ಬೆಂಗಳೂರು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡ ಆರೋಪದ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಬೇಕು ಆದೇಶ ಬೇಕು ಎಂದು ಕೋರಿ ರಾಜ್ಯ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ಸಲ್ಲಿಸಿರುವ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಪ್ರಕರಣದ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಹೈಕೋರ್ಟಿಗೆ ರಿಟ್ ಸಲ್ಲಿಸಿದ್ದಾರೆ.
ಪ್ರಕರಣದಲ್ಲಿ ಆರೋಪಿಯಾಗಿರುವ ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿ ಆಗಿದ್ದಾರೆ ಹೀಗಾಗಿ ಅವರು ತನಿಖೆ ಮತ್ತು ತನಿಖಾ ಸಂಸ್ಥೆಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆಯಾದರೂ ಕೂಡ ಇದರಲ್ಲಿ ನ ಪೊಲೀಸರು ರಾಜ್ಯ ಸರ್ಕಾರದ ಅಧೀನದಲ್ಲಿ ಬರುತ್ತಾರೆ ಹೀಗಾಗಿ ಅವರಿಂದ ನಿಷ್ಪಕ್ಷಪಾತವಾಗಿ ತನಿಖೆ ಸಾಧ್ಯವಿಲ್ಲ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ಅತ್ಯಂತ ಪ್ರಭಾವಿಗಳ ವಿರುದ್ಧದ ಈ ಪ್ರಕರಣ ಪ್ರಾಮಾಣಿಕ ಹಾಗೂ ನಿಷ್ಪಕ್ಷಪಾತ ತನಿಖೆಗೆ ಒಳಪಡಬೇಕಾದ ಅಗತ್ಯವಿದೆ ಈ ಹಿನ್ನೆಲೆಯಲ್ಲಿ ಪ್ರಕರಣದ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಕೋರಿದ್ದಾರೆ. ಈ ಅರ್ಜಿಯ ವಿಚಾರಣೆ ಮುಂದಿನ ವಾರ ಬರುವ ಸಾಧ್ಯತೆ ಇದೆ