Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿ.ಟಿ.ರವಿ ವಿರುದ್ಧ ಎಫ್ಐಆರ್
    ಅಪರಾಧ

    ಸಿ.ಟಿ.ರವಿ ವಿರುದ್ಧ ಎಫ್ಐಆರ್

    vartha chakraBy vartha chakraಡಿಸೆಂಬರ್ 19, 202425 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಳಗಾವಿ :
    ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ವಿಧಾನ ಪರಿಷತ್ ನಲ್ಲಿ ಗುರುವಾರ ಅಶ್ಲೀಲ ಪದ ಬಳಕೆ ಮಾಡಿದ ಆರೋಪ ಮೇಲೆ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ
    ಲಕ್ಷ್ಮೀ ಹೆಬ್ಬಾಳಕರ್ ನೀಡಿದ್ದ ದೂರಿನ್ವಯ ಪ್ರಕರಣ ದಾಖಲಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಅಂಬೇಡ್ಕರ್ ಕುರಿತು ನೀಡಿದ್ದಾರೆ ಎನ್ನಲಾದ ಹೇಳಿಕೆ ಸಂಬಂಧ ವಿಧಾನ ಪರಿಷತ್ ನಲ್ಲಿ ಗುರುವಾರ ಬೆಳಗ್ಗೆ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸಿ.ಟಿ.ರವಿ ಲಕ್ಷ್ಮೀ ಹೆಬ್ಬಾಳಕರ್ ಅವರ ಕುರಿತು ಅವಹೇಳನಕಾರಿ ಪದಬಳಸಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದ ಸಂಬಂಧ ಕಾಂಗ್ರೆಸ್ ಮುಖಂಡರು ಈಗಾಗಲೇ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೂ ದೂರು ನೀಡಿದ್ದಾರೆ. ಸಿ.ಟಿ.ರವಿ ಅವರನ್ನು ಸದನದಿಂದ ಅಮಾನತುಗೊಳಿಸಬೇಕು. ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
    ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿರುವುದು ಕ್ರಿಮಿನಲ್ ಅಪರಾಧ ಮತ್ತು ಲೈಂಗಿಕ ದೌರ್ಜನ್ಯಕ್ಕೆ ಸಮನಾದುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
    ಹೊರಟ್ಟಿ ಭೇಟಿಯಾದ ಡಿಸಿಎಂ:
    ಸಚಿವರ ವಿರುದ್ಧ ಸಿ.ಟಿ.ರವಿ ಬಳಸಿದ ಪ್ರಕರಣ ನಡೆಯುತ್ತಿದ್ದಂತೆ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಕಾನೂನು ಸಚಿವ ಎಚ್.ಕೆ.ಪಾಟೀಲ್, ಸಚಿವ ಹಾಗೂ ಪರಿಷತ್ ನ ಕಾಂಗ್ರೆಸ್ ಸಭಾ ನಾಯಕ ಬೋಸರಾಜು, ಸಚಿವ ರಾದ ಈಶ್ವರ್ ಖಂಡ್ರೆ, ಪ್ರಿಯಾಂಕ್ ಖರ್ಗೆ, ಶಿವರಾಜ್ ತಂಡಗಡಿ, ಡಾ.ಶರಣಪ್ರಕಾಶ್ ಪಾಟೀಲ್, ಹಿರಿಯ ಸದಸ್ಯರಾದ ಹರಿಪ್ರಸಾದ್, ನಾಗರಾಜ್ ಯಾದವ್, ಉಮಾಶ್ರೀ, ಶಾಸಕಿಯರಾದ ನಯನ ಮೋಟಮ್ಮ, ರೂಪಾ ಶಶಿಧರ್, ಲತಾ ಮಲ್ಲಿಕಾರ್ಜುನ್, ಅನ್ನಪೂರ್ಣ ತುಕಾರಂ ಸೇರಿದಂತೆ ಕಾಂಗ್ರೆಸ್ ಶಾಸಕರು ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ಸಿ.ಟಿ.ರವಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು.

    ಕಾಂಗ್ರೆಸ್ ಕಾನೂನು ಬಸವರಾಜ ಹೊರಟ್ಟಿ ಬಿಜೆಪಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಚಳಿ ಬಿಡಿಸಿದ ಲೋಕಾಯುಕ್ತ.
    Next Article ಸಿ.ಟಿ.ರವಿ ಬಂಧನ.
    vartha chakra
    • Website

    Related Posts

    ಶಕ್ತಿ ಪ್ರದರ್ಶನಕ್ಕೆ ಮುಂದಾದರಾ ಡಿಸಿಎಂ

    ಡಿಸೆಂಬರ್ 13, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಡಿಸೆಂಬರ್ 12, 2025

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    ಡಿಸೆಂಬರ್ 9, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಶಕ್ತಿ ಪ್ರದರ್ಶನಕ್ಕೆ ಮುಂದಾದರಾ ಡಿಸಿಎಂ

    ಕಡ್ಡಾಯವಾಗಿ ಕನ್ನಡ ನಾಮಫಲಕ ಅಳಡಿಸದಿದ್ದರೆ ದಂಡ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • loto188.pro ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • aviator_ktEt ರಲ್ಲಿ ಬಿಜೆಪಿಯವರು ಪಿಕ್ ಪಾಕೆಟ್ ಮಾಡಿದ್ದಾರಂತೆ | BJP
    • kypit kyrsovyu_zdKl ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    Latest Kannada News

    ಶಕ್ತಿ ಪ್ರದರ್ಶನಕ್ಕೆ ಮುಂದಾದರಾ ಡಿಸಿಎಂ

    ಡಿಸೆಂಬರ್ 13, 2025

    ಕಡ್ಡಾಯವಾಗಿ ಕನ್ನಡ ನಾಮಫಲಕ ಅಳಡಿಸದಿದ್ದರೆ ದಂಡ

    ಡಿಸೆಂಬರ್ 13, 2025

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    14 ಬಾರಿ ಕಚ್ಚಿದ ಹಾವು ಕನಸಲ್ಲೂ ಬಂದಿತ್ತಂತೆ! #varthachakra #snakes #mythicalcreatures #snakeencounters
    Subscribe