ಭಾರತದ ಯುವಕರಿಗೆ ಬೇಕಾಗಿರುವುದು ಭಾರತದ ನೈಜ ಇತಿಹಾಸವೇ ಹೊರತು ದಾಸ್ಯದ ಇತಿಹಾಸವಲ್ಲ ಎಂದು ಹೇಳಿರುವ ಇಂಧನ ಮಂತ್ರಿ ಸುನಿಲ್ ಕುಮಾರ್ ನಾವು ವಿವೇಕಾನಂದರ ವಂಶಸ್ಥರೇ ವಿನಃ ಮೊಘಲರ ವಂಶಸ್ಥರಲ್ಲ ಎಂದು ಕಿಡಿಕಾರಿದ್ದಾರೆ
ಪಠ್ಯಪುಸ್ತಕ ಪರಿಷ್ಕರಣೆಯ ವಿವಾದದ ಕುರಿತ ಮಾಜಿ ಸಿಎಂ ಸಿದ್ದರಾಮಯ್ಯ ಟೀಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ನಾರಾಯಣ ಗುರು ಕುರಿತು ಹಾಗು ಅವರ ಆದರ್ಶಗಳನ್ನು ಪಠ್ಯ ಪುಸ್ತಕದಿಂದ ನಮ್ಮ ಸರ್ಕಾರವು ತೆಗೆದು ಹಾಕಿಲ್ಲ. ನಾರಾಯಣ ಗುರುಗಳ ಬಗ್ಗೆ ನಮ್ಮ ಸರ್ಕಾರಕ್ಕೆ ಶ್ರದ್ದೆ, ಭಕ್ತಿ ಇದೆ. ಕಾಂಗ್ರೆಸ್ ಮತ್ತು ಇತರ ಪಕ್ಷಗಳು ವಿನಾಕಾರಣ ತಪ್ಪು ಮಾಹಿತಿಯನ್ನು ಸಾರ್ವಜನಿಕವಾಗಿ ಹರಡುತ್ತಿರುವುದು ಖಂಡನೀಯ ಎಂದು ಹೇಳಿದ್ದಾರೆ.
ಯುವ ಜನತೆಗೆ ಬೇಕಾಗಿರುವುದು ವಿವೇಕಾನಂದ, ವಿಜಯನಗರ, ನಾರಾಯಣ ಗುರು, ಶಂಕರಾಚಾರ್ಯರಂತಹ ದಾರ್ಶನಿಕರ ಜೀವನ ಕ್ರಮವೇ ಹೊರತು ಮೆಕಾಲೆ ಪ್ರೇರಿತ, ಮೊಘಲರ, ಟಿಪ್ಪು ಸುಲ್ತಾನರ ಇತಿಹಾಸವಲ್ಲ. ನಾವು ವಿವೇಕಾನಂದರ ವಂಶಸ್ಥರೇ ವಿನಃ ಮೊಘಲರ ವಂಶಸ್ಥರಲ್ಲ. ಯಾವ ತಪ್ಪನ್ನು ಕಾಂಗ್ರೆಸ್ ಮಾಡಿತ್ತೋ ಅದನ್ನು ಸರಿಪಡಿಸುವ ಕೆಲಸ ನಾವು ಮಾಡುತ್ತಿದ್ದೇವೆ ಎಂದು ತಿರುಗೇಟು ನೀಡಿದ್ದಾರೆ.