ಬೆಂಗಳೂರು,ಏ.16:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇತರರಿಗೆ ನೋಟಿಸ್ ಜಾರಿಗೊಳಿಸಿದೆ.
ಈ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಿಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕ ಸದಸ್ಯ ಪೀಠ ವಜಾಗೊಳಿಸಿತ್ತು. ಈ ಆದೇಶ ಪ್ರಶ್ನಿಸಿ ಅವರು ಮೇಲ್ಮನವಿ ಸಲ್ಲಿಸಿದ್ದಾರೆ.
ಈ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗಿಯ ಪೀಠ
ಪ್ರಕರಣದಲ್ಲಿ ಪ್ರತಿವಾದಿಗಳಾಗಿರುವ ಕೇಂದ್ರ ಸರ್ಕಾರ, ಸಿಬಿಐ, ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ, ಜಮೀನಿನ ಮೂಲ ಮಾಲೀಕ ದೇವರಾಜು ಅವರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಏಪ್ರಿಲ್ 28ಕ್ಕೆ ಮುಂದೂಡಿತು.
Previous Articleಮುಡಾ ಸುಳಿಯಲ್ಲಿ ಸಿದ್ದರಾಮಯ್ಯ ವಿಲವಿಲ !
Next Article ಎನ್ ಕೌಂಟರ್ ಸಮರ್ಥಿಸಿದ ಕಮೀಷನರ್