ಬೆಂಗಳೂರು,ಆ.23:
ನಿವೇಶನ ಹಂಚಿಕೆ ಅಕ್ರಮ ಆರೋಪದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಮತ್ತೊಂದು ಪ್ರಕರಣದಲ್ಲಿ ಕಾನೂನಿನ ಕುಣಿಕೆಯೊಳಗೆ ಸಿಲುಕಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ದಾಖಲಾಗಿರುವ
ಪ್ರಕರಣದ ತನಿಖೆಯಲ್ಲಿ ಲೋಕಾಯುಕ್ತ ಎಡಿಜಿಪಿ
ನಿರ್ಲಕ್ಷ್ಯ ತೋರಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಜನಪ್ರತಿನಿಧಿಗಳ ನ್ಯಾಯಾಲಯ ಕೂಡಲೇ ಶೋಕಾಸ್ ನೋಟೀಸ್ ಜಾರಿ ಮಾಡಿ ಮುಂದಿನ ವಿಚಾರಣೆ ಸಂದರ್ಭದಲ್ಲಿ ಅವರು ಖುದ್ದು ಹಾಜಾರಾಗಲು ಸೂಚಿಸಬೇಕು ಎಂದು ಆದೇಶಿಸಿದೆ.
ಸಿದ್ದರಾಮಯ್ಯ ಅವರು ಮೊದಲ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದ ವೇಳೆ ತಮ್ಮ ಅತ್ಯಂತ ಆಪ್ತ ಸ್ನೇಹಿತ ಕಿಂಗ್ಸ್ ಕೋರ್ಟ್ ವಿವೇಕ್ ಅವರನ್ನು ಟರ್ಪ್ ಕ್ಲಬ್ ನ ಸ್ಟಿವರ್ಡ್ ಹುದ್ದೆಗೆ ನೇಮಿಸಲಾಗಿದೆ ಇದಕ್ಕಾಗಿ ಅವರಿಂದ ಒಂದು ಕೋಟಿ ಮೂವತ್ತು ಲಕ್ಷ ರೂಪಾಯಿ ಗಳನ್ನು ಚೆಕ್ ರೂಪದಲ್ಲಿ ಪಡೆದು ಟರ್ಫ್ ಕ್ಲಬ್‌ನ ಅತ್ಯಂತ ಆಯಕಟ್ಟಿನ ಹುದ್ದೆಗೆ ನಿಯೋಜಿಸಲಾಗಿದೆ.ಈ ಮೂಲಕ ಪ್ರಜಾ ಪ್ರತಿನಿಧಿಗಳ ಕಾಯ್ದೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿಯ ಎನ್ ಆರ್ ರಮೇಶ್ ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದರು ಈ ದೂರಿನ ಬಗ್ಗೆ ತನಿಖೆ ನಡೆಸಿದ ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ.
ಇದನ್ನು ಪ್ರಶ್ನಿಸಿ ರಮೇಶ್ ಅವರು ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ವೇಳೆ ನ್ಯಾಯ ಪೀಠ ಲೋಕಾಯುಕ್ತ ಪೊಲೀಸ್ ನಡೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದೆ.
Previous Articleರಾಜ್ಯ ಸರ್ಕಾರದೊಂದಿಗೆ ಸಂಘರ್ಷಕ್ಕಿಳಿದ ರಾಜ್ಯಪಾಲ.
Next Article ರಾಜ್ಯ ಸರ್ಕಾರ ಬಿದ್ದು ಹೋದರೆ…