Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದಲ್ಲಿ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಸದ್ಯಕ್ಕಿಲ್ಲ.
    ಬೆಂಗಳೂರು

    ರಾಜ್ಯದಲ್ಲಿ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಸದ್ಯಕ್ಕಿಲ್ಲ.

    vartha chakraBy vartha chakraಮೇ 20, 20245 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮೇ.21:

    ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿಯುವುದು ಖಚಿತ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣೆ ಮುಗಿದ ನಂತರ ರಾಜ್ಯದಲ್ಲಿ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆಯ ಯಾವುದೇ ಪ್ರಸ್ತಾಪ ಇಲ್ಲ ಎಂದು ಹೇಳಿದ್ದಾರೆ

    ರಾಜ್ಯ ಸರ್ಕಾರ ಒಂದು ವರ್ಷದ ಅಧಿಕಾರ ಅವಧಿ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,

    ದೇಶಾದ್ಯಂತ ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ಅಲೆ ಬೀಸುತ್ತಿದ್ದು ಇದರಲ್ಲಿ ಎನ್ ಡಿಎ ಮೈತ್ರಿಕೂಟ ಧೂಳಿಪಟವಾಗಲಿದೆ ಎಂದು ಭವಿಷ್ಯ ನುಡಿದರು.

    ಇಂಡಿಯಾ ಮೈತ್ರಿಕೂಟದ ಲೇವಡಿ ಮಾಡುವ ಪ್ರಧಾನಿಯವರು ಎನ್‌ಡಿಎ ಮೈತ್ರಿಕೂಟ ಮಾಡಿಕೊಂಡಿದ್ದೇಕೆ? ಗೆಲ್ಲುವ ವಿಶ್ವಾಸವಿದ್ದಿದ್ದರೆ ಏಕಾಂಗಿಯಾಗಿಯೇ ಸ್ಪರ್ಧಿಸಬಹುದಿತ್ತಲ್ಲವೇ? ಎಂದು ಪ್ರಶ್ನಿಸಿದರು.

    ರಾಜ್ಯಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂಬ ಬಿಜೆಪಿಯವರ ಅಪಪ್ರಚಾರದಲ್ಲಿ ಯಾವುದೇ ಹುರುಳಿಲ್ಲ. ಸರ್ಕಾರ ಆರ್ಥಿಕವಾಗಿ ಸಬಲವಾಗಿರುವುದಕ್ಕಾಗಿಯೇ ಪಂಚಖಾತ್ರಿಗಳು ಮತ್ತು ಯೋಜನಾ ವೆಚ್ಚಗಳನ್ನು ಹಿಂದಿನ ಸರ್ಕಾರಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಅನುಷ್ಠಾನಗೊಳಿಸಲಾಗಿದೆ ಎಂದರು.

    ಲೋಕಸಭಾ ಚುನಾವಣೆ ಮುಗಿದ ನಂತರವೂ ಪಂಚ ಖಾತ್ರಿ ಯೋಜನೆಗಳು ಮುಂದುವರೆಯುತ್ತವೆ. ಇದರಲ್ಲಿ ಯಾರಿಗೂ ಅನುಮಾನ ಬೇಡ ಈ ವಿಷಯವಾಗಿ ಬಿಜೆಪಿ ನಾಯಕರು ಅಪಪ್ರಚಾರ ಮಾಡುತ್ತಿದ್ದು ಇದನ್ನು ಯಾರು ನಂಬಬಾರದು ಎಂದು ಮನವಿ ಮಾಡಿದರು.

    ತಮ್ಮ ಸರ್ಕಾರದ ಒಂದು ವರ್ಷದ ಸರ್ಕಾರದ ಸಾಧನೆಯೆಂದರೆ ತಕ್ಷಣವೇ ಪಂಚಖಾತ್ರಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇದಕ್ಕಾಗಿ 2023-24 ರಲ್ಲಿ 36 ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡಿದ್ದೇವೆ. ಮುಂದಿನ ವರ್ಷಕ್ಕೆ 52 ಸಾವಿರ ಕೋಟಿ ರೂ.ಗಳನ್ನು ಕಾಯ್ದಿರಿಸಲಾಗಿದೆ ಎಂದು ತಿಳಿಸಿದರು

    ಶಕ್ತಿ ಯೋಜನೆಯಡಿ 201 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಅನ್ನಭಾಗ್ಯ ಯೋಜನೆಯಡಿ 4.10 ಕೋಟಿ ಫಲಾನುಭವಿಗಳಿಗೆ 5,754 ಕೋಟಿ ರೂ.ಗಳನ್ನು ಬ್ಯಾಂಕ್‌ ಖಾತೆಗೆ ಜಮಾ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಯಡಿ 1.60 ಕೋಟಿ ಮನೆಗಳಿಗೆ ಉಚಿತ ವಿದ್ಯುತ್‌ಗಾಗಿ 7,436 ಕೋಟಿ ರೂ. ಖರ್ಚು ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ 1.20 ಕೊಟಿ ಯಜಮಾನಿಯರಿಗೆ 20,293 ಕೋಟಿ ರೂ.ಗಳನ್ನು ವಿನಿಯೋಗಿಸಲಾಗಿದ್ದು, ಯುವನಿಧಿಯಡಿ 1,57,255 ನೋಂದಣಿಯಾಗಿದ್ದಾರೆ ಎಂದು ವಿವರಿಸಿದರು.

    ಪಂಚಖಾತ್ರಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿರುವುದರ ಜೊತೆಗೆ ಅಭಿವೃದ್ಧಿ ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ. ಕಳೆದ ಬಜೆಟ್‌ನಲ್ಲಿ 54 ಸಾವಿರ ಕೋಟಿ ರೂ.ಗಳ ಬಂಡವಾಳ ವೆಚ್ಚದ ಬದಲಾಗಿ 56 ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ನೀರಾವರಿಗೆ 14,369 ಕೋಟಿ ರೂ.ಗಳ ಬದಲಾಗಿ 18,198 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಲೋಕೋಪಯೋಗಿ ಇಲಾಖೆಯಲ್ಲಿ ಶೇ.99.20 ಯಷ್ಟು ಅನುದಾನ ಬಳಕೆಯಾಗಿದೆ ಎಂದು ತಿಳಿಸಿದರು.

    ಪರಿಶಿಷ್ಟರ ಬಗ್ಗೆ ಕಾಳಜಿ ವಹಿಸುವ ಪ್ರಧಾನಮಂತ್ರಿಯವರು ದೇಶಾದ್ಯಂತ ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಎಸ್‌‍ಇಪಿ ಮತ್ತು ಟಿಎಸ್‌‍ಪಿ ಕಾಯ್ದೆಯನ್ನು ಏಕೆ ಜಾರಿಗೊಳಿಸಲಿಲ್ಲ? ಹಿಂದುಳಿದ ವರ್ಗಗಳ ಮೀಸಲಾತಿಯನ್ನು ತೆಗೆದು ಮುಸ್ಲಿಮರಿಗೆ ನೀಡಲಾಗುತ್ತಿದೆ ಎಂದು ಪ್ರಧಾನಿಯವರು ಅಪ್ಪಟ ಸುಳ್ಳು ಹೇಳುತ್ತಿದ್ದಾರೆ. ಹಿಂದಿನ ಬೊಮಾಯಿ ಅವರ ಸರ್ಕಾರ ಮುಸ್ಲಿಂ ಮೀಸಲಾತಿಯನ್ನು ರದ್ದುಗೊಳಿಸಿತ್ತು. ಸುಪ್ರೀಂಕೋರ್ಟ್‌ನ ವಿಚಾರಣೆ ವೇಳೆ ಯಥಾಸ್ಥಿತಿಯನ್ನು ಮುಂದುವರೆಸುವುದಾಗಿ ಪ್ರಮಾಣ ಪತ್ರ ಸಲ್ಲಿಸಿದೆ. ಈವರೆಗೂ ಅದೇ ವ್ಯವಸ್ಥೆ ಮುಂದುವರೆದಿದೆ ಎಂದರು.

    #CM #siddaramaiah cm karnataka ಚುನಾವಣೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕುಮಾರಸ್ವಾಮಿ ಕೈಮುಗಿಯುತ್ತೇನೆ ಎಂದಿದ್ದು ಯಾರಿಗೆ ಗೊತ್ತಾ
    Next Article ಭಜರಂಗಿ ನಟಿ ಭೀಕರ ಹತ್ಯೆ.
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    5 ಪ್ರತಿಕ್ರಿಯೆಗಳು

    1. czirs on ಜೂನ್ 4, 2025 3:19 ಫೂರ್ವಾಹ್ನ

      cost clomid online how can i get generic clomid without dr prescription clomid prescription cost can i order clomiphene without a prescription can i get cheap clomiphene price order clomiphene pill order generic clomid pills

      Reply
    2. buy cialis 2.5 mg on ಜೂನ್ 10, 2025 2:59 ಫೂರ್ವಾಹ್ನ

      I’ll certainly bring to review more.

      Reply
    3. 0d5aj on ಜೂನ್ 19, 2025 9:17 ಫೂರ್ವಾಹ್ನ

      cost propranolol – generic plavix how to get methotrexate without a prescription

      Reply
    4. gnfo8 on ಜೂನ್ 22, 2025 5:41 ಫೂರ್ವಾಹ್ನ

      order amoxicillin generic – amoxicillin for sale combivent 100 mcg ca

      Reply
    5. fx53g on ಜೂನ್ 24, 2025 8:39 ಫೂರ್ವಾಹ್ನ

      zithromax 500mg uk – nebivolol pills bystolic 5mg generic

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • KennethSOYNC ರಲ್ಲಿ ಶ್ರಮಜೀವಿಗಳಿಗೆ ಮಂತ್ರಿಮಂಡಲದಲ್ಲಿ ಸ್ಥಾನ
    • KennethSOYNC ರಲ್ಲಿ ನಾನು ಹುಚ್ಚ ಅಲ್ಲ ಅಂದ್ರು ಡಿಕೆ ಶಿವಕುಮಾರ್ ಯಾಕೆ ಗೊತ್ತಾ?
    • KennethSOYNC ರಲ್ಲಿ ಭವಾನಿ ರೇವಣ್ಣ ಅವರಿಗೆ SIT ಮತ್ತೊಂದು ನೋಟಿಸ್.
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುರುಡೇಶ್ವರಕ್ಕೆ_ ಹೋಗ್ತಿದ್ದೀರಾ ಜೀನ್ಸ್ ಹಾಕ್ಲೇಬೇಡಿ! #murudeshwar #culturedress #karnataka #rules #shiva
    Subscribe