ಬೆಂಗಳೂರು,ಸೆ.11-
ನಿಗದಿತ ಅವಧಿ ಒಳಗೆ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಚುನಾವಣೆ ನಡೆಸುತ್ತಿರುವ ಗ್ರಾಮಕ್ಕೆ ಇದೀಗ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಅವಧಿ ಪೂರ್ಣಗೊಂಡರೂ ಚುನಾವಣೆ ಪ್ರಕ್ರಿಯೆ ಆರಂಭಿಸದ ಸಂಘದ ಚಟುವಟಿಕೆಗಳ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲು ಸಹಕಾರ ಇಲಾಖೆ ಸೂಚನೆ ನೀಡಿದೆ.
ಹಾಲಿ ಚುನಾಯಿತ ಮಂಡಳಿಯ ಅವಧಿ ಪೂರ್ಣಗೊಂಡಿದ್ದರು ನೂತನ ಮಂಡಳಿ ಆಯ್ಕೆಗೆ ಅಗತ್ಯವಿರುವ ಮತದಾರರ ಪಟ್ಟಿ ಪರಿಷ್ಕರಣೆ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಸಹಕಾರ ಇಲಾಖೆಗೆ ದೂರು ಸಲ್ಲಿಕೆಯಾಗಿದೆ.
ಈ ಹಿನ್ನೆಲೆಯಲ್ಲಿ ಸಹಕಾರ ಇಲಾಖೆಯ ನಿಬಂಧಕರು ಸಹಕಾರ ಇಲಾಖೆಯ ಆಡಳಿತ ಅಧಿಕಾರಿ ಚಂದ್ರಶೇಖರ್ ಅವರಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನೀಡಿ ಮಾಡಿ ನೀಡುವಂತೆ ಸೂಚಿಸಿದ್ದಾರೆ.
ಸರ್ಕಾರಿ ನೌಕರರ ಸಂಘದ ಚುನಾಯಿತ ಮಂಡಳಿಯ ಆಡಳಿತ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನೂತನ ಸಮಿತಿ ಆಯ್ಕೆಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲು ಸಂಘಕ್ಕೆ ಆಡಳಿತಾಧಿಕಾರಿ ನೇಮಕ ಮಾಡುವ ಕುರಿತಂತೆಯೂ ವರದಿ ನೀಡುವಂತೆ ಸೂಚಿಸಲಾಗಿದೆ.
Previous Articleರಾಹುಲ್ ಹೇಳಿಕೆಗೆ ಅಮಿತ್ ಶಾ ಕೆಂಡ.
Next Article ಸರ್ಕಾರಿ ನೌಕರರ ಸಂಘಕ್ಕೆ ಸಂಕಷ್ಟ