ಬೆಂಗಳೂರು,ಮೇ.29-
ಇತ್ತೀಚೆಗೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಿಡಿಗೇಡಿಗಳ ಕಾಟ ಹೆಚ್ಚಾಗಿದೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ಕಚೇರಿಯನ್ನು ಸ್ಫೋಟಿಸುವುದಾಗಿ ಶೌಚಾಲಯದ ಕನ್ನಡಿ ಮೇಲೆ ಬೆದರಿಕೆ ಸಂದೇಶ ಬರೆಯಲಾಗಿದೆ.
ಈ ವಿಚಾರ ತಿಳಿಯುತ್ತಿದ್ದಂತೆ ಕೂಡಲೆ ಶ್ವಾನದಳ ಹಾಗೂ ಸಿಐಎಸ್ಎಫ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಆ ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಎನ್ನುವುದು ಪತ್ತೆಯಾಗಿದೆ.
ವಿಮಾನ ನಿಲ್ದಾಣದ ಆಲ್ಪಾ 3 ಬಿಲ್ಡಿಂಗ್ನಲ್ಲಿನ ಶೌಚಾಲಯದ ಕನ್ನಡಿ ಮೇಲೆ ಬರೆಯಲಾದ ಸಂದೇಶದಲ್ಲಿ 25 ನಿಮಿಷದಲ್ಲಿ ಕಟ್ಟಡಗಳು ಸ್ಟೋಟವಾಗುವುದಾಗಿ ಬೆದರಿಕೆ ಹಾಕಲಾಗಿತ್ತು. ಬೆಳಗ್ಗೆ ಶೌಚಾಲಯಕ್ಕೆ ಸಿಬ್ಬಂದಿ ತೆರಳಿದ ವೇಳೆ ಬರಹವನ್ನು ಕೂಡಲೆ ಈ ವಿಚಾರವನ್ನು ಭದ್ರತಾ ಪಡೆಗೆ ತಿಳಿಸಿದ್ದಾರೆ. ಬೆದರಿಕೆ ಸಂದೇಶದಿಂದ ಸಿಬ್ಬಂದಿ ಹಾಗೂ ಭದ್ರತಾ ಪಡೆ ಕೆಲಕಾಲ ಆತಂಕಕ್ಕೆ ಒಳಗಾಗಿದ್ದರು.
ಪರಿಶೀಲನೆ ಬಳಿಕ ಹುಸಿ ಬಾಂಬ್ ಸಂದೇಶ ಅಂತ ತಿಳಿದ ಮೇಲೆ ಸಿಬ್ಬಂದಿ ನಿಟ್ಟುಸಿರು ಬಿಟ್ಟರು. ಸಿಬ್ಬಂದಿಯಿಂದಲೇ ಹುಸಿ ಬೆದರಿಕೆ ಸಂದೇಶ ಬರೆದಿರುವ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ
Previous Articleಅಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ.
Next Article ಪ್ರಜ್ವಲ್ ಅಡಗುದಾಣ ಪತ್ತೆ ಹಚ್ಚಿದ SIT.