲೇ 6ಕೋಟಿ ವೆಚ್ಚದ ಕಾಮಗಾರಿ ಪೂರ್ಣಗೊಂಡಿದ್ದು, 3ಕೋಟಿ ಪಾವತಿಸಿದ್ದಾರೆ.

    ಮಹಾದೇವಪುರದ ಪಣತ್ತೂರು ಗಾರ್ಡ್ನ್ನಲ್ಲಿ ನೀರು ಸರಾಗವಾಗಿ ಹರಿದು ಹೋಗದೆ ಪ್ರತಿ ವರ್ಷ ಸಮಸ್ಯೆ. ರೈಲ್ವೇ ಲೈನ್ ಕೆಳಗಡೆ ಅಗಲ ಬಹಳ ಕಡಿಮೆಯಿದೆ. ಇದನ್ನು ವಿಸ್ತರಿಸಲು ಹಾಗೂ ರಸ್ತೆ ಅಗಲೀಕರಣ ಕಾರ್ಯ ಈಗಾಗಲೇ ನಡೆಯುತ್ತಿದ್ದು, ಶೇ.20ರಷ್ಟು ಕಾಮಗಾರಿ ಬಾಕಿಯಿದೆ. ಇಲ್ಲಿ ಟ್ರೆಂಚ್ಲೆಸ್ ತಾಂತ್ರಿಕತೆ ಬಳಸಿ ಕೆಲಸ ಮಾಡುತ್ತಿದ್ದು, 45ದಿನಗಳ ಒಳಗಾಗಿ ಉಳಿದಿರುವ ಎಲ್ಲಾ ಕಾಮಗಾರಿ ಮುಗಿಸಲು ಸೂಚನೆ ನೀಡಲಾಗಿದೆ.

    ಸಿಲ್ಕ್ ಬೋರ್ಡ್ ಜಂಕ್ಷನ್ನಲ್ಲಿ ನಾಲ್ಕು ಕಡೆಗಳಿಂದ ನೀರು ಬರುತ್ತಿದ್ದು, ಅಲ್ಲಿಂದ ಎಲ್ಲಾ ನೀರು ಹೆಚ್ಎಸ್ಆರ್ ಲೇಔಟ್ ಕಡೆ ಹರಿದು ಬರುತ್ತದೆ. ಮೆಟ್ರೋ, ಬಿಬಿಎಂಪಿ ಮತ್ತು ರಾಷ್ಟ್ರೀಯ ಹೆದ್ದಾರಿ ಸಮನ್ವಯದಿಂದ ಈ ಸಮಸ್ಯೆಯನ್ನು ಬಗೆಹರಿಸಬೇಕಾಗಿದೆ. ಈ ಮೂರು ವಿಭಾಗಗಳು ಈ ಕುರಿತು ಯೋಜನೆ ರೂಪಿಸಲು ಸೂಚನೆ ನೀಡಿದ್ದೇನೆ.

    ಬೆಂಗಳೂರಿನಲ್ಲಿ 2022ರಲ್ಲಿ 299ಮಿಮೀ ಮಳೆಯಾಗಿತ್ತು. 10 ವರ್ಷಗಳಲ್ಲಿ ಇದು ಎರಡನೇ ಬಾರಿ ಹೆಚ್ಚಿನ ಮಳೆಯಾಗಿದೆ. ಮೇ. 19 ರಂದು ಮಧ್ಯರಾತ್ರಿ 132 ಮಿಮೀ ಮಳೆ ದಾಖಲಾಗಿದೆ ಎಂದು ಹೇಳಿದರು.

    ಬೆಂಗಳೂರು ಸರ್ಕಾರ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಡಾ.ಸಲೀಂ ರಾಜ್ಯ ಪೊಲೀಸ್ ನೂತನ ಸಾರಥಿ
    Next Article ಆಪರೇಷನ್ ಸಿಂಧೂರ್ ಕೊಡುಗೆ
    vartha chakra
    • Website

    Related Posts

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    4 ಪ್ರತಿಕ್ರಿಯೆಗಳು

    1. wrt20 on ಜೂನ್ 8, 2025 2:55 ಫೂರ್ವಾಹ್ನ

      where can i buy clomiphene without dr prescription where can i get generic clomiphene pill where to buy clomid price buying cheap clomid price order cheap clomid tablets where buy generic clomid tablets clomid pct

      Reply
    2. buy viagra cialis line on ಜೂನ್ 9, 2025 11:43 ಅಪರಾಹ್ನ

      Good blog you be undergoing here.. It’s severely to assign great worth belles-lettres like yours these days. I justifiably respect individuals like you! Rent guardianship!!

      Reply
    3. metronidazole uk on ಜೂನ್ 11, 2025 5:59 ಅಪರಾಹ್ನ

      This is the compassionate of criticism I positively appreciate.

      Reply
    4. p0lbt on ಜೂನ್ 22, 2025 1:56 ಫೂರ್ವಾಹ್ನ

      buy amoxil paypal – ipratropium 100 mcg without prescription order combivent online

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JerryDah ರಲ್ಲಿ ಹೂವು ಎಂದು ಮಾಂಸ ಕೊಟ್ಟ ಕಿಡಿಗೇಡಿಗಳು
    • z4727 ರಲ್ಲಿ ಗುತ್ತಿಗೆದಾರರ ಬಂಡಾಯ – ಜಗ್ಗೋಲ್ಲಾ ಎಂದ ಡಿಸಿಎಂ | DK Shivakumar
    • vczkr ರಲ್ಲಿ ಭ್ರೂಣ ಹತ್ಯೆಯ Expert Nurse | Female Foeticide
    Latest Kannada News

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಿತ್ಯಾನಂದನ ಕೈಲಾಸ ಎಲ್ಲಿದೆ ಗೊತ್ತಾ?#nithyananda #kailasa #heaven #australia #varthachakra #yoga
    Subscribe