Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಬಿಜೆಪಿ ಅಧ್ಯಕ್ಷರ ಬಗ್ಗೆ ಆರ್ ಅಶೋಕ್ ಹೇಳಿದ್ದೇನು ಗೊತ್ತಾ ?
    ಸುದ್ದಿ

    ರಾಜ್ಯ ಬಿಜೆಪಿ ಅಧ್ಯಕ್ಷರ ಬಗ್ಗೆ ಆರ್ ಅಶೋಕ್ ಹೇಳಿದ್ದೇನು ಗೊತ್ತಾ ?

    vartha chakraBy vartha chakraಜೂನ್ 27, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜೂ.27-
    ರಾಜ್ಯ ಬಿಜೆಪಿ ಅಧ್ಯಕ್ಷರ ನೇಮಕ ವಿಚಾರವಾಗಿ ಗೊಂದಲ ಇನ್ನಷ್ಟು ಮುಂದುವರೆದಿದೆ ಸದ್ಯದಲ್ಲಿಯೇ ರಾಜ್ಯ ಘಟಕಕ್ಕೆ ನೂತನ ಅಧ್ಯಕ್ಷರನ್ನು ನೇಮಕ ಮಾಡಲಿದ್ದಾರೆ ಎಂದು ಪಕ್ಷದ ಅಧ್ಯಕ್ಷ ವಿಜಯೇಂದ್ರ ಹೇಳಿದ ಬೆನ್ನಲ್ಲೇ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸದ್ಯಕ್ಕೆ ಇದು ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ.
    ಪಕ್ಷದ ವರಿಷ್ಠರನ್ನು ಭೇಟಿಯಾಗಲು ದೆಹಲಿಗೆ ಆಗಮಿಸಿರುವ ಆರ್.ಅಶೋಕ್ ಮೂರು ದಿನಗಳಿಂದ ಇಲ್ಲಿಯೇ ಬೀಡು ಬಿಟ್ಟಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಂದಿನ ಮೂರು ನಾಲ್ಕು ದಿನಗಳಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರ ನೇಮಕ ಆಗಲಿದೆ ಎಂಬ ವರದಿಗಳೆಲ್ಲಾ ಸುಳ್ಳು ವರಿಷ್ಠರು ಈ ಬಗ್ಗೆ ಚರ್ಚೆಯೇ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
    ಮಾಸಾಂತ್ಯಕ್ಕೆ ರಾಜ್ಯ ಬಿಜೆಪಿಗೆ ಅಧ್ಯಕ್ಷರ ನೇಮಕವಾಗಲಿದೆ ಎಂದು ಮಾಧ್ಯಮಗಳು ವರದಿ ಮಾಡಿ ಗಡುವನ್ನು ಕೊಟ್ಟಿವೆ. ಇದು ಸಾಧ್ಯವೇ ಇಲ್ಲ. ಪಕ್ಷದ ರಾಷ್ಟ್ರೀಯ ನಾಯಕರು ಕರ್ನಾಟಕ ರಾಜ್ಯದ ಅಧ್ಯಕ್ಷರ ಆಯ್ಕೆ ಬಗ್ಗೆ ಚರ್ಚೆಯನ್ನೇ ನಡೆಸಿಲ್ಲ. ಹೀಗಿರುವಾಗ 3-4 ದಿನಗಳಲ್ಲಿ ಅಧ್ಯಕ್ಷರ ನೇಮಕ ಹೇಗೆ ಆಗುತ್ತದೆ ಎಂದು ಪ್ರಶ್ನಿಸಿದರು.
    ಕರ್ನಾಟಕ ಹೊರತುಪಡಿಸಿ ದೇಶದ ಬೇರೆ ರಾಜ್ಯಗಳ ಬಿಜೆಪಿ ಅಧ್ಯಕ್ಷರ ನೇಮಕದ ಬಗ್ಗೆ ದೆಹಲಿ ಮಟ್ಟದಲ್ಲಿ ಚರ್ಚೆಗಳಾಗಿರುವುದು ನಿಜ. ಆದರೆ, ಕರ್ನಾಟಕ ಬಿಜೆಪಿ ಅಧ್ಯಕ್ಷರ ಆಯ್ಕೆ, ನೇಮಕ, ಬದಲಾವಣೆ ಯಾವುದರ ಬಗ್ಗೆಯೂ ಚರ್ಚೆಗಗಳೇ ನಡೆದಿಲ್ಲ. ನಾನು ಪಕ್ಷದ ಹಲವು ಮುಖಂಡರ ಜೊತೆ ಅನೇಕ ವಿಚಾರಗಳ ಕುರಿತು ಚರ್ಚೆ ಮಾಡಿದ್ದೇನೆ ಆದರೆ ಎಲ್ಲಿಯೂ ಪಕ್ಷದ ಅಧ್ಯಕ್ಷರ ನೇಮಕ ಕುರಿತು ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.
    ಬಿಜೆಪಿಯಲ್ಲಿ ತಟಸ್ಥರು, ಹೊಸಬರು, ಮೂಲ ಎಂಬಂತಹ ಯಾವುದೇ ಬಣಗಳಿಲ್ಲ ನಾನಂತೂ ಯಾವುದೇ ಬಣಕ್ಕೆ ಸೇರಿದವನಲ್ಲ. ಪಕ್ಷದ ಹಳೆಯ ಕಾರ್ಯಕರ್ತ,ನಮ್ಮದು ರಾಷ್ಟ್ರೀಯ ಪಕ್ಷ. ನಮ್ಮಲ್ಲೂ ಒಂದು ವ್ಯವಸ್ಥೆ ಇದೆ. ಎಲ್ಲರ ಅಭಿಪ್ರಾಯಗಳನ್ನು ಕೇಳಿ, ನಂತರ ಹೈಕಮಾಂಡ್ ಎಲ್ಲವನ್ನೂ ತೀರ್ಮಾನಿಸುತ್ತದೆ ಎಂದರು.
    ನೂತನ ಅಧ್ಯಕ್ಷರ ನೇಮಕ ಸೇರಿದಂತೆ ಪಕ್ಷದ ವಿಚಾರಗಳ ಬಗ್ಗೆ ಕೇಂದ್ರ ಸಚಿವರಾದ ಪ್ರಲ್ಹಾದ್‌ಜೋಶಿಯವರಿಗೆ ಎಲ್ಲ ನಾಯಕರುಗಳು ತಮ್ಮ ಅಭಿಪ್ರಾಯ ಹೇಳುವರು. ಇದಾದ ಬಳಿಕ ಜೋಷಿ ಆವರು ಹೈಕಮಾಂಡ್‌ಗೆ ವರದಿ ನೀಡಲಿದ್ದಾರೆ ಆ ಬಳಿಕ ಹೈಕಮಾಂಡ್ ರಾಜ್ಯಾಧ್ಯಕ್ಷರ ನೇಮಕದ ಬಗ್ಗೆ ತೀರ್ಮಾನ ಮಾಡುತ್ತದೆ. ನಾನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಕೇಂದ್ರ ಸಚಿವರಾದ ರಾಜ್‌ನಾಥ್ ಸಿಂಗ್, ಪ್ರಲ್ಹಾದ್‌ಜೋಷಿ, ವರಿಷ್ಠ ನಾಯಕರುಗಳಾದ ಬಿ.ಎಲ್ ಸಂತೋಷ್, ಧರ್ಮೇಂದ್ರ ಪ್ರಧಾನ್, ಅರುಣ್‌ಸಿಂಗ್ ಸೇರಿದಂತೆ ಹಲವು ನಾಯಕರ ಜತೆ ಮಾತನಾಡಿ ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದ್ದೇನೆ ಎಂದು ಹೇಳಿದರು
    ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ನಡೆಸುವ ಸಂಬಂಧ ವರಿಷ್ಠರು ಮಾರ್ಗದರ್ಶನ ಸಲಹೆ ನೀಡಿದ್ದಾರೆ. ಅದರಂತೆ ನಾವುಗಳು ಹೋರಾಟ ರೂಪಿಸುತ್ತೇವೆ. ನಾವು ಇನ್ನು ಮುಂದೆ ಮೂರು ತಿಂಗಳಿಗೊಮ್ಮೆ ದೆಹಲಿಗೆ ಬಂದು ರಾಜ್ಯರಾಜಕೀಯ ವಿದ್ಯಮಾನಗಳ ಬಗ್ಗೆ ಮಾಹಿತಿ ನೀಡುತ್ತೇನೆ. ನಾನು ಪದೇ ಪದೇ ದೆಹಲಿಗೆ ಬರುವವನಲ್ಲ ಎಂದರು.

    ಕರ್ನಾಟಕ ಕಾಂಗ್ರೆಸ್ ಧರ್ಮ ಬಿಜೆಪಿ ಬೆಂಗಳೂರು ರಾಜಕೀಯ ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಮನೆ, ಮನೆಗೆ ಪೊಲೀಸ್.
    Next Article ಹುಲಿಗೆ ವಿಷವಿಕ್ಕಿದ್ದು ಯಾಕೆ ಗೊತ್ತಾ ?
    vartha chakra
    • Website

    Related Posts

    ಪರಪ್ಪನ ಅಗ್ರಹಾರದಲ್ಲಿ ಟ್ರ್ಯಾಕಿಂಗ್ ಸಿಸ್ಟಂ

    ಡಿಸೆಂಬರ್ 8, 2025

    ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!

    ಡಿಸೆಂಬರ್ 8, 2025

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಡಿಸೆಂಬರ್ 7, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪರಪ್ಪನ ಅಗ್ರಹಾರದಲ್ಲಿ ಟ್ರ್ಯಾಕಿಂಗ್ ಸಿಸ್ಟಂ

    ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mine_vrSa ರಲ್ಲಿ ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    • RichardLib ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • mine_cwSa ರಲ್ಲಿ ವಿಧಾನಸೌಧದ ಮುಂಬಾಗ ಸೀಮೆಎಣ್ಣೆ ಸುರಿದುಕೊಂಡ ದಂಪತಿ | Vidhana Soudha
    Latest Kannada News

    ಪರಪ್ಪನ ಅಗ್ರಹಾರದಲ್ಲಿ ಟ್ರ್ಯಾಕಿಂಗ್ ಸಿಸ್ಟಂ

    ಡಿಸೆಂಬರ್ 8, 2025

    ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!

    ಡಿಸೆಂಬರ್ 8, 2025

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಡಿಸೆಂಬರ್ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೆಂಗಳೂರಲ್ಲಿ ಮನೆ ಕಟ್ಟೋಕೆ ಏನೇನ್ ರೂಲ್ಸ್ #varthachakra #buildingahouse #gba #bbmp #bangalorerealestate
    Subscribe